ಗ್ಯಾರಂಟಿ ಯೋಜನೆ ಜನರಿಗೆ ತಲುಪದಂತೆ ಕೇಂದ್ರ ಸರ್ಕಾರ ತಂತ್ರಾಂಶ ಹ್ಯಾಕ್ ಮಾಡಿದೆ: ಸತೀಶ್‌ ಜಾರಕಿಹೊಳಿ ಆರೋಪ

Date:

Advertisements
  • ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆ ಜಾರಿಗೆ ತರುತ್ತೇವೆ: ಜಾರಕಿಹೊಳಿ
  • ಹ್ಯಾಕ್ ಆಗಿದ್ದರೆ ಸೈಬರ್​ ಕ್ರೈಂ ವಿಭಾಗಕ್ಕೆ ದೂರು ನೀಡಿ ತನಿಖೆ ಮಾಡಿ: ಜೋಶಿ

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪದಂತೆ ಪಿತೂರಿ ನಡೆಸಲು ಇವಿಎಂ ಮಾದರಿಯಲ್ಲಿ ಕೇಂದ್ರ ಸರ್ಕಾರ ತಂತ್ರಾಂಶಗಳನ್ನು ಹ್ಯಾಕ್ ಮಾಡಿ ಸರ್ವರ್ ಡೌನ್ ಆಗುವಂತೆ ಮಾಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಇಲಾಖೆಯ ಸರ್ವರ್​ ಕೂಡ ಹ್ಯಾಕ್ ಆಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಆರೋಪಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, “ಕೇಂದ್ರ ಸರ್ಕಾರ ನಮ್ಮ ಸರ್ವರ್ ಹಾಗೂ ಸಿಸ್ಟಮ್‌ಗಳನ್ನು ಹ್ಯಾಕ್ ಮಾಡಿದೆ. ಇದರಿಂದ ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದೆ” ಎಂದರು.

“ಆನ್‌ಲೈನ್‌ನಲ್ಲಿ ಸಮಸ್ಯೆ ಹೆಚ್ಚಾದರೆ, ನೇರವಾಗಿ (ಆಫ್​ಲೈನ್) ಅರ್ಜಿ ಸ್ವೀಕರಿಸುತ್ತೇವೆ. ಇದರಿಂದ ಒಂದು ತಿಂಗಳು ತಡ ಆಗಬಹುದು. ಅದಕ್ಕಿಂತ ಹೆಚ್ಚೇನು ಆಗುವುದಿಲ್ಲ” ಎಂದರು.

Advertisements

“ಸರಿಯಾದ ಯೋಜನೆ ರೂಪಿಸದೆ ಗ್ಯಾರಂಟಿ ಯೋಜನೆ ಜಾರಿಗೆ ತರುತ್ತಿದ್ದಾರೆ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರಲ್ಲಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಸಮಸ್ಯೆಗಳನ್ನು ಸರಿಪಡಿಸಲು ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಹ್ಯಾಕ್‌ ಮಾಡಿದರೆ ಹೇಗೆ? ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆ ಜಾರಿಗೆ ತರುತ್ತೇವೆ”‌ ಎಂದರು.

ಈ ಸುದ್ದಿ ಓದಿದ್ದೀರಾ? ಸಕಾಲಕ್ಕೆ ಕೇಂದ್ರ ಅಕ್ಕಿ ವಿತರಣೆ ಮಾಡದಿದ್ದಲ್ಲಿ ಕಾನೂನು ಹೋರಾಟ: ಸಚಿವ ಪ್ರಿಯಾಂಕ್ ಖರ್ಗೆ

ಪ್ರಲ್ಹಾದ್‌ ಜೋಶಿ ತಿರುಗೇಟು

“ರಾಜ್ಯ ಸರ್ಕಾರದ ಸರ್ವರ್ ಹ್ಯಾಕ್ ಮಾಡಿದರೆ ದೂರು ನೀಡಲಿ” ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಮಾಡಿದ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಹ್ಯಾಕ್ ಆಗಿದ್ದರೆ ಸೈಬರ್​ ಕ್ರೈಂ ವಿಭಾಗಕ್ಕೆ ದೂರು ನೀಡಿ ತನಿಖೆ ಮಾಡಿಸಲಿ. ಸತೀಶ್ ಜಾರಕಿಹೊಳಿ ಹೇಳಿಕೆ ಹಾಸ್ಯಾಸ್ಪದವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸುಮ್ಮನೇ ಕುಂಟು ನೆಪ ಹೇಳುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X