ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರ | ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಮಾಜಿ ಸಂಸದ ಪ್ರತಾಪ್‌ ಸಿಂಹ

Date:

ಬಿಜೆಪಿಯಲ್ಲಿ ಹೊಸದಾಗಿ ಸೃಷ್ಟಿಯಾಗಿರುವ ಭಿನ್ನಮತೀಯ ನಾಯಕರ ಜೊತೆ ಗುರುತಿಸಿಕೊಂಡು ಸುದ್ದಿಯಾಗಿರುವ ಮೈಸೂರು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.‌

- Advertisement -

ಚಾಮುಂಡೇಶ್ವರಿ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಯ ಕ್ರಮಕ್ಕೆ ಸಂಸದ ಯದುವೀರ್ ಮತ್ತು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದರೆ ಪ್ರತಾಪ್ ಸಿಂಹ ಅವರು ಸರ್ಕಾರ ಅತ್ಯುತ್ತಮ ಕೆಲಸ ಮಾಡಿದೆ ಎಂದು ಶ್ಲಾಘಿಸಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತಾವು ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಅಂದು ಅದು ಸಾಧ್ಯವಾಗಲಿಲ್ಲ ಈಗ ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ” ಎಂದು ಹೇಳಿದರು.

ಚಾಮುಂಡೇಶ್ವರಿ ಪ್ರಾಧಿಕಾರ ರಚನೆಗೆ ಮೈಸೂರು ರಾಜ ಮನೆತನ ಮತ್ತು ಮೈಸೂರಿನ ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಒಡೆಯರ್ ಅಪಸ್ವರ ಎತ್ತಿರುವ ಬೆನ್ನಲ್ಲೇ ಪ್ರತಾಪ್ ಸಿಂಹ ಅವರ ಈ ಹೇಳಿಕೆ ಕುತೂಹಲ ಮೂಡಿಸಿದೆ.‌ ಚಾಮುಂಡೇಶ್ವರಿ ಬೆಟ್ಟದಲ್ಲಿನ ಆಸ್ತಿ ಹೊಡೆದಾಟದ ಬಗ್ಗೆ ತಾವು ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.‌

ಚಾಮುಂಡಿ ಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ವಿಚಾರ ಕುರಿತು ಮಾತನಾಡಿದ ಅವರು, “ಸಿದ್ದರಾಮಯ್ಯ ಅವರನ್ನು ಕೆಲವು ಸೈದ್ದಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್‌‍ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...