ಕೇಂದ್ರ ಸರ್ಕಾರ ಕರ್ನಾಟಕವನ್ನು ಪ್ರತಿಯೊಂದರಲ್ಲೂ ಸವತಿ ಮಗನಂತೆ‌ ನೋಡುತ್ತಿದೆ: ಸಚಿವ ಗುಂಡೂರಾವ್

Date:

ಜಿಎಸ್‌ಟಿ ಸಂಗ್ರಹದಲ್ಲಿ ನಮ್ಮ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ನಮಗೆ ಕೇಂದ್ರ ಕೊಡುತ್ತಿರುವ ತೆರಿಗೆ ಪಾಲು ಭಿಕ್ಷೆಯಂತಿದೆ. ತೆರಿಗೆ ಹಂಚಿಕೆ ಮಾತ್ರವಲ್ಲದೇ, ಪ್ರತಿಯೊಂದರಲ್ಲೂ ಕರ್ನಾಟಕವನ್ನು ಸವತಿ ಮಗನಂತೆ‌ ನೋಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೂರಿದ್ದಾರೆ.

- Advertisement -

ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರದ ಮೋದಿ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಆಗುತ್ತಿರುವ ತೆರಿಗೆ ಅನ್ಯಾಯದ ವಿರುದ್ಧದ ನಮ್ಮ ಕೂಗು ಅರಣ್ಯರೋಧನವಾಗಿದೆ‌. ಜಿಎಸ್‌ಟಿ ಸಂಗ್ರಹದಲ್ಲಿ ನಮ್ಮ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ನಮಗೆ ಕೇಂದ್ರ ಕೊಡುತ್ತಿರುವ ತೆರಿಗೆ ಪಾಲು ಭಿಕ್ಷೆಯಂತಿದೆ. ಕರ್ನಾಟಕವೆಂದರೆ‌‌ ಮೋದಿ ಸರ್ಕಾರಕ್ಕೆ ಯಾಕೆ ಇಷ್ಟು ದ್ವೇಷ ಮತ್ತು ತಾತ್ಸಾರ ಎಂಬುದು ಅರ್ಥವೇ ಆಗುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಾಜ್ಯದ ಜನ ಮೋದಿಯವರಿಗೆ ಮಾಡಿದ ಅನ್ಯಾಯವಾದರೂ ಏನು.? ಕೇಂದ್ರದ ತೆರಿಗೆ ಅನ್ಯಾಯ ಇಂದು ನಿನ್ನೆಯದಲ್ಲ. ಜಿಎಸ್‌ಟಿ ಕಾಯ್ಧೆ ಜಾರಿಯಾದಾಗಿನಿಂದ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಲೇ ಇದೆ. ಕೇಂದ್ರದ ತೆರಿಗೆ ಅನ್ಯಾಯದ ವಿರುದ್ಧ ನಾವು ಅನೇಕ ಬಾರಿ ಆಕ್ಷೇಪ ಎತ್ತಿದ್ದೇವೆ. ಆದರೆ ಈ ಬಗ್ಗೆ ರಾಜ್ಯದಲ್ಲಿರುವ ಬಿಜೆಪಿ ನಾಯಕರು ಯಾಕೆ ಮಾತಾಡುತ್ತಿಲ್ಲ‌.? ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

“ರಾಜ್ಯ ಬಿಜೆಪಿಯಲ್ಲಿ ‘ರಾಜಾಹುಲಿ’ ‘ಸಾಮ್ರಾಟ’ ಎಂಬ ಬಿರುದಾಂಕಿತ ನಾಯಕರಿದ್ದಾರೆ. ಈ ಅತಿರಥ ಮಹಾನಾಯಕರೆಲ್ಲಾ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಮೋದಿಯವರಿಗೆ ಮನವರಿಕೆ ಮಾಡಿಕೊಡಬಹುದಲ್ಲವೇ.? ಇಲ್ಲಿನ ನಾಯಕರಿಗೆ ಕರ್ನಾಟಕಕ್ಕೆ ಆಗುತ್ತಿರುವ ತೆರಿಗೆ ಅನ್ಯಾಯದ ಬಗ್ಗೆ ಮೋದಿಯವರ ಬಳಿ ಮಾತಾಡಲು ಬೆನ್ನು ಮೂಳೆಯಿಲ್ಲವೇ.? ಕೇಂದ್ರ ಸರ್ಕಾರ ಕೇವಲ ತೆರಿಗೆ ಹಂಚಿಕೆಯಲ್ಲಿ ಮಾತ್ರ ಕರ್ನಾಟಕಕ್ಕೆ ದ್ರೋಹ ಎಸಗುತ್ತಿಲ್ಲ. ಪ್ರತಿಯೊಂದರಲ್ಲೂ ಕರ್ನಾಟಕವನ್ನು ಸವತಿ ಮಗನಂತೆ‌ ಕಾಣುತ್ತಿದೆ” ಎಂದು ಗುಂಡೂರಾವ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ.

“ರಾಜ್ಯ ಭೀಕರ ಬರದಿಂದ ನರಳುತ್ತಿದೆ. ರೈತರು ಮಳೆಯಿಲ್ಲದೆ ಸಂಕಷ್ಟದಲ್ಲಿದ್ದಾರೆ‌. ನಾವು ಬರಪರಿಹಾರಕ್ಕಾಗಿ ಅನೇಕ ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ಒಂದು ಕವಡೆಕಾಸಿನ ನೆರವೂ ಕೊಟ್ಟಿಲ್ಲ. ಎಷ್ಟು ದಿನ ಈ ಅನ್ಯಾಯ.?” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...