ಕೇಂದ್ರ ಬಜೆಟ್‌ | ತೆರಿಗೆ ಕಟ್ಟಿದ ಕನ್ನಡಿಗರು ಮೋದಿಗೆ ಕಂಡಿಲ್ಲ, ರಾಜ್ಯಕ್ಕೆ ಚೊಂಬು ಸಿಕ್ಕಿದೆ: ಕೃಷ್ಣ ಬೈರೇಗೌಡ

Date:

ಕೇಂದ್ರ ಬಜೆಟ್ ಕರ್ನಾಟಕಕ್ಕೆ ಕರಾಳ ದಿನವಾಗಿದೆ. ರಾಜ್ಯದ ಯಾವ ಬೇಡಿಕೆಯೂ ಈಡೇರಿಲ್ಲ. ನಮ್ಮ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ. ಕರ್ನಾಟಕದವರು ಕಡಲೆ ಬೀಜ ತಿನ್ನೋಕೆ ಇರೋದಾ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು.

- Advertisement -

ಕೇಂದ್ರ ಬಜೆಟ್‌ ಬಗ್ಗೆ ವಿಧಾನಸೌಧದಲ್ಲಿ ಶನಿವಾರ ಪ್ರತಿಕ್ರಿಯೆ ನೀಡಿ, “ನಮ್ಮ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ಬಿಹಾರ ರಾಜ್ಯಕ್ಕೆ ಐದಾರು ಯೋಜನೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಬರೀ ಚೊಂಬು ಸಿಕ್ಕಿದೆ. ಇದು ಬಿಜೆಪಿ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ದ್ರೋಹ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“11,495 ಕೋಟಿ ಫೈನಾನ್ಸ್ ಕಮಿಷನ್ ಕೊಡಲು ಹೇಳಿತ್ತು. ಬರಬೇಕಾದ ಅನುದಾನದ ಬಗ್ಗೆ ಚಕಾರ ಎತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಇಂದು ನೈಯಾ ಪೈಸಾ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ್ಕೆ ಏನೂ ನೀಡಿಲ್ಲ. ಬೆಂಗಳೂರು ದೇಶಕ್ಕೆ ಉದ್ಯೋಗ ಕೊಡ್ತಿದೆ. ರಪ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ಕೊಡ್ತಿದೆ. ಆದ್ರೂ ಬಜೆಟಲ್ಲಿ ಬೆಂಗಳೂರಿಗೆ ಏನೂ ಇಲ್ಲ” ಎಂದರು.

“ಯುಪಿ, ಬಿಹಾರ ಮಾತ್ರ ಕೇಂದ್ರಕ್ಕೆ ಕಾಣುತ್ತಿದೆ. ತೆರಿಗೆ ಕಟ್ಟಿದ ಕನ್ನಡಿಗರು ಮೋದಿಗೆ ಕಂಡಿಲ್ಲ. ನಮ್ಮ ರಾಜ್ಯ ಕೇವಲ ದುಡಿಯವ ಆಳಿನ ರೀತಿ ಕಾಣುತ್ತಿದೆ. ಸರ್ಕಾರದ ಪರವಾಗಿ ಕೇಂದ್ರ ಬಜೆಟ್‌ ಅನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...