ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ

Date:

Advertisements
ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ

ಸಾಮಾಜಿಕ ಕಾರ್ಯಕರ್ತ ಮತ್ತು ಈಕ್ವಿಟಿ ಸ್ಟಡೀಸ್ ಚಿಂತನ ಕೇಂದ್ರದ ನಿರ್ದೇಶಕ ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡಸಿದೆ. ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆ ಮತ್ತು ಅದರ ನಿರ್ದೇಶಕರಾದ ಹರ್ಷ ಮಂದರ್ ಮೇಲೆ ವಿದೇಶಿ ಅನುದಾನ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ)  ನಿಯಮಗಳ ಉಲ್ಲಂಘನೆ ಆರೋಪ ಹೊರಿಸಲಾಗಿದೆ. 

ದಾಳಿಯ ಸಂದರ್ಭದಲ್ಲಿ ಪ್ರಾಥಮಿಕ ತನಿಖೆಯ ಅಂಗವಾಗಿ ಸಿಬಿಐ ಕಚೇರಿಯ ಸಿಬ್ಬಂದಿ ಸೇರಿದಂತೆ ಹಲವರನ್ನು ಪ್ರಶ್ನಿಸಿದೆ. ದೆಹಲಿಯ ಅದ್ಚಿನಿ ಪ್ರದೇಶದಲ್ಲಿರುವ ಅಧ್ಯಯನ ಕೇಂದ್ರ ಮತ್ತು ವಸಂತ್ ಕುಂಜ್ ಪ್ರದೇಶದಲ್ಲಿರುವ ಹರ್ಷ ಮಂದರ್ ಮನೆ ಮೇಲೆ ದಾಳಿ ನಡೆಸಲಾಗಿದೆ.

ಕಳೆದ ಜೂನ್‌ನಲ್ಲಿ ಕೇಂದ್ರ ಗೃಹ ಸಚಿವಾಲಯ ಚಿಂತನ ಕೇಂದ್ರದ ವಿದೇಶಿ ಅನುದಾನ (ನಿಯಂತ್ರಣ)  ಕಾಯ್ದೆಯ ಪರವಾನಗಿಯನ್ನು 180 ದಿನಗಳವರೆಗೆ ರದ್ದುಪಡಿಸಿತ್ತು. ಮಂದರ್ ನಿಯಮಿತವಾಗಿ ಅನೇಕ ದಿನಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು ಎಂದು ಆಗ ಸಚಿವಾಲಯ ತಿಳಿಸಿತ್ತು.

Advertisements

2011-12ರಿಂದ 2017-18ರ ನಡುವೆ ವೃತ್ತಿಪರ ರಶೀದಿ/ ಪಾವತಿಯಲ್ಲಿ ಮಂದರ್  ರೂ 12,64,671 ವಿದೇಶಿ ಅನುದಾನವನ್ನು ಸಂಸ್ಥೆಯ  ವಿದೇಶಿ ಅನುದಾನ (ನಿಯಂತ್ರಣ) ಕಾಯ್ದೆ ಖಾತೆಗೆ ಸ್ವೀಕರಿಸಿದ್ದಾರೆ. ಇದು (ಎಫ್‌ಸಿಆರ್‌ಎ) ವಿದೇಶಿ ಅನುದಾನ (ನಿಯಂತ್ರಣ) ಕಾಯ್ದೆ ನಿಯಮದ ಉಲ್ಲಂಘನೆ ಎಂದು ಗೃಹ ಸಚಿವಾಲಯ ಆರೋಪಿಸಿದೆ.

ಹರ್ಷ ಮಂದರ್ ನಿವೃತ್ತ ಐಎಎಸ್ ಅಧಿಕಾರಿ ಎನ್ನುವುದನ್ನೂ ನೆನಪಿಟ್ಟುಕೊಳ್ಳಬೇಕಿದೆ. ಕಳೆದ ವರ್ಷ ಮಂದರ್‌ ಸ್ಥಾಪಿಸಿದ್ದ ಸರ್ಕಾರೇತರ ಸಂಘಟನೆ ಅಮನ್ ಬಿರಾದರಿ ಟ್ರಸ್ಟ್‌ಗೆ ವಿದೇಶಿ ಅನುದಾನದ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X