ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ‌ಸರ್ಕಾರ ಜಾಗ ನೀಡದಿರುವುದು ತಪ್ಪು ನಿರ್ಧಾರ : ಡಿ ಕೆ ಶಿವಕುಮಾರ್

Date:

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡದೆ ಇರುವುದು ಕೇಂದ್ರ ಸರ್ಕಾರದ ತಪ್ಪು. ಮಲ್ಲಿಕಾರ್ಜುನ ಖರ್ಗೆ ಅವರು ಕೇಳಿದ್ದರಲ್ಲಿ ತಪ್ಪಿಲ್ಲ. ಕೇಂದ್ರ ಸರ್ಕಾರ ಹೃದಯ ಶ್ರೀಮಂತಿಕೆಯನ್ನು ತೋರಿಸಬೇಕಾಗಿತ್ತು. ಒಳ್ಳೆಯ ಮನಸುಗಳು ಈ ಕೆಲಸಕ್ಕೆ ಹೃದಯ ಶ್ರೀಮಂತಿಕೆಯನ್ನು ತೋರಿಸಲಿ ಎಂದು ನಂಬಿದ್ದೇವೆ. ಈಗಲೂ ಕಾಂಗ್ರೆಸ್ ಪಕ್ಷದ ಬೇಡಿಕೆಗೆ ಮನ್ನಣೆ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ ಸಲ್ಲಿಸಿ ಹೊರ ಬಂದ ಬಳಿಕ ‘ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡುವಂತೆ’ ಮನವಿ ಬಗ್ಗೆ ಕೇಳಿದಾಗ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಇತಿಹಾಸ ಮನಮೋಹನ್ ಸಿಂಗ್ ಅವರನ್ನು ನೆನಪಿನಲ್ಲಿಟ್ಟುಕೊಳ್ಳುತ್ತದೆ. ನೀವು (ಮಾಧ್ಯಮದವರು), ವಿರೋಧ ಪಕ್ಷದವರು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ” ಎಂದು ಹೇಳುತ್ತಾ ಇದ್ದರು. ಅದು ಇಂದು ಆಗುತ್ತಿದೆ. ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮನಮೋಹನ್ ಸಿಂಗ್” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಮನಮೋಹನ್ ಸಿಂಗ್ ಎಂಬ ‘ಕುರಿಮರಿ’ಯ ಮುಂದೆ ಸೋತಿದ್ದ ‘ಉಕ್ಕಿನ ಮನುಷ್ಯ’ ಆಡ್ವಾಣಿ

“ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಹಾರ ಭದ್ರತಾ ಕಾಯ್ದೆ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ, ಶಿಕ್ಷಣದ ಹಕ್ಕು ಕಾಯ್ದೆಗಳು ಗ್ರಾಮೀಣ ಭಾಗದ ಜನರ ಏಳಿಗೆಗೆ ಕಾರಣವಾಯಿತು. ಮಾಹಿತಿ ಹಕ್ಕು ಸೇರಿದಂತೆ ಹಲವಾರು ಯೋಜನೆಗಳು ಆಡಳಿತದಲ್ಲಿ ಪಾರದರ್ಶಕತೆ ತಂದವು. ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತರ ಯೋಜನೆ ಜಾರಿಗೆ ತಂದರು. ತಾವು ಜಾರಿಗೊಳಿಸಿದ ಅನೇಕ ಕಾಯ್ದೆಗಳ ಮೂಲಕ ಮನಮೋಹನ್ ಸಿಂಗ್ ಅವರು ಜನ ಸಾಮಾನ್ಯರ ನಡುವೆ ಇಂದಿಗೂ ಜೀವಂತವಾಗಿದ್ದಾರೆ. ಸಿಂಗ್ ಅವರು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತಂದವರು” ಎಂದು ಹೇಳಿದರು.

“ಭೂಸ್ವಾಧೀನವಾದ ನಂತರ ಅನೇಕ ರೈತರಿಗೆ ತಕ್ಕನಾದ ಪರಿಹಾರ ಸಿಗುತ್ತಿರಲಿಲ್ಲ. ರೈತರ ಭೂಮಿಗೆ ನ್ಯಾಯಯುತವಾದ ಪರಿಹಾರ ನೀಡಿದರು. ಸಮಾಜದ ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿದರು. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳು ಮನಮೋಹನ್ ಸಿಂಗ್ ಅವರ ಕೆಲಸಗಳನ್ನು ಈಗ ನೆನಪಿಸಿಕೊಳ್ಳುತ್ತಿವೆ. ಸಂವಿಧಾನ ಹಾಗೂ ನಮ್ಮ ನೆಲದ ಕಾನೂನುಗಳನ್ನು ರಕ್ಷಣೆ ಮಾಡಿದವರು ಮನಮೋಹನ್ ಸಿಂಗ್. ಆರ್ಥಿಕ ಸಚಿವರಾಗಿದ್ದ ಕಾಲದಿಂದ ಇಲ್ಲಿಯತನಕ ಈ ದೇಶದ ಆರ್ಥಿಕತೆಯನ್ನು ಸುಭದ್ರವಾಗಿ ಇಡಲು ಶ್ರಮಿಸಿದರು. ಇದನ್ನು ವಿರೋಧ ಪಕ್ಷದವರು ಕೂಡ ಒಪ್ಪಿದ್ದಾರೆ” ಎಂದರು.

“ಸೋನಿಯಾ ಗಾಂಧಿ ಅವರು ತಮಗೆ ದೊರೆತ ಪ್ರಧಾನಿಯಾಗುವ ಅವಕಾಶವನ್ನು ನಿರಾಕರಿಸಿ, ಈ ದೇಶಕ್ಕೆ ಉತ್ತಮ ಆರ್ಥಿಕ ತಜ್ಞನ ಅವಶ್ಯಕತೆಯಿದೆ ಎಂದು ಅಧಿಕಾರ ತ್ಯಾಗ ಮಾಡಿದರು. ನೆಹರು- ಗಾಂಧಿ ಕುಟುಂಬದ ತ್ಯಾಗವನ್ನು ಈ ದೇಶದ ಇತಿಹಾಸ ಮರೆಯುವುದಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...