ಸೌಜನ್ಯ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರವೇ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ

Date:

Advertisements
  • ‘ಸೌಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರದ ಸಿಬಿಐನವರು ಮಾಡಿದ್ದಾರೆ’
  • ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ

ಸೌಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರ ಸಿಬಿಐನವರು ಮಾಡಿದ್ದು, ಈ ಬಗ್ಗೆ ಕೇಂದ್ರದವರೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆ ಮಾಡಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisements

ಕೇಂದ್ರದಿಂದ ಬರ ಪರಿಹಾರ ಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, “ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಕೇಂದ್ರದ ತಂಡ ಬಂದಿದೆ. ರಾಜ್ಯದಿಂದಲೂ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. 236 ತಾಲ್ಲೂಕುಗಳಲ್ಲಿ 216 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಸುಮಾರು ₹30 ಸಾವಿರ ಕೋಟಿಯಷ್ಟು ಬೆಳೆ ಹಾನಿಯಾಗಿದೆ. ಸುಮಾರು ₹17,900 ಕೋಟಿ ಪರಿಹಾರವನ್ನು ಕೇಂದ್ರಕ್ಕೆ ಕೋರಲಾಗಿದೆ. ಆದರೆ ಕೇಂದ್ರದಿಂದ ಇದುವರೆಗೂ ಒಂದು ರೂಪಾಯಿಯೂ ಬಿಡುಗಡೆಯಾಗಿಲ್ಲ ಹಾಗೂ ರಾಜ್ಯ ಸಚಿವರನ್ನು ಭೇಟಿಯಾಗಲು ಕೇಂದ್ರ ಸಚಿವರು ಸಮಯವನ್ನೂ ನೀಡುತ್ತಿಲ್ಲ” ಎಂದು ತಿಳಿಸಿದರು.

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ

ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ನೀಡುತ್ತಿರುವ ಬಗ್ಗೆ ಮಾಹಿತಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, “ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ ಎಂಬುದು ತಿಳಿದಿದೆ. ಆದರೆ ₹50 ಕೋಟಿ, ಅಧಿಕಾರದ ಆಫರ್ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಗೃಹ ಸಚಿವರ ಆಮಂತ್ರಣದ ಮೇರೆಗೆ ಅವರ ಮನೆಗೆ ಭೋಜನಕ್ಕೆ ಹೋಗಿರುವುದೇ ಹೊರತು, ಇದರಲ್ಲಿ ಯಾವುದೇ ರಾಜಕೀಯ ಇಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

ಸಿಎಂ ಪದದ ಬಗ್ಗೆ ಹರೀಶ್ ಪೂಂಜಾ ಅವರ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ‘ಹರೀಶ್ ಪೂಂಜಾ ಇತ್ತೀಚೆಗಷ್ಟೇ ಶಾಸಕರಾಗಿರುವವರು, ನಾನು 1983 ರಿಂದ ಶಾಸಕನಾಗಿದ್ದೇನೆ. ಅವನಿನ್ನೂ ರಾಜಕೀಯದಲ್ಲಿ ಬಚ್ಚಾ” ಎಂದು ಹೇಳಿದರು.

ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಪ್ರತಿಕ್ರಿಯೆ ನೀಡಿ, “ಮೊದಲ ಹಂತದಲ್ಲಿ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕಾತಿಯನ್ನು ಶೀಘ್ರದಲ್ಲಿ ಮಾಡಲಾಗುವುದು. ಎರಡನೇ ಹಂತದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ ಶಾಸಕರನ್ನು ಪರಿಗಣಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X