ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ನಾವೇ ಖರೀದಿಸುತ್ತೇವೆ: ಸಚಿವ ಮುನಿಯಪ್ಪ

Date:

  • ಘೋಷಿತ ಐದೂ ಗ್ಯಾರಂಟಿಗಳನ್ನು ಹಂತಹಂತವಾಗಿ ನೀಡುತ್ತೇವೆ
  • ನಮ್ಮ ಮಾತಿಗೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂ ಮುನಿಯಪ್ಪ

ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 5 ಕೆ.ಜಿ. ಉಚಿತ ಅಕ್ಕಿ ವಿತರಣೆಗೆ ನಾವು ಬೇಡಿಕೆ ಇಟ್ಟಿದ್ದೇವೆ. ಒಂದು ವೇಳೆ ನಮ್ಮ ಮನವಿಗೆ ಅವರು ಸ್ಪಂದಿಸದಿದ್ದರೆ ನಾವೇ ಟೆಂಡರ್ ಕರೆದು ಅಕ್ಕಿ ಖರೀದಿ ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಘೋಷಣೆ ಮಾಡಿರುವ ರೀತಿ ಹತ್ತು ಕೆ.ಜಿ. ಅಕ್ಕಿ ವಿತರಣೆ ಮಾಡಲಿದೆ. ಇದಕ್ಕೆ ಪೂರಕವಾಗಿ ಕೇಂದ್ರ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿಗೂ ಬೇಡಿಕೆ ಇಟ್ಟಿದ್ದೇವೆ. ಭಾರತದಲ್ಲಿ ಭತ್ತವನ್ನು ಸಾಕಷ್ಟು ಪ್ರಮಾಣದಲ್ಲಿ ಬೆಳೆಯುತ್ತಾರೆ. ಅದನ್ನವರು ಕೊಟ್ಟರೆ ಸಹಕಾರಿಯಾಗಲಿದೆ ಎಂದರು.

ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ನಾಳಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡ್ತೇವೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ನಮ್ಮ ಘೋಷಿತ ಯೋಜನೆಗಳು ಖಂಡಿತಾ ಜಾರಿಯಾಗಲಿವೆ ಎಂದು ಅವರು ಪುನರುಚ್ಚಾರ ಮಾಡಿದರು.ಪ್ರಿಯಾಂಕ್_ ಖರ್ಗೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಗ್ಯಾರಂಟಿ ಜಾರಿ ಬಗ್ಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಐದು ಗ್ಯಾರಂಟಿಗಳನ್ನು ಜಾರಿ ಮಾಡಿಯೇ ಮಾಡುತ್ತೇವೆ. ಇವುಗಳ ಅನುಷ್ಠಾನದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆಯಾಗಿದೆ. ಯಾವ ರೀತಿ ಗ್ಯಾರಂಟಿ ಜಾರಿ ಮಾಡಬೇಕು ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳಿನ ಸಚಿವ ಸಂಪುಟದಲ್ಲಿ ಇದರ ಬಗ್ಗೆ ಅಂತಿಮ ನಿರ್ಧಾರ ಹೊರ ಬೀಳಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? :ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ; ಸಿಎಂ ಸಿದ್ದರಾಮಯ್ಯ ಭರವಸೆ

ಯೋಜನೆ ಜಾರಿ ವಿಚಾರದ ಬಗ್ಗೆ ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷದವರು ಯಾವ ಆಧಾರದ ಮೇಲೆ ನಮ್ಮನ್ನು ಟೀಕಿಸುತ್ತಿದ್ದಾರೆ. ನಮಗೆ ಮತ ಹಾಕಿದ ಜನರ ಹಿತದೃಷ್ಟಿಯಿಂದ ನಾವು ಕೆಲಸ ಮಾಡುತ್ತಿದ್ದೇವೆ. ಯೋಜನೆ ಜಾರಿ ಮಾಡುತ್ತೇವೆ ಎಂದಿದ್ದೇವೆಯೇ ಹೊರತು, ಅದನ್ನು ಜೂನ್ 1ರಂದೇ ಮಾಡುತ್ತೇವೆಂದು ಹೇಳಿಲ್ಲ. ಈ ವಿಚಾರದಲ್ಲಿ ವೃಥಾ ಗೊಂದಲ ಸೃಷ್ಟಿ ಬೇಡ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...