ಕೇಂದ್ರ ಸರ್ಕಾರ ಅಕ್ಕಿ ನೀಡಲು ಸಿದ್ಧ, ಆದರೆ ಖರೀದಿಸಲು ರಾಜ್ಯ ಸರ್ಕಾರದಲ್ಲಿ ಹಣವಿಲ್ಲ: ಪ್ರಲ್ಹಾದ್‌ ಜೋಶಿ ಆರೋಪ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ಕೇಂದ್ರ ಸರ್ಕಾರ ಅಕ್ಕಿ ನೀಡಲು ಸಿದ್ದ. ಆದರೆ, ಖರೀದಿಗೆ ಕರ್ನಾಟಕ ಸರ್ಕಾರದಲ್ಲಿ ಹಣವಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

- Advertisement -

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗ್ಯಾರಂಟಿಗೆ ಹಣ ಹೊಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಣುಕಾಡುತ್ತಿದ್ದಾರೆ. ಈ ವೈಫಲ್ಯವನ್ನು ಮುಚ್ಚಿಹಾಕಲು ಬಿಜೆಪಿಯವರ ಮೇಲೆ ಹಾಕುತ್ತಿದ್ದಾರೆ. ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಬಿಟ್ಟು ಅಭಿವೃದ್ದಿ ಕಡೆಗೆ ಗಮನ ಕೊಟ್ಟರೆ ಉತ್ತಮ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

“ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ ದಾಸ್ತಾನು ಇರಲಿ ಎನ್ನುವ ಕಾರಣಕ್ಕಾಗಿ ಕಳೆದ ವರ್ಷದ ಜೂನ್ 13ಕ್ಕೆ ಮುಕ್ತ ಮಾರುಕಟ್ಟೆ ಪದ್ದತಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಈಗ ಪರಿಸ್ಥಿತಿ ಸುಧಾರಿಸಿರುವುದರಿಂದ ಅಕ್ಕಿಯನ್ನು ಕೊಡಲು ಕೇಂದ್ರ ಶಕ್ತವಾಗಿದೆ” ಎಂದು ಜೋಶಿ ತಿಳಿಸಿದರು.

“ಕಳೆದ ವರ್ಷ ಕೇಂದ್ರದಿಂದ ಅಕ್ಕಿ ಬಂದಿಲ್ಲ ಎಂದು ಸಿದ್ದರಾಮಯ್ಯನವರು ವಿನಾಕಾರಣ ಆರೋಪಿಸುತ್ತಿದ್ದಾರೆ. ದೇಶದಲ್ಲಿ ಅಕ್ಕಿ ಸಂಗ್ರಹ ಇಳಿಮುಖ ಆಗಬಹುದು ಎನ್ನುವ ಭೀತಿಯಿಂದ ಅಕ್ಕಿ ವಿತರಣೆ ನಿಲ್ಲಿಸಲಾಗಿತ್ತು. ಇದು ಬರೀ ನಮ್ಮ ದೇಶಕ್ಕೆ ಮಾತ್ರ ಅನ್ವಯಿಸುವಂತದಲ್ಲ, ಪ್ರಪಂಚದ ಎಲ್ಲ ಕಡೆ ಈ ಆತಂಕವಿತ್ತು” ಎಂದರು.

“ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಅಕ್ಕಿಯನ್ನು ಒದಗಿಸಿದರೆ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದೂ ಸಿದ್ದರಾಮಯ್ಯನವರು ಎಲ್ಲೂ ಹೇಳಿರಲಿಲ್ಲ. ಕೇಂದ್ರದಲ್ಲಿ 330 ಲಕ್ಷ ಟನ್ ಅಕ್ಕಿ ದಾಸ್ತಾನು ಇದೆ. ಕೊಡಲು ಸಿದ್ಧರಿದ್ದೇವೆ” ಎಂದು ಹೇಳಿದರು.

“ಹಿಂದೆ ಕೆಜಿಯೊಂದಕ್ಕೆ 34 ರೂಪಾಯಿ ನಿಗದಿ ಮಾಡಿದ್ದೆವು. ಈಗ ಅದನ್ನು 28 ರೂಪಾಯಿಗೆ ಇಳಿಸಿದ್ದೇವೆ. ಅಕ್ಕಿ ಕೊಡಲು ನಾವು ಸಿದ್ದರಿದ್ದೇವೆ, ಖರೀದಿಸಲು ಸಿದ್ದರಾಮಯ್ಯ ಸರ್ಕಾರದಲ್ಲಿ ದುಡ್ಡು ಇದೆಯೇ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...