ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ ನಡೆಸುವಂತಿಲ್ಲ: ಸಚಿವ ಸಂಪುಟ ಸಭೆ ತೀರ್ಮಾನ

Date:

Advertisements

ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಕರ್ನಾಟಕದಲ್ಲಿ ಸಿಬಿಐ ಸ್ವಯಂ ಪ್ರೇರಿತವಾಗಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಇನ್ನು ಮುಂದೆ ಅವಕಾಶ ಇಲ್ಲ.

ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ ನಡೆಸಲು ಅವಕಾಶ ಇಲ್ಲ ಎಂದು ಹೊರಡಿಸಿದ್ದ ಆದೇಶವನ್ನು ಈ ಹಿಂದಿನ ಬಿಜೆಪಿ ಸರ್ಕಾರ ವಾಪಸ್ ಪಡೆದಿದ್ದನ್ನು ರದ್ದುಪಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ರಾಜ್ಯ ಸರ್ಕಾರದ ಅನುಮತಿಗೆ ಕಾಯದೆ ತನಿಖೆ ನಡೆಸಬಹುದು ಎಂದು ಆದೇಶ ಹೊರಡಿಸಿದ್ದ ಈ ಹಿಂದಿನ ಸರ್ಕಾರ ಈ ಪ್ರಕರಣ ಮಾತ್ರವಲ್ಲದೆ ಯಾವುದೇ ಕ್ರಿಮಿನಲ್ ಪ್ರಕರಣಗಳ ತನಿಖೆಗೆ ಸಿಬಿಐ ರಾಜ್ಯ ಸರ್ಕಾರದ ಅನುಮತಿ ಗೆ ಕಾಯುವಂತಿಲ್ಲ ಎಂದು ತಿಳಿಸಿತ್ತು.

Advertisements

ಕೇಂದ್ರದಲ್ಲಿ ಈ ಮೊದಲು ಅಸ್ತಿತ್ವದಲ್ಲಿದ್ದ ಸರ್ಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡು ಕ್ರಿಮಿನಲ್ ಪ್ರಕರಣದ ತನಿಖೆ ಹೆಸರಲ್ಲಿ ರಾಜ್ಯದ ಪ್ರಭಾವಿ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ಯತ್ನಿಸುತ್ತಿದೆ ಎಂದು ಹೇಳಿ ದೆಹಲಿ ಪೊಲೀಸ್ ಕಾಯ್ದೆ ಅನ್ಯಾಯ ರಚನೆಯಾಗಿರುವ ಸಿಬಿಐ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ರಾಜ್ಯಕ್ಕೆ ಸಂಬಂಧಪಟ್ಟ ಪ್ರಕರಣಗಳ ತನಿಖೆಗೆ ಅವಕಾಶ ಇಲ್ಲ ಎಂಬ ತೀರ್ಮಾನ ಕೈಗೊಂಡಿತ್ತು.

ಆದರೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಈ ಆದೇಶವನ್ನು ವಾಪಸ್ ಪಡೆದಿದ್ದು ಇದೀಗ ಮತ್ತೊಂದು ಆದೇಶದ ಮೂಲಕ ಹಿಂದಿನ ಸರ್ಕಾರದ ಆದೇಶವನ್ನು ಮಾರ್ಪಾಡು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

“ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಸಿಬಿಐ ಸೇರಿದಂತೆ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಅನೇಕ ಪ್ರಕರಣಗಳಲ್ಲಿ ಸಿಬಿಐ ಪೂರ್ವಗ್ರಹ ಪೀಡಿತವಾಗಿ ಕೆಲಸ ಮಾಡುತ್ತಿರುವುದನ್ನು ಗಮನಿಸಿದ್ದೇವೆ. ಪರೇಶ್ ಮೇಸ್ತಾ ಹತ್ಯೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ತನಿಖೆ ನಡೆಸಲು ಸಿಬಿಐಗೆ ನೀಡಲಾಗಿತ್ತು. ಆದರೆ ಈ ಯಾವುದೇ ಪ್ರಕರಣಗಳ ತನಿಖೆಯನ್ನು ಸಿಬಿಐ ಇಲ್ಲಿಯವರೆಗೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಸಂಸ್ಥೆ ರಾಜ್ಯ ಸರ್ಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯದಲ್ಲಿ ತನಿಖೆ ನಡೆಸಲು ಅವಕಾಶ ಇಲ್ಲ ಎಂಬ ಆದೇಶ ಹೊರಡಿಸಲು ನಿರ್ಧರಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪವನ್ – ಕಂಗನಾ ಎಂಬ ‘ಬುದ್ಧಿ’ವಂತರು ಮತ್ತು ಬಿಜೆಪಿ

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ

ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಚ್‌ ಕೆ ಪಾಟೀಲ್‌ ತಿಳಿಸಿದರು.

“ಮಾನವನ ಹಸ್ತಕ್ಷೇಪ ಮಾಡುತ್ತಿರುವುದರಿಂದಾಗಿ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ ಜೀವ ಸಂಕುಲಕ್ಕೂ ಅಪಾಯ ಎದುರಾಗಲಿದೆ ಎನ್ನುವುದು ಪರಿಸರ ತಜ್ಞರ ಆತಂಕಕ್ಕೆ ಕಾರಣವಾಗಿತ್ತು. ಹಾಗಾಗಿ ಇದಕ್ಕಾಗಿ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಭಾರಿ ವಿರೋಧ ಮಧ್ಯೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ” ಎಂದರು.

ಇತ್ತೀಚೆಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿಸಲಾಗಿತ್ತು. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೇಂದ್ರ ಸರ್ಕಾರದ ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಇತ್ತೀಚೆಗೆ ಹೇಳಿದ್ದರು. ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಉದ್ದೇಶದಿಂದಾಗಿ ಪರಿಸರ ತಜ್ಞ ಮಾಧವ ಗಾಡ್ಗಿಲ್ ಎಂಬುವವರ ಅಧ್ಯಕ್ಷತೆಯಲ್ಲಿ ಕೆಂದ್ರ ಸರ್ಕಾರ ಒಂದು ಸಮಿತಿ ರಚಿಸಿತ್ತು. ಅವರು 2011ರ ಆಗಸ್ಟ್ 31ರಂದು ಸರ್ಕಾರಕ್ಕೆ ತಮ್ಮ ವರದಿ ಸಲ್ಲಿಸಿದ್ದರು.

ರಾಜ್ಯಪಾಲರ ಕಾರ್ಯವೈಖರಿಗೆ ಅಸಮಾಧಾನ

ಇತ್ತೀಚೆಗೆ ರಾಜ್ಯದ ರಾಜ್ಯಪಾಲರು ಸಣ್ಣ ಸಣ್ಣ ವಿಷಯಗಳಿಗೂ ಸರ್ಕಾರಕ್ಕೆ ಪತ್ರ ಬರೆದು ವಿವರಣೆ ಕೇಳುತ್ತಿದ್ದಾರೆ ಆಡಳಿತದ ಪ್ರತಿ ಹಂತದಲ್ಲೂ ಅವರ ನಡೆಸುತ್ತಿರುವ ಹಸ್ತಕ್ಷೇಪದ ಬಗ್ಗೆ ಸಂಪುಟ ಸಭೆ ತೀವ್ರ ಕಳವಳ ವ್ಯಕ್ತಪಡಿಸಿತು ಎಂದು ಎಚ್‌ ಕೆ ಪಾಟೀಲ್ ತಿಳಿಸಿದರು.‌

“ರಾಜ್ಯ ಸಚಿವ ಸಂಪುಟ ದ ಸಲಹೆಯ ಮೇರೆಗೆ ರಾಜ್ಯಪಾಲರು ಕರ್ತವ್ಯ ನಿರ್ವಹಿಸಬೇಕು ಆದರೆ ಅವರು ತಮ್ಮ ವಿವೇಚನಾ ಅಧಿಕಾರ ಎಂಬ ಹೆಸರಿನಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಹಸ್ತಕ್ಷೇಪ ಮಾಡಿ ವಿವರಣೆ ಕೇಳುತ್ತಿದ್ದಾರೆ. ಇದು ಪ್ರಜಾತಂತ್ರ ವಿರೋಧಿ ನಡವಳಿಕೆಯಾಗಿದೆ” ಎಂದು ಅಭಿಪ್ರಾಯಪಟ್ಟರು.

“ಸಂಪುಟ ಸಭೆ ರಾಜ್ಯ ಸಚಿವ ಸಂಪುಟಕ್ಕೆ ಮಾಹಿತಿ ನೀಡದೆ ರಾಜ್ಯಪಾಲರ ಯಾವುದಕ್ಕೆ ಪತ್ರಕ್ಕೆ ವಿವರಣೆ ನೀಡಬಾರದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲು ತೀರ್ಮಾನಿಸಲಾಗಿದೆ. ರಾಜ್ಯಪಾಲರು ಬರೆಯುವ ಪತ್ರ ಮತ್ತು ನೀಡುವ ಸೂಚನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂಪುಟ ಸಭೆಯ ಗಮನಕ್ಕೆ ತರಬೇಕು ಸಂಪುಟ ಸಭೆಯಲ್ಲಿ ಈ ಕುರಿತು ಕೈಗೊಂಡ ತೀರ್ಮಾನದ ಆಧಾರದಲ್ಲಿ ಮಾಹಿತಿ ನೀಡಲು ನಿರ್ಧರಿಸಲಾಗಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X