ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ನಂಬರ್ ಒನ್: ಮಾಜಿ ಶಾಸಕ ಸುರೇಶ್‌ ಗೌಡ ಆರೋಪ

Date:

Advertisements
  • ‘300 ಕೋಟಿ ರೂ. ಚಲುವರಾಯಸ್ವಾಮಿ ಒಬ್ಬನೇ ಲೂಟಿ ಹೊಡೆದಿದ್ದಾನೆ
  • ‘ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ದುಡ್ಡನ್ನು ಏರ್‌ಲಿಫ್ಟ್ ಮಾಡುತ್ತಿದೆ’

ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ನಂಬರ್ ಒನ್.‌ ಅಧಿಕಾರ ಸಿಕ್ಕಾಗ ಜನರಿಗೆ ಒಳ್ಳೆಯದು ಮಾಡಬೇಕು. ಆದರೆ, ಇವರು ಅಧಿಕಾರಿಗಳ ವರ್ಗಾವಣೆಯಲ್ಲಿ 150 ಕೋಟಿ ರೂ., ಜಲಧಾರೆ ಯೋಜನೆ 100 ಕೋಟಿ ರೂ., ಅಧಿಕಾರಿಗಳ ಬಳಿ ಲೂಟಿ ಹೀಗೆ 300 ಕೋಟಿ ರೂ. ಚಲುವರಾಯಸ್ವಾಮಿ ಒಬ್ಬನೇ ಲೂಟಿ ಹೊಡೆದಿದ್ದಾನೆ ಎಂದು ಮಾಜಿ ಶಾಸಕ ಸುರೇಶ್‌ ಗೌಡ ಆರೋಪಿಸಿದರು.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ದುಡ್ಡನ್ನು ಏರ್‌ಲಿಫ್ಟ್ ಮಾಡುತ್ತಿದೆ. ಹಿಂದಿನ ಸರ್ಕಾರ ಜೆಸಿಬಿಯಲ್ಲಿ ಹಣ ತುಂಬುತ್ತಿದೆ ಎನ್ನುತ್ತಿದ್ದರು. ಆದರೆ ಈ ಸರ್ಕಾರ ಭ್ರಷ್ಟ ಹಣವನ್ನು ಏರ್‌ಲಿಫ್ಟ್ ಮಾಡುತ್ತಿದೆ. ಇವರು ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ” ಎಂದು ದೂರಿದರು.

“ಚಲುವರಾಯಸ್ವಾಮಿಗೆ ಬ್ರೈನ್ ಮ್ಯಾಪಿಂಗ್ ಮಾಡಬೇಕು. ಎಲ್ಲೆಲ್ಲಿ ಎಷ್ಟೆಷ್ಟು ತಿಂದಿದ್ದಾನೆ ಗೊತ್ತಾಗುತ್ತದೆ. ಕಾಂಗ್ರೆಸ್ ಪಕ್ಷದ ಯುವ ಅಧ್ಯಕ್ಷನದು ಬೆಂಗಳೂರಿನಲ್ಲಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದೆ. ಅಲ್ಲಿ ಚಲುವರಾಯಸ್ವಾಮಿ ಎಷ್ಟು ಬ್ಲಾಕ್‌ ಮನಿ ವೈಟ್ ಮಾಡಿದ್ದಾನೆ? ಅದೆಲ್ಲವೂ ಆಚೆ ಬರುತ್ತದೆ. ಬೆಳ್ಳೂರು ಕ್ರಾಸ್‌ನಲ್ಲಿ ಪೆಟ್ರೋಲ್ ಬಂಕ್​ ಮಾಲೀಕರ ಹತ್ತಿರ ಎಷ್ಟು ಕಲೆಕ್ಷನ್ ಮಾಡುತ್ತಿದ್ದಾನೆ?ಎಲ್ಲವೂ ಜನರಿಗೆ ಗೊತ್ತಾಗಲಿ” ಎಂದು ಕಿಡಿಕಾರಿದರು.

Advertisements

ಈ ಸುದ್ದಿ ಓದಿದ್ದೀರಾ? ‘ಹೊಲೆಗೇರಿ’ ಹೇಳಿಕೆ | ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್

“ತಿಂದವನು ಕಕ್ಕಲೇ ಬೇಕು. ಮುಂದೆ ಎಲ್ಲ ಗೊತ್ತಾಗುತ್ತೆ. ಅಧಿಕಾರಗಳು ಪತ್ರ ಬರೆದದ್ದು ಸತ್ಯ. ಬೆಂಗಳೂರಿ‌ನ 37 ಕ್ರೆಸೆಂಟ್ ಹೋಟೆಲ್‌ಗೆ ಅಧಿಕಾರಿಗಳನ್ನು ಕರೆಸಿಕೊಂಡು ಒತ್ತಡ ಹೇರಿದ್ದಾರೆ. ಎಲ್ಲ ಬಿಗಿ ಭದ್ರತೆ ಮಾಡಿಕೊಂಡು, ಅಧಿಕಾರಗಳು ಪತ್ರ ಬರೆದಿಲ್ಲ ಎಂದು ಸುಳ್ಳು ಹೇಳಿದ್ದಾರೆ. 37 ಕ್ರೆಸೆಂಟ್ ಹೋಟೆಲ್ ಹಾಗೂ ಆ ರಸ್ತೆಯ ಸಿಸಿಟಿವಿ ದೃಶ್ಯ ತೆಗೆಸಿ. ಆಗ ಯಾವ ಎಡಿ, ಜೆಡಿ ಯಾರೆಲ್ಲಾ ಹೋಗಿದ್ದರು ತಿಳಿಯುತ್ತದೆ” ಎಂದರು.

“ನನ್ನ ಚರಿತ್ರೆ ಬಗ್ಗೆ ಮಾತನಾಡುತ್ತಾನೆ. ಇವನ ಚರಿತ್ರೆ ಹಳಸಿ ಹೋಗಿದೆ. ಇವನ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ ನೊಣ ಬಿದ್ದ ನಮ್ಮ ತಟ್ಟೆಯನ್ನು ನೋಡುತ್ತಾನೆ. ನಾನು ಸೋತಿದ್ದೀನಿ, ಸತ್ತಿಲ್ಲ. 30 ರಿಂದ 40 ಸಾವಿರ ಅಂತರದಲ್ಲಿ ಸೋತಿದ್ದರೇ ರಾಜಕಾರಣವನ್ನೇ ಬಿಟ್ಟು ಬಿಡುತ್ತಿದ್ದೆ. 47 ಸಾವಿರ ಅಂತರದಲ್ಲಿ ಸೋತವನೆ ತಲೆ ಎತ್ತಿಕೊಂಡು ಬಂದಿದ್ದಾನೆ. ನಾನು 4 ಸಾವಿರ ಅಂತರದಲ್ಲಿ ಸೋತವನು ನಾನು ಏಕೆ ತಲೆ ಕೆಡಿಸಿಕೊಳ್ಳಬೇಕು. ನಾನು ಎಲ್ಲರಿಗೂ ಗೌರವ ಕೊಡುತ್ತೇನೆ. ಆದರೆ ಚಲುವರಾಯಸ್ವಾಮಿ ಬಗ್ಗೆ ನನಗೆ ಭಯವೂ ಇಲ್ಲ, ಗೌರವವೂ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ” ನನ್ನ ತಟ್ಟೆಯಲ್ಲಿ ನೊಣ ! ಅವನ ತಟ್ಟೆಯಲ್ಲಿ ಹೆಗ್ಗಣ !! ”
    ಆಹಾ ! ಎಂತಹ ಮಾತು ಸರ್.

    ಈ ಸಂದರ್ಭದಲ್ಲಿ ನನಗೆ ಇಂತಹುದೇ ಪೂರಕವಾದ ನುಡಿ ನೆನಪಾಗುತ್ತಿದೆ. ಅದುವೆ ” ಆನೆ ಕದ್ದರೂ ಕಳ್ಳ , ಅಡಿಕೆ ಕದ್ದರೂ ಕಳ್ಳ.”

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X