ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ನೀಡುತ್ತಿಲ್ಲ: ಸಚಿವ ಈಶ್ವರ್ ಖಂಡ್ರೆ ಬೇಸರ

Date:

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನವಾಗಿದ್ದು, ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.‌

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆದ ಸಚಿವರ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್ ಗೆ ಬಿಡುಗಡೆ ಮಾಡುವ ಕುರಿತಂತೆ ಇಂದು ಇಲ್ಲಿ ಪಾಲ್ಗೊಂಡಿರುವ ಎಲ್ಲ ಸಚಿವರೂ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸೋಣ ಎಂಬ ಸಲಹೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೇರಳದ ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ್ ಖಂಡ್ರೆ ತಿಳಿಸಿದರು.

ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆಯ ವೇಳೆ, ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು.

ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ್ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.

ಜಾರ್ಖಂಡ್ ಅರಣ್ಯ ಸಚಿವ ಬೈದ್ಯನಾಥ್ ರಾಮ್, ತಮಿಳುನಾಡು ಅರಣ್ಯ ಸಚಿವ ಎಂ. ಮಥಿವೆಂಥನ್, ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ ಪಾಲ್ಗೊಂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ | ಕಾಂಗ್ರೆಸ್, ಎನ್‌ಸಿ 370ನೇ ವಿಧಿ ಮರುಸ್ಥಾಪಿಸಲು ಬಯಸುತ್ತದೆ : ಅಮಿತ್ ಶಾ

"ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) 370ನೇ ವಿಧಿಯನ್ನು ಮರಳಿ ತರಲು...

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಬಾಯಲ್ಲಿ ಮತ್ತೆ ದೇವರು, ಮತ್ತೆ ಸುದ್ದಿ, ಮತ್ತೆ ಮೌನ!

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತರು ಈಗ ಮತ್ತೆ ಮಣಿಪುರದ ಹಿನ್ನೆಲೆಯಲ್ಲಿ 'ದೇವರ'...

ಒಂದಲ್ಲಾ ಒಂದು ದಿನ ನಾನು ರಾಜ್ಯದ ಮುಖ್ಯಮಂತ್ರಿ ಆಗುವೆ: ಸಚಿವ ಎಂ ಬಿ ಪಾಟೀಲ್ ಭವಿಷ್ಯ

ಒಂದಲ್ಲಾ ಒಂದು ದಿನ ನಾನು ಕರ್ನಾಟಕದ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಚಿವ...

ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ ಐದು ಸಾವಿರ ನಗ್ನ ಫೋಟೋ, ವಿಡಿಯೋ ಪತ್ತೆ!

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಾಸ್ತಿ ಗಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ...