ಸೋನಮ್ ವಾಂಗ್‌ಚುಕ್, ಸಂಸ್ಥೆಯ ವಿರುದ್ಧ ಎಫ್‌ಸಿಆರ್‌ಎ ಉಲ್ಲಂಘನೆ ಆರೋಪ; ಸಿಬಿಐ ತನಿಖೆ

Date:

Advertisements

ಲಡಾಖ್‌ಗೆ ರಾಜ್ಯತ್ವ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತು ಅವರು ಸ್ಥಾಪಿಸಿದ ಸಂಸ್ಥೆಯ ವಿರುದ್ಧ ವಿದೇಶಿ ಹಣಕಾಸು ಕಾನೂನು ಉಲ್ಲಂಘನೆ ಆರೋಪದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಪ್ರಾಥಮಿಕ ವಿಚಾರಣೆ (ಪಿಇ) ನಡೆಸುತ್ತಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಇನ್ನು ಈ ಹಿಂದೆಯೇ ಈ ಬಗ್ಗೆ ಮಾತನಾಡಿರುವ ಸೋನಮ್ ವಾಂಗ್‌ಚುಕ್ ಅವರು ಸ್ಪಷ್ಟನೆಯನ್ನು ನೀಡಿದ್ದರು. “ಸಂಸ್ಥೆಯು ವಿದೇಶಿ ಹಣವನ್ನು ಪಡೆದಿರುವುದು ನಿಜ. ಆದರೆ ನಮ್ಮ ಸಂಸ್ಥೆಯ ಸಂಶೋಧನೆಯನ್ನು ವಿದೇಶದ ಸಂಸ್ಥೆಗೆ ಮಾರಾಟ ಮಾಡಿ ಅದರ ಪಾವತಿಯನ್ನು ಪಡೆದಿದ್ದೇವೆಯೇ ಹೊರತು, ದತ್ತಿ ಹಣವಲ್ಲ” ಎಂದು ತಿಳಿಸಿದ್ದರು. ಹಾಗೆಯೇ ಲಡಾಖ್‌ ಹೋರಾಟ ಆರಂಭಿಸಿದ ಬಳಿಕ ನಿರಂತರವಾಗಿ ಕೇಂದ್ರ ಸರ್ಕಾರ ತಮ್ಮನ್ನು ಗುರಿಯಾಗಿಸಿಕೊಂಡಿದೆ ಎಂದು ಸೋನಮ್ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಲಡಾಖ್ ಹಿಂಸಾಚಾರಕ್ಕೆ ಸೋನಮ್ ವಾಂಗ್‌ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ

ಸುಮಾರು ಎರಡು ತಿಂಗಳ ಹಿಂದೆ ವಾಂಗ್‌ಚುಕ್ ಮತ್ತು ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ ಲಡಾಖ್ (ಎಚ್‌ಐಐಎಎಲ್) ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಸದ್ಯ ಲಡಾಖ್ ಹಿಂಸಾಚಾರದ ನಡುವೆ ಸುದ್ದಿ ಮುನ್ನಲೆಗೆ ಬಂದಿದೆ. ಸದ್ಯ ತನಿಖೆಯ ಭಾಗವಾಗಿ ಸಿಬಿಐ ಎಚ್‌ಐಐಎಎಲ್ ಮತ್ತು ವಾಂಗ್‌ಚುಕ್‌ನ ಹಣಕಾಸು ವಹಿವಾಟುಗಳನ್ನು ಪರಿಶೀಲಿಸುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

2022 ಮತ್ತು 2024ರ ನಡುವೆ ಪಡೆದ ವಿದೇಶಿ ನಿಧಿಗಳ ವಿವರಗಳನ್ನು ಪಡೆಯಲು ಸಿಬಿಐ ತಂಡವು ಕಳೆದ ವಾರ ಎಚ್‌ಐಐಎಎಲ್‌ಗೆ ಮತ್ತು ಲಡಾಖ್‌ನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಳವಳಿ (SECMOL) ಗೆ ಭೇಟಿ ನೀಡಿದೆ ಎಂದು ಸೋನಮ್ ತಿಳಿಸಿದ್ದಾರೆ.

“ವಿದೇಶಿ ನಿಧಿಗಳನ್ನು ಸ್ವೀಕರಿಸಲು ನಾವು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (FCRA) ಅಡಿಯಲ್ಲಿ ಅನುಮತಿ ಪಡೆದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಾವು ವಿದೇಶಿ ನಿಧಿಗಳ ಮೇಲೆ ಅವಲಂಬಿತರಾಗಲು ಬಯಸಲ್ಲ. ನಾನು ನಮ್ಮ ಯೋಜನೆಯನ್ನು ರಫ್ತು ಮಾಡಿ, ಆದಾಯವನ್ನು ಗಳಿಸಿದ್ದೇವೆ. ಅದನ್ನು ವಿದೇಶಿ ಕೊಡುಗೆ ಎಂದು ಭಾವಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

Download Eedina App Android / iOS

X