ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಡಿಕೆ ಶಿವಕುಮಾರ್ ಹೂಡಿಕೆ: ವಿವರ ಕೇಳಿದ ಸಿಬಿಐ

Date:

Advertisements

ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಜೈಹಿಂದ್ ಖಾಸಗಿ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿ ಮಾಡಿರುವುದಾಗಿ ವರದಿಯಾಗಿದೆ.

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐನ ಬೆಂಗಳೂರು ಘಟಕವು ಜೈ ಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಬಿ ಎಸ್ ಶಿಜು ಅವರಿಗೆ ನೋಟಿಸ್ ಕಳುಹಿಸಿದ್ದು, ಹೂಡಿಕೆಯ ವಿವರಗಳನ್ನು ಸಲ್ಲಿಸುವಂತೆ ತಿಳಿಸಿದೆ.

2024ರ ಜನವರಿ 11ರಂದು ತನಿಖಾಧಿಕಾರಿ ಕೋರಿದ ಎಲ್ಲ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ತಿಳಿಸಿದೆ. ಇದಲ್ಲದೆ ಸಿಆರ್​ಪಿಸಿ 91ರಡಿ ಡಿಸಿಎಂ ಡಿಕೆಶಿ ಸೇರಿದಂತೆ 30ಕ್ಕೂ ಹೆಚ್ಚು ಜನರಿಗೆ ನೋಟಿಸ್​ ನೀಡಲಾಗಿದೆ.

Advertisements

ಕೇರಳ ಮೂಲದ ಚಾನಲ್‌ನಲ್ಲಿ ಹೂಡಿಕೆ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಹೂಡಿಕೆಗೆ ಹಾಕಲಾದ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ ಸಿಬಿಐ ಡಿಸಿಎಂ ಡಿಕೆ ಶಿವಕುಮಾರ್​​​ ಹಾಗೂ ಪತ್ನಿ ಉಷಾ ಶಿವಕುಮಾರ್​ ಸೇರಿದಂತೆ ಬಂಡವಾಳ ಹೂಡಿರುವ 30ಕ್ಕೂ ಹೆಚ್ಚು ಜನರಿಗೆ ನೋಟಿಸ್​ ನೀಡಿದೆ.

ಸಿಆರ್‌ಪಿಸಿ ಸೆಕ್ಷನ್ 91ರ ಅಡಿಯಲ್ಲಿ ಹೊರಡಿಸಲಾದ ತನ್ನ ನೋಟಿಸ್‌ನಲ್ಲಿ, ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವುಗಳನ್ನು ಮಾಡಿದ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಜೈ ಹಿಂದ್ ಚಾನಲ್‌ಗೆ ಹೇಳಿದೆ. ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲ ಷೇರು ವಹಿವಾಟುಗಳ ವಿವರ ನೀಡುವಂತೆ ಸಿಬಿಐ ಸೂಚಿಸಿದೆ.

ಇದನ್ನು ಓದಿದ್ದೀರಾ? ಬನಾರಸ್ ವಿವಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಮೂವರ ಬಂಧನ

ಜೈಹಿಂದ್ ಚಾನಲ್​ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್. ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದು, “ಎಲ್ಲ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ಭಾಗಿಯಾಗಿಲ್ಲ” ಎಂದು ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿರುವ ಅವರು ಅವರು, “ಈ ಪ್ರಕರಣವನ್ನು ಮತ್ತೆ ಕೆದಕಿರುವುದು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ಡಿಕೆ ಶಿವಕುಮಾರ್ ಅವರಿಗೆ ಕಿರುಕುಳ ಮಾಡುವ ಪ್ರಯತ್ನವಾಗಿದೆ” ಎಂದು ದೂರಿದ್ದಾರೆ.

ಶಿವಕುಮಾರ್ ವಿರುದ್ಧ ಸಿಬಿಐ 2020ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018ರ ನಡುವೆ ಅವರು 74 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಿದ್ದರು. ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X