ತುಮಕೂರು | ಕೇಂದ್ರದ ಕಣ್ಣಿಗೆ ರಾಜ್ಯದ ಬರ ಕಾಣುತ್ತಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್

Date:

ಕೇಂದ್ರ ಸರ್ಕಾರದಿಂದ ಬರ ನಿರ್ವಹಣೆಗೆ ಇನ್ನು ಯಾವುದೇ ನೆರವು ಬಂದಿಲ್ಲ. ಕೇಂದ್ರ ತಂಡದವರು ಬಂದು ನೋಡಿಕೊಂಡು ಹೋಗಿದ್ದಾರೆ. ಹಸಿರು ಚೆನ್ನಾಗಿದೆ ಅಂತ ಅವರು ವರದಿ ಬರೆದುಕೊಂಡು ಹೋಗಿದ್ದಾರೆ. ಅವರ ಕಣ್ಣಿಗೆ ಬರ ಕಾಣಿಸಿಲ್ಲ, ನಮ್ಮ ಕಣ್ಣಿಗೆ ಬರ ಕಾಣಿಸ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಕಿಡಿಕಾರಿದ್ದಾರೆ.

- Advertisement -

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯದ ಎಲ್ಲ ತಾಲೂಕಿನಲ್ಲಿ ಬರದ ಛಾಯೆ ಕಾಣಿಸುತ್ತಿದೆ. ಹಾಗಾಗಿ 17,000 ಕೋಟಿ ರೂ. ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಪರಿಹಾರ ನೆರವು ಬರುವ ನಿರೀಕ್ಷೆಯಲ್ಲಿದ್ದೆವೆ. ಅವರು ಎಷ್ಟು ಕೊಡ್ತಾರೆ ಗೊತ್ತಿಲ್ಲ. ರಾಜ್ಯದಲ್ಲಿ ಸುಮಾರು 36 ಸಾವಿರ ಕೋಟಿ ರೂ. ನಷ್ಟ ಆಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

“ರಾಜ್ಯದಲ್ಲಿ 226 ತಾಲೂಕುಗಳಲ್ಲಿ 200ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದೆ. ನಮಗೆ ಹಣಕಾಸಿನ ಕೊರತೆಯಂತು ಸದ್ಯಕ್ಕೆ ಇಲ್ಲ. ಈಗಾಗಲೇ ಸುಮಾರು 550 ಕೋಟಿ ರೂ. ಹಣ ಎಲ್ಲ ಜಿಲ್ಲಾಧಿಕಾರಿಗಳ ಬ್ಯಾಂಕ್ ಖಾತೆಯಲ್ಲಿದೆ” ಎಂದು ತಿಳಿಸಿದರು.

“ಆ ಹಣವನ್ನು ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಗುಳೆ ಹೋಗುವಂತಹವರಿಗೆ ಕೆಲಸ ಒದಗಿಸುವ ಕಾರ್ಯಕ್ಕೆ ಮೀಸಲಿಡಲಾಗಿದೆ” ಎಂದು ವಿವರಿಸಿದರು.

“ತುಮಕೂರು ಜಿಲ್ಲೆಯ 10 ತಾಲೂಕುಗಳನ್ನು ಬರಪೀಡಿತ ಪ್ರದೇಶ ಅಂತ ಘೋಷಣೆ ಮಾಡಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

ಮುಂಡಗೋಡ | ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನಗಳ ದಸರಾ ಶಿಬಿರ

ಮುಂಡಗೋಡ: ಲೊಯೊಲಾ ವಿಕಾಸ ಕೇಂದ್ರದ ವಸತಿ ನಿಲಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ...