ಜಾರ್ಖಂಡ್‌ನ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂಪೈ ಸೊರೇನ್

Date:

Advertisements

ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಜಾರ್ಖಂಡ್‌ನ ನೂತನ ಸಿಎಂ ಆಗಿ ಚಂಪೈ ಸೊರೇನ್ ಅವರು ಶುಕ್ರವಾರ(ಫೆ.2) ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಜಾರ್ಖಂಡ್​​​ನ 12ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಂಚಿಯ ರಾಜಭವನದ ದರ್ಬಾರ್ ಹಾಲ್‌ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಂದಿನ 10 ದಿನಗಳಲ್ಲಿ ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಪ್ರದರ್ಶಿಸುವಂತೆ ಚಂಪೈ ಸೊರೆನ್ ಅವರಿಗೆ ರಾಜ್ಯಪಾಲರು ಸೂಚಿಸಿದ್ದಾರೆ.

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.

Advertisements

ಹೇಮಂತ್ ಸೊರೇನ್ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದ ಬಳಿಕ ಅಂಗೀಕರಿಸಿದ್ದರು. 24 ಗಂಟೆ ಕಳೆದ ಬಳಿಕವೂ ಕೂಡ, ನೂತನ ಸರ್ಕಾರ ರಚಿಸಲು ಚಂಪೈ ಸೊರೇನ್ ಅವರಿಗೆ ಬುಲಾವ್ ನೀಡಿರಲಿಲ್ಲ. ಇದು ಆಪರೇಷನ್ ಕಮಲಕ್ಕೆ ಸಂಚು ನಡೆಯುತ್ತಿದೆ ಎಂಬ ಅನುಮಾನಕ್ಕೆ ಕಾರಣವಾ ಹಿನ್ನೆಲೆಯಲ್ಲಿ ಎಲ್ಲ ಬೆಂಬಲಿಗ ಶಾಸಕರನ್ನು ಕೂಡಲೇ ಹೈದರಾಬಾದ್‌ಗೆ ಕರೆದೊಯ್ಯಲಾಗಿತ್ತು. ಈ ನಡುವೆಯೇ ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಚಂಪೈ ಸೊರೇನ್, ಸರ್ಕಾರ ರಚಿಸಲು ಕೋರಿದ್ದರು. ಬಳಿಕ ಇದಕ್ಕೆ ಅನುಮತಿಸಿದ ರಾಜ್ಯಪಾಲರು, ಇಂದು ಪ್ರಮಾಣ ವಚನವನ್ನು ಬೋಧಿಸಿದ್ದಾರೆ.

ಚಂಪೈ ಸೊರೇನ್ ಅವರೊಂದಿಗೆ ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಮತ್ತು ಕಾಂಗ್ರೆಸ್‌ನ ಅಲಂಗೀರ್ ಆಲಂ ಸೇರಿದಂತೆ ಇಬ್ಬರು ನಾಯಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಚಂಪೈ ಸೊರೇನ್ ಅವರು ಸಿಡೋ ಕನ್ಹು ಉದ್ಯಾನವನದಲ್ಲಿರುವ ವೀರ ಹುತಾತ್ಮ ಸಿಡೋ ಕನ್ಹು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X