ಹೆಚ್‌ಡಿಕೆ ವಿರುದ್ಧ ಅವಹೇಳನಕಾರಿ ಪದ ಬಳಕೆ: ಕ್ಷಮೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Date:

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

- Advertisement -

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಜನಪ್ರತಿನಿಧಿ, ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಲೋಕಾಯುಕ್ತ ಎಡಿಜಿಪಿಗೆ ಸರ್ವೀಸ್ ಕಂಡಕ್ಟ್ ನಿಯಮದ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಪ್ರಲ್ಹಾದ್ ಜೋಷಿ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಎಚ್ ಡಿ ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಅವರು ಏಕವಚನದಲ್ಲಿ ಮಾತನಾಡಿಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

ಎಚ್‌ ಡಿ ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದದಲ್ಲಿ ಸಂಬೋಧನೆ ಮಾಡಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಪ್ರಲ್ಹಾದ್ ಜೋಷಿ ಎಚ್ಚರಿಸಿದರು.

ಸರ್ಕಾರದ ಆದೇಶವಿದ್ದರೆ ತನಿಖೆ ನಡೆಸಲಿ. ಎಚ್‌ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರೆ ಗೌರವಯುತ ಭಾಷೆಯಲ್ಲಿ, ಸಭ್ಯ ಪದಗಳಲ್ಲಿ ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಈ ರೀತಿ ಕೆಟ್ಟದಾಗಿ ಸಂಬೋಧಿಸುವುದು ಯಾವುದೇ ಅಧಿಕಾರಿಗಳಿಗೂ ಶೋಭೆ ತರುವುದಿಲ್ಲ ಎಂದು ಸಚಿವ ಜೋಶಿ ಹೇಳಿದರು

ಒಬ್ಬ ಜನಪ್ರತಿನಿಧಿ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ಇದು ಕಾಂಗ್ರೆಸ್‌ಗೆ ಮುಳುವಾಗಲಿದೆ. ಕಾಂಗ್ರೆಸ್ ಎಂಥೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆಯಲ್ಲ ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...