ಕೇಂದ್ರ ಬಜೆಟ್‌ | ಇದು ವಿಕಸಿತ ಅಲ್ಲ, ಭಾರತದ ವಿನಾಶಕಾರಿ ಬಜೆಟ್: ಸಿಎಂ ಸಿದ್ದರಾಮಯ್ಯ ವಿಶ್ಲೇಷಣೆ

Date:

ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್. ಸಾಲಕ್ಕಾಗಿ ಬಡ್ಡಿ ಪಾವತಿಸುವುದು 1.91 ಕೋಟಿ ರೂ.ಗಳು. ಇದು ವಿಕಸಿತ ಅಲ್ಲ, ಭಾರತದ ವಿನಾಶಕಾರಿ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

- Advertisement -

ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಬಜೆಟ್ ಅನ್ನು ವಿಶ್ಲೇಷಿಸಿ ಮಾತನಾಡಿದ ಅವರು, “ಕಳೆದ ವರ್ಷಕ್ಕಿಂತ 5.8% ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ನಿರಾಶಾದಾಯಕ ಬಜೆಟ್ ಎನ್ನಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಿರುದ್ಯೋಗ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಮಾತೇ ಆಡಿಲ್ಲ. ಸಾಲ ಹೆಚ್ಚಾಗಿರುವುದು, ಒಟ್ಟು ಸಾಲದ ಪ್ರಮಾಣ ವಿಪರೀತ ಏರಿಕೆ ಆಗಿರುವುದನ್ನು ಹೇಳಿಲ್ಲ. ನಿರ್ಮಲಾ ಸೀತಾರಾಮನ್ ಅವರು 2024- 25 ನೇ ವರ್ಷಕ್ಕೆ ಮಧ್ಯಂತರ ಆಯವ್ಯಯ ಮಂಡಿಸಿದ್ದಾರೆ. 47,65,758 ಕೋಟಿ ರೂ.ಗಾತ್ರದ ಬಜೆಟ್. ಕಳೆದ ವರ್ಷದ ಬಜೆಟ್ ಗಾತ್ರ 4,53,097 ಕೋಟಿ ಆಗಿತ್ತು. 2,62,671 ಕೋಟಿ ಹೆಚ್ಚುವರಿ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರ ಈ ವರ್ಷ 5.8% ಹೆಚ್ಚಾಗಿದೆ” ಎಂದು ಹೇಳಿದರು.

“ಬಜೆಟ್‌ನ 47 ಲಕ್ಷ ಕೋಟಿ ರೂ.ಗಳಲ್ಲಿ 16,85,494 ಕೋಟಿ ರೂ. ಸಾಲ ಮಾಡಿದ್ದಾರೆ. ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆ ಏರಿಕೆ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ. ವಿಕಸಿತ ಭಾರತ ಎಂದು ನರೇಂದ್ರ ಮೋದಿ ಪ್ರಚಾರದಲ್ಲಿ ಹೇಳುತ್ತಾರೆ. ಈ ಬಜೆಟ್ ವಿಕಸಿತ ಬಜೆಟ್ ಎನ್ನುತ್ತಾರೆ. ಇದು ನಿಜವಾದ ಅರ್ಥದಲ್ಲಿ ವಿನಾಶಕಾರಿ” ಎಂದು ವಿಶ್ಲೇಷಿಸಿದರು.

“ಬಡವರು, ಯುವಕರು, ರೈತರು, ಮಹಿಳೆಯರಿಗಾಗಿ ವಿಕಸಿತ ಭಾರತ ಎನ್ನುತ್ತಾರೆ. ಆದರೆ ಈ ಸಮುದಾಯಗಳ ಪ್ರಗತಿಗೆ ಕಾರ್ಯಕ್ರಮಗಳೇ ಇಲ್ಲ. ನಾವು ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ, ಕೃಷಿಭಾಗ್ಯ ಕಾರ್ಯಕ್ರಮ ಈ ವರ್ಗದ ಜನರಿಗೆ ಕೊಟ್ಟೆವು. ಬೆಳೆ ಪರಿಹಾರವನ್ನು ಬಜೆಟ್ ನಲ್ಲಿ ಹೇಳಿಲ್ಲ. ಎಂ.ಎಸ್.ಪಿ ಗೆ ಕೆಲವು ಬೆಳೆಗಳನ್ನು ಮಾತ್ರ ಸೇರಿಸಿದ್ದಾರೆ. ರೈತರ ಎಲ್ಲಾ ಬೆಳೆಗಳು ಎಂ.ಎಸ್.ಪಿ ಅಡಿ ಬರಬೇಕು. ಇದರ ಬಗ್ಗೆ ಏನನ್ನೂ ಬಜೆಟ್ ನಲ್ಲಿ ಹೇಳಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

“ನಿರ್ಮಲಾ ಸೀತಾರಾಮನ್ ಅವರ 6 ನೇ ಬಜೆಟ್ ಇದು. ತೆರಿಗೆಯನ್ನು ಕಾರ್ಪೊರೇಟ್ ಗಳ ಮೇಲಿನ ಪ್ರಮಾಣ ಶೇ. 30ಕ್ಕೆ ಇಳಿಸಿ ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ. ಬಡವರ, ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರೋಧಿ ಬಜೆಟ್ ಆಗಿದ್ದು, ಕೇಂದ್ರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ” ಎಂದು ಹೇಳಿದರು.

“2004 -14 ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ 13.79% ಇತ್ತು. ಈಗ ಬಜೆಟ್ ಬೆಳವಣಿಗೆ 9.6% ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು 9.6% ಗೆ ತಂದಿದ್ದಾರೆ. 4.19% ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರ್ಕಾರದಲ್ಲಿ ಶೇ 11.14% ಇತ್ತು ಎನ್.ಡಿ.ಎ ಕಾಲದಲ್ಲಿ 6.4% ಕ್ಕೆ ಕುಸಿತವಾಗಿದೆ. ಆದ್ದರಿಂದ ಇದು ವಿಕಸಿತವಲ್ಲ” ಎಂದು ವ್ಯಾಖ್ಯಾನಿಸಿದರು.

“ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಅನುದಾನ ಬಂದಿಲ್ಲ. 15 ನೇ ಹಣಕಾಸು, ಪೆರಿಫೆರಲ್ ರಿಂಗ್ ರೋಡಿಗೆ ಹಣ ಬಂದಿಲ್ಲ. 5300 ಕೋಟಿ, ಭದ್ರ ಮೇಲ್ದಂಡೆ ಯೋಜನೆಗೆ ಬಂದಿಲ್ಲ. ಬರಗಾಲದ ಪರಿಹಾರಕ್ಕೂ ಒಂದು ಪೈಸೆ ಬಂದಿಲ್ಲ” ಎಂದರು.

“ನಮ್ಮಿಂದ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು. ಪ್ರಯೋಜನ ಆಗಿಲ್ಲ. ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು‌. ಇದಕ್ಕಾಗಿ ರಾಜ್ಯಗಳ ಪಾಲನ್ನು ಚಾಚೂ ತಪ್ಪದೆ ಕೊಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...