ಬರ ಅಧ್ಯಯನ ಮುಗಿಸಿದ ಕೇಂದ್ರ ತಂಡದಿಂದ ಶೀಘ್ರ ಪರಿಹಾರ ಬಿಡುಗಡೆ: ಸಚಿವ ಕೃಷ್ಣಬೈರೇಗೌಡ ವಿಶ್ವಾಸ

Date:

Advertisements
  • ಎರಡನೇ ಹಂತದಲ್ಲಿ ಮತ್ತೆ 21 ತಾಲೂಕುಗಳ ಬರ ಘೋಷಣೆಗೆ ಸಿದ್ದತೆ
  • ಕೇಂದ್ರ ಸಚಿವರ ಭೇಟಿಗೆ ಇಂದು ಮತ್ತೊಂದು ಪತ್ರ; ಹಸಿರು ಬರದ ಬಗ್ಗೆ

ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕೇಂದ್ರ ಅಧ್ಯಯನ ತಂಡ ರಾಜ್ಯ ಸರ್ಕಾರದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಾರದೊಳಗೆ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಿದೆ. ಶೀಘ್ರದಲ್ಲೇ ಬರ ಪರಿಹಾರ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಕೃಷ್ಣಬೈರೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳ ಜೊತೆಗಿನ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ‘ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಕಳೆದ ಮೂರು ದಿನಗಳಲ್ಲಿ ಮೂರು ತಂಡವಾಗಿ ರಾಜ್ಯದ ಎಲ್ಲ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಬೆಳೆ ಹಾನಿಯ ವಾಸ್ತವ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ರೈತರು ಹಾಗೂ ಜನಪ್ರತಿನಿಧಿಗಳ ಜೊತೆಗೂ ಚರ್ಚಿಸಿದ್ದಾರೆ’ ಎಂದು ತಿಳಿಸಿದರು.

bara

‘ಬರ ಘೋಷಣೆ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯು ವಸ್ತುಸ್ಥಿತಿಯಿಂದ ಕೂಡಿದೆ ಎಂದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಬರ ಪರಿಹಾರ ಹಣ ರಾಜ್ಯಕ್ಕೆ ಸಂದಾಯವಾಗಲಿದೆ ಎಂಬ ವಿಶ್ವಾಸ ಇದೆ. ಆದರೆ ಎಷ್ಟು ಹಣ ಬಿಡುಗಡೆ ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ’ ಎಂದರು.

Advertisements

‘ಬರ ಪರಿಶೀಲನೆ ನಂತರ ಕೇಂದ್ರ ತಂಡ ನಮ್ಮ ಜೊತೆಯೂ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದ ರೈತರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇದೆ ಎಂದು ಸ್ವತಃ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ’ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

195 ತಾಲೂಕುಗಳ ಜೊತೆಗೆ ಎರಡನೇ ಹಂತದಲ್ಲಿ ಕೇಂದ್ರದ ಮಾನದಂಡದಂತೆ ಮತ್ತೆ 21 ತಾಲೂಕುಗಳ ಬರ ಘೋಷಣೆಗೆ ಸಿದ್ದತೆ ನಡೆಸಲಾಗಿದೆ. ಅಕ್ಟೋಬರ್ ತಿಂಗಳ ಕೊನೆಯವರೆಗೆ ಮತ್ತೊಂದು ಹಂತದಲ್ಲಿ ಬರ ಪೀಡಿತ ತಾಲೂಕುಗಳ ಘೋಷಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ಇದೆ. ಹೀಗಾಗಿ ಉಳಿದ 41 ತಾಲೂಕುಗಳ ಪೈಕಿ 11 ಜಿಲ್ಲೆಗಳ 21 ತಾಲೂಕುಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಬೆಳೆ ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

bara 2

ರಾಜ್ಯದ ಸಣ್ಣ-ಅತಿಸಣ್ಣ ರೈತರ ಅಂಕಿಸಂಖ್ಯೆ ಬಗ್ಗೆ ಕೇಂದ್ರ ಸರ್ಕಾರದ ಬಳಿ ಇರುವ ಮಾಹಿತಿ ಅವಾಸ್ತವವಾಗಿದೆ. ಕೇಂದ್ರದ ಮಾಹಿತಿಯ ಪ್ರಕಾರ ರಾಜ್ಯದ ಸಣ್ಣ-ಅತಿಸಣ್ಣ ರೈತರ ಸಂಖ್ಯೆ ಶೇ.46 ರಷ್ಟು ಮಾತ್ರ. ಆದರೆ, ವಾಸ್ತವದಲ್ಲಿ ಈ ಸಂಖ್ಯೆ ಶೇ.60ಕ್ಕೂ ಅಧಿಕವಾಗಿದೆ. ಈ ಮಾಹಿತಿಯನ್ನು ಕೇಂದ್ರಕ್ಕೆ ದೃಢಪಡಿಸಲು ಕೆಲವು ಪೂರಕ ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ಇನ್ನು ಒಂದು ವಾರದಲ್ಲಿ ಈ ಮಾಹಿತಿಯನ್ನು ಕೇಂದ್ರಕ್ಕೆ ನೀಡಲಾಗುವುದು ಎಂದರು.

ಹಸಿರು ಬರಕ್ಕೆ ಕೇಂದ್ರ ತಂಡ ಒಪ್ಪಿಗೆ
ಕೆಲವು ಬರ ಪೀಡಿತ ತಾಲೂಕುಗಳಲ್ಲಿ ಹಸಿರು ತೆನೆಗಳು ಕಾಣಿಸಿಕೊಳ್ಳುತ್ತಿವೆ. ಆದರೆ, ಬೆಳೆ ಮಾತ್ರ ರೈತರ ಕೈಸೇರುತ್ತಿಲ್ಲ. ಮನವಿ ಪತ್ರದಲ್ಲಿ ಇದನ್ನು ರಾಜ್ಯ ಸರ್ಕಾರ ಹಸಿರು ಬರ ಎಂದು ಉಲ್ಲೇಖಿಸಿತ್ತು. ಹಲವೆಡೆ ಬರ ಪರಿಶೀಲನೆ ನಡೆಸಿದ ಕೇಂದ್ರ ಅಧ್ಯಯನ ತಂಡಕ್ಕೆ ವಿಜ್ಞಾನಿಗಳ ಮೂಲಕ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗಿದೆ. ಹೀಗಾಗಿ ಹಸಿರು ಬರವನ್ನು ಕೇಂದ್ರದ ತಂಡವೂ ಒಪ್ಪಿಕೊಂಡಿದೆ ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ರೈತರ ಪರವಾಗಿಲ್ಲ, ಈ ಯೋಜನೆಯಲ್ಲಿ ಸಾಕಷ್ಟು ಅನಾನುಕೂಲತೆಗಳಿವೆ. ಈ ವಿಚಾರವನ್ನು ಕೇಂದ್ರದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡುವಂತೆ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X