ರಾಜ್ಯದ ಬರ ಪರಿಹಾರ ಮನವಿಗೆ ಡಿ.23ರಂದು ಕೇಂದ್ರದಿಂದ ಸಭೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

Date:

  • ನ್ಯಾಫೆಡ್ ಮುಖಾಂತರ ಕೊಬ್ಬರಿ ಬೆಳೆ ಖರೀದಿಗೂ ಮನವಿ
  • ರೂ. 18,171 ಕೋಟಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯ

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವರಾದ ಅಜುರ್ನ್ ಮುಂಡಾ ಅವರನ್ನು ಭೇಟಿಯಾದ ಬಳಿಕ ಪತ್ರಕರ್ತರ ಜೊತೆ ಅವರು ಮಾತನಾಡಿದರು.

“ರಾಜ್ಯ ಈ ವರ್ಷ ಭೀಕರ ಬರತ್ತೆ ತುತ್ತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಸಮಯದಲ್ಲಿ ಅವರಿಗೆ ಪರಿಹಾರ ಧನ ನೀಡಬೇಕಿದೆ. ಹೀಗಾಗಿ ಕೇಂದ್ರ ಸರ್ಕಾರ ಶೀಘ್ರವಾಗಿ ಕರ್ನಾಟಕದ ಬರ ಪರಿಹಾರ ಮನವಿಯ ಬಗ್ಗೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆ ಮಾಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜ್ಯದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಮಿತ್ ಶಾ ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಸಿ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿರುವ ಸಣ್ಣ ರೈತರ ಸಂಖ್ಯೆಯ ನಿಖರ ಮಾಹಿತಿಯನ್ನು ಕೇಂದ್ರ ಸಚಿವರಿಗೆ ನೀಡಲಾಗಿದೆ” ಎಂದು ಅವರು ತಿಳಿಸಿದರು.

“ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಿಡುಗಡೆಯಾಗಲಿರುವ ಬರ ಪರಿಹಾರ ಹಣದ ಮೊತ್ತ ಸಣ್ಣ ರೈತರ ಸಂಖ್ಯೆಗೆ ಅನುಗುಣವಾಗಿರುತ್ತದೆ. ಆದರೆ, ರಾಜ್ಯದ ಸಣ್ಣ ರೈತರ ಸಂಖ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಬಳಿ ವಾಸ್ತವ ಅಂಕಿ-ಅಂಶಗಳಿಲ್ಲ” ಎಂದರು.

ನ್ಯಾಫೆಡ್ ಮೂಲಕ ಕೊಬ್ಬರಿ ಖರೀದಿಗೆ ಒತ್ತಾಯ

ಅಮಿತ್ ಶಾ ಭೇಟಿಯ ಬೆನ್ನಿಗೆ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿರುವ ಸಚಿವ ಕೃಷ್ಣ ಬೈರೇಗೌಡ, ಕೊಬ್ಬರಿ ಬೆಳೆಯನ್ನು ಕೇಂದ್ರ ಸರ್ಕಾರವೇ “ನ್ಯಾಫೆಡ್” ಮುಖಾಂತರ ಖರೀದಿ ಮಾಡಬೇಕು ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.

“ರಾಜ್ಯದಲ್ಲಿ ಕೊಬ್ಬರಿ ಬೆಳೆಯುವ ರೈತರು ಅನೇಕರಿದ್ದಾರೆ. ಅನೇಕ ಜಿಲ್ಲೆಗಳಲ್ಲಿ ಕೊಬ್ಬರಿ ಬೆಳೆಗಾರರಿದ್ದಾರೆ. ಆದರೆ, ಈಗ ಕೊಬ್ಬರಿ ಬೆಲೆ ತೀವ್ರ ಕುಸಿತ ಕಂಡಿದೆ. ಪರಿಣಾಮ ರೈತರು ಸಂಕಷ್ಟಕ್ಕೀಡಾಗಿದ್ಧಾರೆ. ಹೀಗಾಗಿ ಕೇಂದ್ರ ಸರ್ಕಾರ ನ್ಯಾಫೆಡ್ ಮುಖಾಂತರ ಮಾರುಕಟ್ಟೆಯಿಂದ ನೇರವಾಗಿ ಕೊಬ್ಬರಿ ಖರೀದಿಸಬೇಕು. ಈ ಪ್ರಕ್ರಿಯೆ ತಕ್ಷಣ ಆರಂಭವಾಗಬೇಕು. ನ್ಯಾಫೆಡ್ ಮೂಲಕ ಕೊಬ್ಬರಿ ಖರೀದಿಗೆ ಮುಂದಾದರೆ, ಬೆಲೆ ತನ್ನಿಂದ ತಾನೇ ನಿಯಂತ್ರಣವಾಗುತ್ತದೆ” ಎಂದು ಕೇಂದ್ರ ಸಚಿವರ ಬಳಿ ಮನವಿ ಮಾಡಲಾಗಿದೆ ಎಂದರು.

“ಬರ ಪರಿಹಾರದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಕೃಷಿ ಸಚಿವರೂ ಓರ್ವ ಸದಸ್ಯರಾಗಿದ್ದು, ಕರ್ನಾಟಕಕ್ಕೆ ಶೀಘ್ರ ಪರಿಹಾರ ಹಣ ಬಿಡುಗಡೆ ಮಾಡುವ ಸಂಬಂಧ ಸಭೆಯಲ್ಲಿ ಮಾತನಾಡಲು ಕೋರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಆ ಪತ್ರವನ್ನು ನಾನೇ ನೇರವಾಗಿ ಅರ್ಜುನ್ ಮುಂಡಾ ಅವರಿಗೆ ನೀಡಿದ್ದೇನೆ. ರೈತರ ಸಂಕಷ್ಟವನ್ನು ಬಗೆಹರಿಸಲು ಮನವಿ ಮಾಡಿದ್ದೇನೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಈ ಸಂದರ್ಭ ಶಾಸಕ ಶಿವಲಿಂಗೇಗೌಡ ಜೊತೆಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...