ವಂಚನೆ ಪ್ರಕರಣ | 7ನೇ ಆರೋಪಿ ಶ್ರೀಕಾಂತ್ ಹೆಸರಲ್ಲಿ ಮನೆ ಕಟ್ಟಿಸುತ್ತಿದ್ದ ಚೈತ್ರಾ ಕುಂದಾಪುರ

Date:

  • ವಂಚನೆ ಪ್ರಕರಣದಲ್ಲಿ ಈವರೆಗೆ ಏಳು ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು
  • ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣ

ರಾಜ್ಯಾದ್ಯಂತ ಚರ್ಚೆಗೀಡಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸ್ ವಶದಲ್ಲಿರುವ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಉಡುಪಿಯಲ್ಲಿ ಹೊಸ ಮನೆಯೊಂದು ಕಟ್ಟಿಸುತ್ತಿದ್ದರು ಎಂದು ತಿಳಿದುಬಂದಿದೆ.

ಚೈತ್ರಾ ಗೆಳೆಯನ ಹೆಸರಲ್ಲಿ ಮನೆ ಕಟ್ಟಿಸುತ್ತಿರುವುದು ಪತ್ತೆಯಾಗಿದ್ದು, ಜಾಗ ಖರೀದಿಸಿ, ಎರಡು ಅಂತಸ್ತಿನ ಮನೆ ಕಟ್ಟಲಾಗುತ್ತಿತ್ತು ಎಂಬ ಮಾಹಿತಿ ಹೊರ ಬಿದ್ದಿದೆ.

ಉಡುಪಿ ಜಿಲ್ಲೆಯ ಕಾರ್ಕಳದ ಕಣಜಾರು ಪ್ರದೇಶದಲ್ಲಿ ಜಾಗ ಖರೀದಿ ಮಾಡಿದ್ದು, ವಂಚನೆ ಪ್ರಕರಣದಲ್ಲಿ ಏಳನೇ ಆರೋಪಿಯಾಗಿರುವ ಶ್ರೀಕಾಂತ್‌ ಹೆಸರಿನಲ್ಲಿ ಮನೆ ಕಟ್ಟಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಶ್ರೀಕಾಂತ್‌ನ್ನು ವಶಕ್ಕೆ ಪಡೆದ ಬಳಿಕ ಮನೆಯ ಕಾಮಗಾರಿ ಅರ್ಧದಲ್ಲೇ ನಿಂತಿದೆ ಎನ್ನಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

20 ಸೆಂಟ್ಸ್‌ ಜಾಗದಲ್ಲಿ ಮನೆಯನ್ನು ಚೈತ್ರಾ ನೇತೃತ್ವದಲ್ಲಿ ಕಟ್ಟಿಸುತ್ತಿದ್ದು, ಮನೆ ಕಾಮಗಾರಿಯ ಸಂದರ್ಭದಲ್ಲಿ ಚೈತ್ರಾ ಕುಂದಾಪುರ ಆಗಾಗ್ಗೆ ಆ ಪ್ರದೇಶಕ್ಕೆ ಬರುತ್ತಿದ್ದರು ಎಂದು ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಹೀಗಾಗಿ, ಮನೆಯ ಸಂಪೂರ್ಣ ವಿವರಗಳನ್ನು ಕಲೆ ಹಾಕುತ್ತಿರುವ ಸಿಸಿಬಿ ಪೊಲೀಸರ ತಂಡವೊಂದು ಆರೋಪಿ ಶ್ರೀಕಾಂತ್‌ನನ್ನು ಉಡುಪಿಗೆ ಕರೆದೊಯ್ದಿದ್ದಾರೆ. ಅಲ್ಲದೇ, ಮನೆಯನ್ನು ಜಪ್ತಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಚೈತ್ರಾ ಕುಂದಾಪುರ ಬೇನಾಮಿಯಾಗಿಯೂ ಕೆಲವು ಆಸ್ತಿ ವಿವರ ಹಾಗೂ ಲಕ್ಷಾಂತರ ರೂ.ಹಣವನ್ನು ಕೂಡ ಬ್ಯಾಂಕ್ ಲಾಕರಲ್ಲಿ ಇಟ್ಟಿರುವುದಾಗಿಯೂ ವರದಿಯಾಗಿದೆ.

ಗೋವಿಂದ ಬಾಬು ಪೂಜಾರಿ ಅವರಿಗೆ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ, ವಂಚಿಸಿದ ಆರೋಪದ ಮೇಲೆ ಪೊಲೀಸರು ಚೈತ್ರಾ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಈವರೆಗೆ ಒಟ್ಟು ಏಳು ಮಂದಿಯನ್ನು ಈವರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಕರಣದ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ತಲೆಮರೆಸಿಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...

ಬೀದರ್‌ | ಕಾಂಗ್ರೆಸ್‌ನಿಂದ ಮಾದಿಗ ಸಮುದಾಯದ ಕಡೆಗಣನೆ: ಫರ್ನಾಂಡಿಸ್‌ ಹಿಪ್ಪಳಗಾಂವ್

2‌023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮಾದಿಗ ಸಮುದಾಯದ ಒಬ್ಬರಿಗೂ...