ಚಾಮರಾಜನಗರ | ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ; ಬಡಗಲಪುರ ನಾಗೇಂದ್ರ, ಮಹೇಶ್ ಪ್ರಭು ಮೇಲೆ ಹಲ್ಲೆ

Date:

ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ‘ಬಿಜೆಪಿ ಮತ್ತು ಮೈತ್ರಿ ಪಕ್ಷಗಳನ್ನು ಸೋಲಿಸಿ – ರೈತ ಸಮುದಾಯವನ್ನು ಉಳಿಸಿ’ ಎಂಬ ಅಭಿಯಾನವನ್ನು ರಾಜ್ಯವ್ಯಾಪಿಯಾಗಿ ನಡೆಸಲಾಗುತ್ತಿದ್ದು, ಇಂದು ಚಾಮರಾಜನಗರದಲ್ಲಿ ಅಭಿಯಾನ ನಡೆಸುತ್ತಿದ್ದಾಗ ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ.

ಇಂದು ಚಾಮರಾಜನಗರದ ಬೀದಿಗಳಲ್ಲಿ ಪ್ರಚಾರ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಚಾರ ಬಿರುಸಿನಿಂದ ನಡೆದು, ಅದನ್ನು ಮುಕ್ತಾಯಗೊಳಿಸಿಕೊಂಡು ರೈತ ಸಂಘದ ಕಛೇರಿಗೆ ಮುಖಂಡರು ಹಿಂದಿರುಗುತ್ತಿದ್ದಾಗ ಏಕಾಏಕಿ ದಾಳಿ ಮಾಡಿರುವ ಬಿಜೆಪಿ ಕಾರ್ಯಕರ್ತರು, ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ. ರೈತರ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ. ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ, ಮಹೇಶ್ ಪ್ರಭು ಅವರ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಭಿಯಾನವನ್ನು ತೀವ್ರಗೊಳಿಸಲು ರೈತ ಮುಖಂಡರ ತೀರ್ಮಾನ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಕಾರ್ಯಕರ್ತರ ಈ ನಡೆಯನ್ನು ಖಂಡಿಸಿರುವ ರೈತ ಮುಖಂಡರು, ಇದೊಂದು ಗೂಂಡಾಗಿರಿ ಎಂದು ಹೇಳಿದ್ದು, ಎಲ್ಲ ಪ್ರಜ್ಞಾವಂತರು ತೀವ್ರವಾಗಿ ಖಂಡಿಸಬೇಕೆಂದು ಮನವಿ ಮಾಡಿಕೊಂಡಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ವೀರಸಂಗಯ್ಯ, ಈ ಅಭಿಯಾನವನ್ನು ತೀವ್ರಗೊಳಿಸುವುದಾಗಿ ತಿಳಿಸಿದ್ದಾರೆ.

“ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯ ರೈತ ಸಂಘದ ಕಡೆಯಿಂದ “ಬಿಜೆಪಿ ಮತ್ತು ಮೈತ್ರಿ ಪಕ್ಷಗಳನ್ನು ಸೋಲಿಸಿ – ರೈತ ಸಮುದಾಯವನ್ನು ಉಳಿಸಿ” ಎಂಬ ಅಭಿಯಾನವನ್ನು ರಾಜ್ಯವ್ಯಾಪಿಯಾಗಿ ನಡೆಸುತ್ತಿದ್ದೇವೆ. ಏಪ್ರಿಲ್ 17ರಂದು ಅಮೃತ ಭೂಮಿಯಲ್ಲಿರುವ ಪ್ರೊ. ನಂಜುಂಡಸ್ವಾಮಿಯವರ ಸಮಾಧಿ ಬಳಿ ರೈತ ಸಂಕಲ್ಪ ಸ್ವೀಕರಿಸಿ ಅಭಿಯಾನವನ್ನು ಪ್ರಾರಂಭಿಸಲಾಗಿತ್ತು. ರಾಜ್ಯದ 130 ವಿಧಾನ ಸಭಾ ಕ್ಷೇತ್ರಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ. ರೈತ ಕಾರ್ಯಕರ್ತರು “ರೈತರ ಸಾಲ ಮನ್ನಾ ಮಾಡದ, ರೈತರ ಬೆಳೆಗೆ ಎಂ ಎಸ್ ಪಿ ನೀಡದ, ಬರದಿಂದ ರೈತರು ಕಂಗೆಟ್ಟಿದ್ದರೂ ಬಿಡಿಗಾಸ ಪರಿಹಾರ ನೀಡದ ಕೇಂದ್ರದ ಬಿಜೆಪಿ ಮತ್ತು ಮೈತ್ರಿ ಪಕ್ಷಗಳಿಗೆ ಮತ ನೀಡುವುದಿಲ್ಲ” ಎಂಬ ಪ್ರತಿಜ್ಞೆ ಸ್ವೀಕರಿಸುತ್ತಿದ್ದಾರೆ. ರೈತರ ಈ ಅಭಿಯಾನ ರೈತವಿರೋಧಿ, ಕಾರ್ಪೋರೇಟ್ ಸಾಕು ನಾಯಿಯಾಗಿರುವ ಬಿಜೆಪಿ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ” ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದ.ಕನ್ನಡ | ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ ಸಹಿಸಲು ಸಾಧ್ಯವೇ? ಬಿಜೆಪಿಗೆ ಮತ ಹಾಕಲು ‘ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರ!

“ನಮ್ಮ ಅಭಿಯಾನವನ್ನು ನಾವು ಮತ್ತಷ್ಟು ಬಿರುಸುಗೊಳಿಸುತ್ತೇವೆ. ಈ ಬಾರಿ ರೈತರೆಲ್ಲರೂ ಕೂಡಿ ಈ ದ್ರೋಹಿ ಪಕ್ಷಗಳಿಗೆ ಸರಿಯಾದ ರೀತಿಯಲ್ಲಿ ಓಟಿನ ಏಟನ್ನು ನೀಡುತ್ತೇವೆ. ಎರಡನೇ ಸುತ್ತಿನ ಮತದಾನ ನಡೆಯಲಿರುವ ಉತ್ತರ ಭಾಗದ ಕ್ಷೇತ್ರಗಳಲ್ಲೂ ಈ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರೆಸುತ್ತೇವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಕೆ ಎನ್ ರಾಜಣ್ಣ

"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ...

‘ಈ ದಿನʼ ಗ್ರೌಂಡ್‌ ರಿಪೋರ್ಟ್‌ 3 | ವಿಡಿಯೊ ಪ್ರಕರಣ; ಹಲವು ಮಹಿಳೆಯರ ರಾಜಕೀಯ ಮಹತ್ವಾಕಾಂಕ್ಷೆ ಮಣ್ಣುಪಾಲು

ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...