ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ಮಮ್ಮ ನಾಮಕರಣಗೊಳಿಸಲು ಗೊತ್ತುವಳಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಸದನದಲ್ಲಿ ಸಚಿವ ಎಂ ಬಿ ಪಾಟೀಲ್ ಹೇಳಿದರು.
ಶಾಸಕರಾದ ಎನ್ ಹೆಚ್ ಕೊನರೆಡ್ಡಿ ಅವರು ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯ ಹಾಗೂ ಶ್ರೀನಿವಾಸ ಮಾನೆ ಹಾಗೂ ಎನ್.ಹೆಚ್. ಕೊನರೆಡ್ಡಿ ನೀಡಿದ ಪತ್ರದನ್ವಯ ರಾಜ್ಯದ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಮಾತನಾಡಿದರು.
“ವಿಮಾನ ನಿಲ್ದಾಣಗಳಿಗೆ ನಾಮಕರಣಗೊಳಿಸುವುದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುತ್ತದೆ. ಆದರೂ ಶಾಸಕರ ಬೇಡಿಕೆಯನ್ವಯ ಸರ್ಕಾರ ಸ್ಪಂದಿಸಲಿದೆ” ಎಂದರು.
ಶಾಸಕ ಅರವಿಂದ ಬೆಲ್ಲದ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರು ಈ ಸಂದರ್ಭದಲ್ಲಿ ಮಾತನಾಡಿ, ಎರಡೂ ಸದನಗಳ ಸರ್ವ ಸದಸ್ಯರ ಒಪ್ಪಿಗೆ ಇದ್ದು, ತಕ್ಷಣ ಸರ್ಕಾರವು ಈ ಕುರಿತು ಕ್ರಮವಹಿಸಬೇಕೆಂದು ಒತ್ತಾಯಿಸಿದರು.