ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್‌ಗೆ ಝಡ್–ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಲು ಕೇಂದ್ರ ನಿರ್ಧಾರ

Date:

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ‘ಸ್ಟೂಡೆಂಟ್ ಫೆಡೆರೇಷನ್ ಆಫ್‌ ಇಂಡಿಯಾ’ದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ ಬೆನ್ನಲ್ಲೇ ಝಡ್–ಪ್ಲಸ್ ಶ್ರೇಣಿಯ ಭದ್ರತಾ ವ್ಯವಸ್ಥೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

- Advertisement -

ಈ ಕುರಿತು ಕೇರಳ ರಾಜಭವನ ಶನಿವಾರ ಮಾಹಿತಿ ಹಂಚಿಕೊಂಡಿದೆ. ಕೊಲ್ಲಂನ ನಿಲಮೇಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದಕ್ಕೆ ಬಂದಿದ್ದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ 50ಕ್ಕೂ ಹೆಚ್ಚು ಮಂದಿ ಎಸ್‌ಎಫ್ಐ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಗೋ ಬ್ಯಾಕ್ ಎಂದು ಧಿಕ್ಕಾರ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದರಿಂದ ಸಿಟ್ಟಿಗೆದ್ದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಾಹನದಿಂದ ಇಳಿದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ, ಎಸ್ಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿಲ್ಲ, ನನ್ನ ಮೇಲೆ ಹಲ್ಲೆಗೆ ಮುಂದಾದ ಹಲ್ಲೆಕೋರರನ್ನು ಏಕೆ ಬಂಧಿಸಿಲ್ಲ ಎಂದು ಸಿಟ್ಟಿನಿಂದಲೇ ಪೊಲೀಸರನ್ನು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಜಕಾರಣ

ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ ಆರಿಫ್ ಅವರು ಕಾರಿನಿಂದ ಇಳಿದು ರಸ್ತೆಯ ಬದಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರು. ಈ ನಡುವೆ ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಘಟನೆಯಲ್ಲಿ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಗ್ರಾಮಾಂತರ ಎಸ್ಪಿ ರಾಜ್ಯಪಾಲರಿಗೆ ಮಾಹಿತಿ ನೀಡಿದರು. ಆದರೆ ಎಲ್ಲ 50 ಮಂದಿಯನ್ನು ಬಂಧಿಸಬೇಕು ಎಂದು ರಾಜ್ಯಪಾಲರು ಎಸ್‌ಪಿಗೆ ಸೂಚಿಸಿದ್ದಾರೆ.

ಹಿಂದೂ ಬಲಪಂಥೀಯ ಬೆಂಬಲಿಗರನ್ನು ತಮ್ಮ ಸೆನೆಟ್‌ಗಳಿಗೆ ನೇಮಿಸುವ ಮೂಲಕ ರಾಜ್ಯಪಾಲರು ವಿಶ್ವವಿದ್ಯಾಲಯಗಳನ್ನು ಕೇಸರಿಮಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಪಿಐ(ಎಂ) ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...