ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ರಾಜ್ಯ ಸರ್ಕಾರ

Date:

ರಾಜ್ಯವು ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್‌) ಆರ್ಥಿಕ ನೆರವು ಬಿಡುಗಡೆ ಮಾಡಲು ಕೇಂದ್ರದ ಗೃಹ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ಅರ್ಜಿಯು ರಜಾಕಾಲೀನ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದು ವರದಿ ತಿಳಿಸಿದ್ದು, ಸಂವಿಧಾನದ 32ನೇ ವಿಧಿಯ ಅಡಿ ರಿಟ್‌ ಅರ್ಜಿಯನ್ನು ಕರ್ನಾಟಕ ಸರ್ಕಾರವು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದೆ ಎಂದು ಉಲ್ಲೇಖಿಸಿದೆ.

ಕೇಂದ್ರ ಗೃಹ ಇಲಾಖೆಯ ಕ್ರಮವು ಸಂವಿಧಾನದ 14 ಮತ್ತು 21ನೇ ವಿಧಿಯಡಿ ಕಲ್ಪಿಸಿರುವ ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ರಾಜ್ಯ ಸರ್ಕಾರವು ಆಕ್ಷೇಪಿಸಿದ್ದು, ಅರ್ಜಿಯಲ್ಲಿ ಕೇಂದ್ರ ಗೃಹ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು (ಎನ್‌ಡಿಎಂಎ) ಪ್ರತಿವಾದಿಗಳನ್ನಾಗಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬರದಿಂದ ರಾಜ್ಯದಲ್ಲಿ ರೂ.35,162.05 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಎನ್‌ಡಿಆರ್‌ಎಫ್‌ನಿಂದ ರಾಜ್ಯ ಸರ್ಕಾರವು ರೂ.18,171.44 ಕೋಟಿ ಆರ್ಥಿಕ ನೆರವು ಕೋರಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಬರ ಪರಿಹಾರ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಳ್ಳದ ಮತ್ತು ಸ್ವೇಚ್ಛೆಯಿಂದ ನಡೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಸಂವಿಧಾನದ 32ನೇ ವಿಧಿಯಡಿ ಜನರ ಕಾನೂನುಬದ್ಧ ರಕ್ಷಕನಾದ (parens patriae) ಕರ್ನಾಟಕ ಸರ್ಕಾರವು ತನ್ನ ಹೊಣೆಗಾರಿಕೆ ನಿಭಾಯಿಸುವ ನಿಟ್ಟಿನಲ್ಲಿ ನ್ಯಾಯಾಲಯದ ಮೆಟ್ಟಿಲೇರಿದೆ.

ವಿಪತ್ತು ನಿರ್ವಹಣಾ ಕಾಯಿದೆ 2005, ಬರ ನಿರ್ವಹಣೆ ಕೈಪಿಡಿ ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿಯ ರಚನೆಯ ಮಾರ್ಗಸೂಚಿ ಮತ್ತು ಆಡಳಿತ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಅಡಿ ಕ್ರಮಕೈಗೊಳ್ಳದ ಕೇಂದ್ರ ಸರ್ಕಾರದ ಕ್ರಮ ಕಾನೂನುಬಾಹಿರ ಎಂದು ರಾಜ್ಯ ಸರ್ಕಾರ ಅರ್ಜಿಯಲ್ಲಿ ವಾದಿಸಿದೆ.

ವಿಪತ್ತು ನಿರ್ವಹಣಾ ಕೈಪಿಡಿಯ ಅಡಿ ಅಂತರ-ಸಚಿವಾಲಯ ಕೇಂದ್ರ ತಂಡ (ಐಎಂಸಿಟಿ) ವರದಿ ನೀಡಿದ ತಿಂಗಳ ಒಳಗೆ ಎನ್‌ಡಿಆರ್‌ಎಫ್‌ನಿಂದ ನೆರವು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅಂತಿಮ ನಿರ್ಧಾರ ಕೈಗೊಳ್ಳಬೇಕು. ಐಎಂಸಿಟಿ ತಂಡವು 2023ರ ಅಕ್ಟೋಬರ್‌ 4ರಿಂದ 9ರವರೆಗೆ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಬರದ ಸಮಗ್ರ ವರದಿ ಸಲ್ಲಿಸಿ ಆರು ತಿಂಗಳಾದರೂ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಪೈಕಿ 196 ತಾಲೂಕುಗಳು ಗಂಭೀರ ಬರ ಪೀಡಿತವಾಗಿದ್ದು, 27 ತಾಲೂಕುಗಳು ಅರೆ ಬರಪೀಡಿತವಾಗಿವೆ. ಮಳೆಯ ಕೊರತೆಯಿಂದ ರೈತರು ಬೆಳೆದಿರುವ ಬೆಳೆ ನಾಶವಾಗಿದ್ದು, ಅಂತರ್ಜಲ ಕುಸಿತವಾಗಿದೆ. ಇದರಿಂದ ದಿನ ಬಳಕೆ, ಕೃಷಿ ಹಾಗೂ ಕೈಗಾರಿಕೆಗೆ ನೀರು ಪೂರೈಕೆ ದುರ್ಲಭವಾಗಿದೆ. ಜಾನುವಾರುಗಳಿಗೆ ತೀವ್ರ ಸಮಸ್ಯೆಯಾಗಿದ್ದು, ರೈತರ ಬದುಕು ದಯನೀಯವಾಗಿದೆ. ಬರದಿಂದಾಗಿ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಆದಾಯ ನಷ್ಟ, ಉದ್ಯೋಗಕ್ಕೆ ಹಾನಿ ಸೇರಿದಂತೆ ರಾಜ್ಯದ ಆರ್ಥಿಕತೆಗೆ ಭಾರೀ ಹೊಡೆತ ನೀಡಿದೆ ಎಂದು ವಿವರಿಸಲಾಗಿದೆ.

ವಿಪತ್ತು ನಿರ್ವಹಣಾ ಕಾಯಿದೆ 2005ರ ಅಡಿ ರಾಜ್ಯ ಸರ್ಕಾರಗಳಿಗೆ ಆರ್ಥಿಕ ನೆರವು ನೀಡುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ. ಪ್ರಧಾನ ಮಂತ್ರಿ, ಗೃಹ ಮಂತ್ರಿ, ಕೃಷಿ ಮಂತ್ರಿ ಹಾಗೂ ಹಣಕಾಸು ಮಂತ್ರಿಯನ್ನು ಮುಖತಃ ಭೇಟಿ ಮಾಡಿ, ಹಲವು ಬಾರಿ ಪತ್ರ ಬರೆದಿದ್ದರೂ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ರಾಜ್ಯ ಸರ್ಕಾರವು ದೂರಿದೆ.

ಕೇಂದ್ರ ಗೃಹ ಇಲಾಖೆ ರಚಿಸಿರುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಉಪಸಮಿತಿಯು ಅಧ್ಯಕ್ಷರು ಕರ್ನಾಟಕಕ್ಕೆ ಎನ್‌ಡಿಆರ್‌ಎಫ್‌ ಅಡಿ ಆರ್ಥಿಕ ನೆರವು ನೀಡಲು ಶಿಫಾರಸ್ಸು ಪತ್ರವನ್ನು 2023ರ ನವೆಂಬರ್‌ 20ರಂದೇ ಗೃಹ ಇಲಾಖೆಗೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಕೇಂದ್ರ ಗೃಹ ಇಲಾಖೆಯು ಉನ್ನತ ಮಟ್ಟದ ಸಮಿತಿಯ ಸಭೆ ನಡೆಸಿ ಪರಿಹಾರ ಬಿಡುಗಡೆ ಮಾಡುವ ನಿಟ್ಟಿನಲ್ಲಿ ವಿಳಂಬ ನೀತಿ ಅನುಸರಿಸಿದೆ ಎಂದು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಸಿದ್ದರಾಮಯ್ಯ ಸರ್ಕಾರವು ಮಾಹಿತಿ ನೀಡಿದೆ.

ಇದನ್ನು ಓದಿದ್ದೀರಾ? ರಾಜಸ್ಥಾನ | ನಿರಂತರ ದ್ವೇಷ ಹರಡುವ ‘ಜೈಪುರ್ ಡೈಲಾಗ್ಸ್‌’ನ ನಿರ್ದೇಶಕನಿಗೆ ಕಾಂಗ್ರೆಸ್ ಟಿಕೆಟ್!

ಎನ್‌ಡಿಆರ್‌ಎಫ್‌ನಿಂದ ರಾಜ್ಯ ಸರ್ಕಾರವು ₹18,171.44 ಕೋಟಿ ಪರಿಹಾರ ಕೋರಿದ್ದು, ಇದರಲ್ಲಿ ₹4663.12 ಕೋಟಿ ಬೆಳೆ ನಷ್ಟ, ₹12577.9 ಕೋಟಿ ದವಸ-ಧಾನ್ಯದ ರೂಪದಲ್ಲಿನ ಪರಿಹಾರ ಹಾಗೂ ₹566.78 ಕೋಟಿ ಕುಡಿಯುವ ನೀರಿಗೆ ಮತ್ತು ₹363.68 ಕೋಟಿ ಜಾನುವಾರುಗಳ ಮೇವಿಗೆ ಕೋರಿರುವ ಪರಿಹಾರ ಸೇರಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು...

ಕೇಂದ್ರೀಯ ಸಂಸ್ಥೆ ದುರುಪಯೋಗ ಪ್ರಶ್ನೆ; ಸಿಡಿಮಿಡಿಗೊಂಡ ಮೋದಿ, ಸ್ಕ್ರಿಪ್ಟ್‌ ಮಿಸ್ ಆಯ್ತ ಎಂದ ನೆಟ್ಟಿಗರು

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಎನ್‌ಐಗೆ ಸಂದರ್ಶನ ನೀಡಿದ್ದು, ಕೇಂದ್ರೀಯ...

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್: ವಿದೇಶದಿಂದ ಬಂದ ಕೂಡಲೇ ಬಂಧನ?

ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್...

ಪಶ್ಚಿಮ ಬಂಗಾಳ ಸೇರಿ ಮೂರು ರಾಜ್ಯಗಳಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ಆರಂಭ: ಗೃಹ ಸಚಿವಾಲಯ

ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಪೌರತ್ವ...