ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Date:

ಚೈತ್ರಾ ಮತ್ತು ತಂಡದಿಂದ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ, ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.

- Advertisement -

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಅಭಿನವ ಹಾಲಶ್ರೀ, ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹಾಲಾಶ್ರೀಗೆ ಜಾಮೀನು ನೀಡದಂತೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು. ಈಗ ಈ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಹಾಲಶ್ರೀ ಪರ ವಕೀಲರು ಮನವಿ ಮಾಡಿದ್ದರು.

ಇದನ್ನು ಓದಿದ್ದೀರಾ? ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದವರ ಮೇಲೆ ಎಫ್‌ಐಆರ್

ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೂಡ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಅಷ್ಟಲ್ಲದೆ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ಸೇರಿದಂತೆ ಕೆಲವರ ವಿರುದ್ಧ ಅಭಿನವ ಹಾಲಶ್ರೀ ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...