ಚಲುವರಾಯಸ್ವಾಮಿ ನೂರಕ್ಕೆ ನೂರರಷ್ಟು ಜೋಕರ್: ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವ್ಯಂಗ್ಯ

Date:

“ಚಲುವರಾಯಸ್ವಾಮಿ ಜೋಕರ್. ಈ ಜೋಕರ್ ಸಂಸ್ಕೃತಿ ಶುರುವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು‌ ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು? ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ” ಎಂದು ವ್ಯಂಗ್ಯವಾಡಿದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಯವರು ಚಲುವರಾಯಸ್ವಾಮಿ ನೂರಕ್ಕೆ ನೂರರಷ್ಟು ಜೋಕರ್ ಎಂದಿದ್ದಾರೆ.

- Advertisement -

“ಆತ ನನ್ನನ್ನು ಸಿಎಂ ಮಾಡಿದ ಎನ್ನುವುದು ಬಹುದೊಡ್ಡ ಜೋಕ್. ಶಾಸಕರು ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಆ ವ್ಯಕ್ತಿ ಮರೆಯಬಾರದು’ ಎಂದು ಸಚಿವ ಚಲುವರಾಯಸ್ವಾಮಿ ಅವರನ್ನು ಟೀಕಿಸಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿರುವ ಕೃಷಿ ಸಚಿವರ ಸವಾಲಿಗೆ ಪ್ರತಿಕ್ರಿಯಿಸಿ, “ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಸಿಎಂ ಆಗುವಾಗ ಎಂಎಲ್‌ಎಗಳು ಆ ವ್ಯಕ್ತಿಯನ್ನು ನೋಡಿ ಬಂದ್ರಾ? ಆ ವ್ಯಕ್ತಿಯನ್ನು ಮಂತ್ರಿ ಮಾಡಲು ನಾನು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಬೆಳಗಿನ ಜಾವ ಮೂರು ಗಂಟೆವರೆಗೆ ನಿದ್ರೆ ಮಾಡಲು ಬಿಡುತ್ತಿರಲಿಲ್ಲ ಆ ಆಸಾಮಿ” ಎಂದು ಕೊಂಕು ಮಾತನಾಡಿದ್ದರು. 

ಈ ಸುದ್ದಿ ಓದಿದ್ದೀರಾ? ಎಐಸಿಸಿ ಅಧಿವೇಶನಕ್ಕೆ ಗೈರಾಗಲಿರುವ ಪ್ರಿಯಾಂಕಾ ಗಾಂಧಿ

“ಆ ವ್ಯಕ್ತಿಗೆ ಇರುವ ಚಟ ನನಗೆ ಇಲ್ಲ. ಮಂಡ್ಯದಲ್ಲಿ ಆತನ ಚಟಗಳ ಬಗ್ಗೆ ಕೇಳಿದರೆ ಜನ ಹಾದಿ ಬೀದಿಯಲ್ಲಿ ಹೇಳುತ್ತಾರೆ. ಈ ಮನುಷ್ಯ ಎಷ್ಟು ಮನೆ ಹಾಳುಮಾಡಿದ್ದಾರೆ ಎಂಬುದು ನನಗೆ ಗೊತ್ತು” ಎಂದು ಹರಿಹಾಯ್ದಿದ್ದರು.  

ಮೈತ್ರಿ ಭದ್ರವಾಗಿದೆ, ಸಮಸ್ಯೆ ಇಲ್ಲ: ಎಚ್‌ಡಿಕೆ

‘ಜೆಡಿಎಸ್‌-ಬಿಜೆಪಿ ಮೈತ್ರಿ ಭದ್ರವಾಗಿದೆ. ಯಾರಿಗೂ ಸಂಶಯ ಬೇಡ. ಜೆಡಿಎಸ್‌-ಬಿಜೆಪಿ‌ ಮೈತ್ರಿ ಸಮನ್ವಯ ಸಮಿತಿ ರಚನೆ ಆಗಬೇಕೆಂದು ಡಿ ವಿ ಸದಾನಂದಗೌಡರೇ ಹೇಳಿದ್ದಾರೆ. ಹಲವಾರು ಹಿರಿಯ ನಾಯಕರೂ ಸಮನ್ವಯ ಸಮಿತಿ ಆಗಬೇಕೆಂದು ಸಲಹೆ ಮಾಡಿದ್ದಾರೆ. ಮೈತ್ರಿಗೆ ಯಾವುದೇ ರೀತಿಯ ಧಕ್ಕೆ ಇಲ್ಲ” ಎಂದು ಕುಮಾರಸ್ವಾಮಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...