ಲೋಕಸಭಾ ಚುನಾವಣೆ ಹೇಗೆ ನಡೆಯುತ್ತದೆ ಎಂಬುದಕ್ಕೆ ಚಂಡೀಗಢ ಸಾಕ್ಷಿ: ಮಲ್ಲಿಕಾರ್ಜುನ ಖರ್ಗೆ

Date:

ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಎಲ್ಲರಿಗೂ ಸಮತಟ್ಟಾದ ಮೈದಾನ ಸಿಗಬೇಕು. ಹೆದರಿಸಿ, ಬೆದರಿಸಿ ಪಕ್ಷಕ್ಕೆ ಸೇರಿಸಿಕೊಳ್ಳುವುದರಿಂದ ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಲೋಕಸಭಾ ಚುನಾವಣೆ ಹೇಗೆ ನಡೆಯಬಹುದು ಎಂಬುದದನ್ನು ಚಂಡೀಗಢ ಮೇಯರ್ ಚುನಾವಣೆ ಸೂಚಿಸುತ್ತಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಚುನಾವಣೆ ಆಯೋಗದ ಕಚೇರಿಯಿಂದ ಚಂಡೀಗಢಕ್ಕೆ ಒಂದು ಗಂಟೆ ಪ್ರಯಾಣ. ಅಷ್ಟು ಅನತಿ ದೂರದಲ್ಲಿರುವ ನಗರದ ಮೇಯರ್ ಚುನಾವಣೆಯಲ್ಲಿ ಚುನಾವಣಾ ಕೆಲಸಕ್ಕೆ ಬಂದ ಅಧಿಕಾರಿಯೇ ಮತ ಚಲಾಯಿಸಿದ್ದಾನೆ ಎಂದರೆ, ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಸರ್ಕಾರ ಗ್ರಾಮೀಣ ಭಾಗಗಳಲ್ಲಿ ಏನೆಲ್ಲ ಮಾಡುತ್ತಿರಬಹುದು ಎಂಬದನ್ನು ಅಂದಾಜಿಸಲು ಈ ಉದಾಹರಣೆ ಸಾಕು” ಎಂದು ಹೇಳಿದ್ದಾರೆ.

“ಹದರಿಸಿ, ಬೆದರಿಸಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ನಮ್ಮ ಬಳಿ ಇದ್ದಾಗ ಭ್ರಷ್ಟರು ಎನ್ನುತ್ತಾರೆ. ಬಳಿಕ ಅವರನ್ನೇ ಪಕ್ಷಕ್ಕೆ ಎಳೆದುಕೊಂಡು ಪ್ರಮಾಣಿಕರು ಎನ್ನುತ್ತಾರೆ. ದೇಶದಲ್ಲಿ ನಿರಂಕುಶ ನಾಯಕತ್ವ ಮತ್ತು ಸರ್ವಾಧಿಕಾರ ಆಡಳಿತ ತರಲು ಮೋದಿ ಹವಣಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೆಲವರು ಮೋದಿ ಇದ್ದರೆ ಮಾತ್ರ ದೇಶ ನಡೆಯುತ್ತದೆ ಎಂಬ ಗುಂಗಿನಲ್ಲಿದ್ದಾರೆ. ಹಲವಾರು ನಾಯಕರು ದೇಶ ಕಟ್ಟಿದ್ದಾರೆ. ಆದರೆ, ಮೋದಿಯವರನ್ನು ಜಾಹೀರಾತು ಸರ್ಕಾರ. ಅವರೇನು ಮಾಡುತ್ತಿಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...

ಪಪುವಾ ನ್ಯೂಗಿನಿಗೆ 1 ಮಿಲಿಯನ್ ಡಾಲರ್ ನೆರವು ಘೋಷಿಸಿದ ಭಾರತ

ಬೃಹತ್‌ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ...

ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು...