ಬರ ಘೋಷಣೆಗೆ ಕೇಂದ್ರದ ಮಾನದಂಡ ಇವತ್ತಿನ ಪರಿಸ್ಥಿತಿಗೆ ಸೂಕ್ತ ಆಗುತ್ತಿಲ್ಲ: ಕೃಷ್ಣಭೈರೇಗೌಡ

Date:

Advertisements
  • ಬರ ಘೋಷಣೆ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ಮಾಹಿತಿ ಪಡೆದಿದೆ
  • ‘ಮಾನದಂಡಗಳ ಸರಳೀಕರಣ ಕೋರಿ ಸಿಎಂ ಪತ್ರ ಬರೆದಿದ್ದಾರೆ’

ಬರ ಘೋಷಣೆ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ಮಾಹಿತಿ ಪಡೆದುಕೊಂಡಿದೆ. ಬರ ಘೋಷಣೆಗೆ ಏನೇನು ಮಾನದಂಡ ಎಂಬ ಬಗ್ಗೆಯೂ ಚರ್ಚೆ ಆಗಿದೆ. ಆದರೆ, ಕೇಂದ್ರ ಸರ್ಕಾರದವರು 2016 ಹಾಗೂ 2020 ರಲ್ಲಿ ಮಾನದಂಡ ಪರಿಷ್ಕರಣೆ ಮಾಡಿ ಮಾನದಂಡ ಬಿಗಿ ಮಾಡಿದ್ದಾರೆ. ಇವತ್ತಿನ ಪರಿಸ್ಥಿತಿಗೆ ಸೂಕ್ತ ಆಗುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಪ್ರಕೃತಿ ವಿಕೋಪದಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಬಳಿಕ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ಒದಗಿಸಿದರು.

“ಮಾನದಂಡ ಇಟ್ಟುಕೊಂಡು ಹೋದಾಗ ಶೇ 60 ರಷ್ಟು ಮಳೆ ಕೊರತೆ ಆಗಬೇಕು ಅಂತಾರೆ. ಕೇಂದ್ರ ಸರ್ಕಾರದ ಮಾನದಂಡ ಸರಳೀಕರಣ ಮಾಡಬೇಕು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಕೇಂದ್ರದಿಂದ ನಮಗೆ ಇನ್ನೂ ಮಾನದಂಡ ಸರಳೀಕರಣ ವಿಚಾರದಲ್ಲಿ ಉತ್ತರ ಬಂದಿಲ್ಲ. ಮಾನದಂಡಗಳ ಸರಳೀಕರಣ ಆಗಬೇಕು” ಎಂದು ಹೇಳಿದರು.

Advertisements

“ಕರ್ನಾಟಕದಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮಳೆ ಕೊರತೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಸೆಪ್ಟೆಂಬರ್​ ತಿಂಗಳಲ್ಲೂ ವಾಡಿಕೆಗಿಂತ ಮಳೆ ಕಡಿಮೆ ಆಗಬಹುದು. ಜೂನ್​ನಲ್ಲಿ ತೀವ್ರ ಮಳೆ ಕೊರತೆ, ಜುಲೈನಲ್ಲಿ ಹೆಚ್ಚುವರಿ ಮಳೆ, ಆಗಸ್ಟ್​​ನಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಹೀಗೆ ಮುಂದುವರಿದರೆ ಎಲ್ಲದಕ್ಕೂ ನಾವು ಸನ್ನದ್ಧರಾಗಬೇಕಾಗುತ್ತದೆ” ಎಂದರು.

“ಆಗಸ್ಟ್​ನಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಸಭೆ ಮಾಡಿದ್ದೇವೆ. ಸಭೆಯಲ್ಲಿ ಮೇವಿನ ಸ್ಥಿತಿ, ಜಲಾಶಯಗಳ ನೀರಿನ ಸಂಗ್ರಹ ಸ್ಥಿತಿಗತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇವೆ. ಬಿತ್ತನೆ ಬೆಳೆಗಳು ಒಣಗುತ್ತಿರುವುದರಿಂದ ಕ್ರಮ ತೆಗೆದುಕೊಳ್ಳಬೇಕಿದೆ” ಎಂದು ಹೇಳಿದರು.

“ರಾಜ್ಯದಲ್ಲಿ ಕುಡಿಯುವ ನೀರಿಗೆ ಅಂತಹ ಸಮಸ್ಯೆ ಏನೂ ಆಗಿಲ್ಲ. 140ಕ್ಕೂ ಹೆಚ್ಚು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜಾನುವಾರು ಮೇವು 15-30 ವಾರಗಳಿಗೆ ಆಗುವಷ್ಟು ಸಂಗ್ರಹವಿದೆ. ಆಲಮಟ್ಟಿ ಜಲಾಶಯ ಶೇ 100 ರಷ್ಟು ಭರ್ತಿಯಾಗಿದೆ. ಬೆಳೆಗಳ ಪರಿಸ್ಥಿತಿ ಬಗ್ಗೆ ತಿಳಿಯಲು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹೋಗಬೇಕು. ಬೆಳೆ ಸಮೀಕ್ಷೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. 120 ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ಮಾಡಿ 10 ದಿನದಲ್ಲಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ಶೇ.23 ರಷ್ಟು ಮಳೆ ಕೊರತೆ

“ರಾಜ್ಯದಲ್ಲಿ ಆಗಸ್ಟ್‌ ಮಾಹೆಯಲ್ಲಿ ರಾಜ್ಯಾದ್ಯಂತ ಅನೇಕ ಭಾಗಗಳಲ್ಲಿ ಮಳೆ ಕೊರತೆಯಾಗಿದೆ. ರಾಜ್ಯದಲ್ಲಿ ಜೂನ್‌ 1 ರಿಂದ ಆಗಸ್ಟ್‌21 ರವರೆಗೆ 487 ಮಿ.ಮೀ ಮಳೆಯಾಗಿದ್ದು, ವಾಡಿಕೆ ಮಳೆ (635 ಮಿ.ಮೀ)ಗೆ ಹೋಲಿಸಿದಾಗ ಶೇ.23 ರಷ್ಟು ಮಳೆ ಕೊರತೆಯಿದೆ. ಮುಂಗಾರು ಅವಧಿಗೆ ಒಟ್ಟು 82.35 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಹೊಂದಿದ್ದು, 04-08-2023 ರವರೆಗೆ 51.87 ಲಕ್ಷ ಹೆಕ್ಟೇರ್‌ ಬಿತ್ತನೆಯಾಗಿದೆ. ಇದೇ ಅವಧಿಯ ವಾಡಿಕೆ ಬಿತ್ತನೆಗೆ (60.26 ಲಕ್ಷ ಹೆ) ಹೋಲಿಸಿದಾಗ ಶೇ.89 ರಷ್ಟು ಬಿತ್ತನೆಯಾಗಿದೆ. ಜುಲೈ ತಿಂಗಳಲ್ಲಿ ಬಿತ್ತನೆಯಾದ ಕೆಲವು ಬೆಳೆಗಳು ಆಗಸ್ಟ್‌ ತಿಂಗಳ ಮಳೆ ಹಾಗೂ ತೇವಾಂಶ ಕೊರತೆ ಅನುಭವಿಸುತ್ತಿವೆ. ಮಳೆ ಕೊರತೆ ಮುಂದುವರೆದ ಪಕ್ಷದಲ್ಲಿ ಬೆಳೆಗಳು ಒಣಗುವ ಸಾಧ್ಯತೆ ಇದೆ” ಎಂದು ತಿಳಿಸಿದರು.

“ರಾಜ್ಯದ 14 ಪ್ರಮುಖ ಜಲಾಶಯಗಳ ಸಂಗ್ರಹಣಾ ಸಾಮರ್ಥ್ಯ 896 ಟಿಎಂಸಿಗಳಾಗಿದ್ದು, ಪ್ರಸ್ತುತ ಅವಧಿಯಲ್ಲಿ 618 ಟಿಎಂಸಿ ನೀರು ಸಂಗ್ರಹವಾಗಿದೆ. ಇದು ಒಟ್ಟು ಸಂಗ್ರಹಣದ ಶೇ.69 ರಷ್ಟಿರುತ್ತದೆ. ಕಳೆದ ಸಾಲಿನ ಇದೇ ಅವಧಿಯಲ್ಲಿ 796 ಟಿಎಂಸಿ ನೀರು ಸಂಗ್ರಹವಾಗಿತ್ತು. ರಾಜ್ಯದ ಕಾವೇರಿ ಕಣಿವೆಯ ಜಲಾಶಯಗಳಲ್ಲಿ ಒಟ್ಟು ಸಂಗ್ರಹಣಾ 114 ಟಿಎಂಸಿ ಯಾಗಿದ್ದು, ಇಲ್ಲಿಯವರೆಗೆ 80 ಟಿಎಂಸಿ ನೀರು ಸಂಗ್ರಹಣವಾಗಿದೆ. ರಾಜ್ಯದ ಕೃಷ್ಣ ಜಲಾನಯನ ಪ್ರದೇಶದಲ್ಲಿ 6 ಜಲಾಶಯಗಳಿದ್ದು, ಅವುಗಳ ಒಟ್ಟು ಸಾಮರ್ಥ್ಯ 422 ಟಿಎಂಸಿಗಳಾಗಿದ್ದು, ಇಲ್ಲಿಯವರೆಗೆ 348 ಟಿಎಂಸಿ ನೀರು ಸಂಗ್ರಹವಾಗಿದೆ. ರಾಜ್ಯದ ವಿದ್ಯುತ್‌ಚ್ಚಕ್ತಿ ಉತ್ಪಾದನಾ ಜಲಾಶಯಗಳಾದ ಲಿಂಗನಮಕ್ಕಿ, ಸೂಪ ಮತ್ತು ವರಾಹಿ ಜಲಾಶಯಗಳ ಒಟ್ಟು ಸಾಮರ್ಥ್ಯ 328 ಟಿಎಂಸಿಯಾಗಿದ್ದು, ಇಲ್ಲಿಯವರೆಗೂ ಕೇವಲ 165 ಟಿಎಂಸಿ ನೀರು ಶೇಖರಣೆಯಾಗಿದೆ” ಎಂದು ಮಾಹಿತಿ ನೀಡಿದರು.

ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆ: ಚಲುವರಾಯಸ್ವಾಮಿ

ರಾಜ್ಯದಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಬರ ಘೋಷಣೆಗೆ ಮುನ್ನ ಕೇಂದ್ರದ ಮಾನದಂಡದಂತೆ ಮಾಸಾಂತ್ಯದೊಳಗೆ ಬೆಳೆ ಸಮೀಕ್ಷೆ ನಡೆಸಿ ವರದಿ ಪಡೆಯಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ. ನಂತರ ಬರ ಘೋಷಣೆಯಾಗಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

“ರಾಜ್ಯದ 27 ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಎದುರಾಗಿದೆ, ಮುಂದಿನ ಒಂದೆರೆಡು ದಿನ ಹೀಗೆ ಪರಿಸ್ಥಿತಿ ಮುಂದುವರೆದರೆ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ, ಅದನ್ನು ನಿಭಾಯಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ” ಎಂದರು.

“ಈಗಾಗಲೇ ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. 2016 ಹಾಗೂ 2020ರ ಮಾರ್ಗಸೂಚಿ ಅನ್ವಯ ಬರ ಘೋಷಣೆಗೆ ಮೊದಲು ಕೆಲವೊಂದು ಮಾನದಂಡಗಳನ್ನು ಪರಿಗಣಿಸಲೇಬೇಕಾಗಿದೆ. ಹಾಗಾಗಿ ನಾಳೆಯಿಂದಲೇ ಈ ಎಲ್ಲ ಜಿಲ್ಲೆಗಳ 121 ತಾಲ್ಲೂಕುಗಳಲ್ಲಿ (ಗ್ರೌಡ್ ಟ್ರುಥ್ /ವೆರಿಫಿಕೇಷನ್ ಗಾಗಿ) ಬೆಳೆ ಸಮೀಕ್ಷೆ ‌ನಡೆಸಿ ಜಿಲ್ಲಾಧಿಕಾರಿ ಮೂಲಕ ವರದಿ ಪಡೆಯಲಾಗುವುದು ಎಂದು ಸಚಿವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X