ಎಸ್‌ಸಿ/ಎಸ್‌ಟಿ, ಒಬಿಸಿಗಳಿಗೆ ಮೀಸಲಾದ ಭರ್ತಿಯಾಗದ ಹುದ್ದೆಗಳ ಬಗ್ಗೆ ಕೇಂದ್ರ ಮಾಹಿತಿ ಮರೆಮಾಚುತ್ತಿದೆ: ಆರ್‌ಟಿಐ ಕಾರ್ಯಕರ್ತ

Date:

ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳು(ಎಸ್‌ಟಿ), ಪರಿಶಿಷ್ಟ ಪಂಗಡಗಳು(ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳಿಗೆ(ಒಬಿಸಿ) ಭರ್ತಿಯಾಗದ ಮೀಸಲಾತಿ ಹುದ್ದೆಗಳ ಕುರಿತು ನಿರ್ಣಾಯಕ ಮಾಹಿತಿಯನ್ನು ಮರೆಮಾಚುವ ಪ್ರಯತ್ನವನ್ನು ಮಾಡುತ್ತಿದೆ ಎಂದು ಕಾಮನ್‌ವೆಲ್ತ್ ಮಾನವ ಹಕ್ಕುಗಳ ಉಪಕ್ರಮದ(CHRI) ನಿರ್ದೇಶಕ ಮತ್ತು ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಹೇಳಿದ್ದಾರೆ.

- Advertisement -

2024ರ ಡಿಸೆಂಬರ್‌ ತಿಂಗಳಲ್ಲಿ ಎಸ್‌ಸಿ/ಎಸ್‌ಟಿಗಳ ಕಲ್ಯಾಣ ಕುರಿತು ಸಂಸದೀಯ ಸಮಿತಿಯ ವರದಿಯನ್ನು ಆಧರಿಸಿ ನಾಯಕ್ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಹಾಗೆಯೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡದಿರುವುದು, ಸಾರ್ವಜನಿಕ ವಲಯದ ಸಂಸ್ಥೆಗಳು, ಸಚಿವಾಲಯಗಳು ಮತ್ತು ಬ್ಯಾಂಕುಗಳಲ್ಲಿ ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯ ಮೊದಲಾದವುಗಳ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಪಿಎಂ ಕೇರ್ಸ್‌ ಹಗರಣ | ಆರ್‌ಟಿಐ ಅರ್ಜಿಗೆ ಉತ್ತರಿಸಲು ಕೇಂದ್ರ ಹಿಂಜರಿಯುವುದೇಕೆ?

ಖಾಲಿ ಹುದ್ದೆಗಳ ಕುರಿತು ದತ್ತಾಂಶ ಮತ್ತು ಮೀಸಲಾತಿ ನೀತಿಗಳನ್ನು ಜಾರಿಗೊಳಿಸಲು ಸಂಪರ್ಕ ಅಧಿಕಾರಿಗಳ ನೇಮಕಾತಿಗಾಗಿ ನಾಯಕ್ ವಿವಿಧ ಇಲಾಖೆಗಳಿಗೆ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಗಳು (ಸಿಪಿಐಒಗಳು) ನಾಯಕ್ ಅವರಿಗೆ ಹಿಂದಿನ ವರ್ಷಗಳ ಅಪ್ರಸ್ತುತ ನೇಮಕಾತಿ ಅಂಕಿಅಂಶಗಳನ್ನು ನೀಡಿದ್ದರು. ಹಾಗೆಯೇ ನಿರ್ದಿಷ್ಟ ಪ್ರಶ್ನೆಗಳಿಗೆ ಸರಿಯಾದ ಉತ್ತರವೂ ನೀಡಿಲ್ಲ ಎಂದು ನಾಯಕ್ ಆರೋಪಿಸಿದ್ದಾರೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಖಾಲಿ ಹುದ್ದೆಗಳ ಕುರಿತು ದತ್ತಾಂಶ ಹೊಂದಿಲ್ಲ ಎಂದು ಹೇಳಿಕೊಂಡಿದೆ. ಹಾಗೆಯೇ ಆರ್‌ಟಿಐ ಕಾಯ್ದೆಯ ಕೆಲವು ನಿಬಂಧನೆಗಳನ್ನು ಉಲ್ಲೇಖಿಸಿ ಈ ಮಾಹಿತಿ ಸಂಗ್ರಹಿಸಲಾಗುವುದಿಲ್ಲ ಎಂದು ಕೇಂದ್ರ ಹೇಳಿದೆ. ಇದನ್ನು ಟೀಕಿಸಿರುವ ಆರ್‌ಟಿಐ ಕಾರ್ಯಕರ್ತ, “ಇದು ರಾಜಕೀಯವಾಗಿ ದತ್ತಾಂಶಗಳನ್ನು ಮರೆಮಾಚುವ ಉದ್ದೇಶಪೂರ್ವಕ ಪ್ರಯತ್ನ ನಡೆದಿದೆ. ಡಿಒಪಿಟಿ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದ್ದಾರೆ.

ಸರ್ಕಾರವು ಹೆಚ್ಚಾಗಿ ಎಸ್‌ಸಿ/ಎಸ್‌ಟಿಗಳು ಮತ್ತು ಒಬಿಸಿಗಳ ನೇಮಕಾತಿ ಸಂಖ್ಯೆಯನ್ನು ತೋರಿಸುತ್ತದೆ. ಆದರೆ ಈ ನೇಮಕಾತಿಗಳು ಪ್ರಧಾನವಾಗಿ ಕೆಳಮಟ್ಟದಲ್ಲಿ ನಡೆದಿದೆ. ನಿರ್ಧಾರ ತೆಗೆದುಕೊಳ್ಳುವಂತಹ ಪ್ರಮುಖ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯವಿಲ್ಲ ಎಂದು ನಾಯಕ್ ಹೇಳಿದ್ದಾರೆ.

ಇನ್ನು ಈ ಆರೋಪಕ್ಕೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕೂಡಾ ಧ್ವನಿಗೂಡಿಸಿದ್ದಾರೆ. “ವರ್ಷದಿಂದ ವರ್ಷಕ್ಕೆ ಒಬಿಸಿಗಳು, ಎಸ್‌ಸಿಗಳು ಮತ್ತು ಎಸ್‌ಟಿಗಳಿಗೆ ಘೋರ ಅನ್ಯಾಯವಾಗುತ್ತಿದೆ. ವರ್ಷಗಳಿಂದ ಖಾಲಿಯಾಗಿರುವ ಈ ಹುದ್ದೆಗಳನ್ನು ಯಾವುದೇ ನೆಪವಿಲ್ಲದೆ ತಕ್ಷಣವೇ ಭರ್ತಿ ಮಾಡಬೇಕಾಗಿದೆ” ಎಂದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ, “ಸಮಸ್ಯೆ ಕೇಂದ್ರ ಸರ್ಕಾರದ ಚಿಂತನಾ ಪ್ರಕ್ರಿಯೆಯಲ್ಲಿದೆ. ಅದನ್ನು ಮೊದಲು ಸರಿಪಡಿಸಬೇಕು” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...