ಚಂದ್ರಕಾಂತ ಬೆಲ್ಲದ ಅವರ ಅಭಿನಂದನಾ ಗ್ರಂಥ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ

Date:

Advertisements

“ನಾನು-ಚಂದ್ರಕಾಂತ ಬೆಲ್ಲದ ಗೋಕಾಕ್ ಚಳವಳಿಯ ಒಡನಾಡಿಗಳು. ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ ಅವರಿಗೆ ಅಪಾರ ನಂಬಿಕೆ ಇದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಂದ್ರಕಾಂತ ಗುರಪ್ಪ ಬೆಲ್ಲದ ಅಭಿನಂದನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ “ಅಲ್ಲಮಲೋಕ”, ” ದೊಡ್ಡಹೊಳೆ ದಾಟಿದವರು”, “ಬೆಲ್ಲದಚ್ಚು” ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತಾಡಿದರು.

ಮನುಷ್ಯರನ್ನು ಜಾತಿ-ಧರ್ಮಗಳಾಚೆಗೆ ಪರಸ್ಪರ ಪ್ರೀತಿಸುವ, ಗೌರವಿಸುವ ಸಂಸ್ಕೃತಿಯನ್ನು ಚಂದ್ರಕಾಂತ ಬೆಲ್ಲದ್ ಅವರು ತಮ್ಮ ಬದುಕಿನಲ್ಲಿ ಆಚರಿಸಿಕೊಂಡು ಬಂದಿದ್ದಾರೆ ಎಂದು ತಮ್ಮ ಮತ್ತು ಬೆಲ್ಲದ ಅವರ ನಡುವಿನ ಬಾಂಧ್ಯವ್ಯವನ್ನು ಸ್ಮರಿಸಿದರು.

Advertisements

“ಇನ್ನೊಬ್ಬರ ಮನಸ್ಸಿಗೆ ನೋವು ಮಾಡುವಂತಹ ಮಾತುಗಳನ್ನು ಯಾವತ್ತೂ ಆಡದ ಚಂದ್ರಕಾಂತ ಬೆಲ್ಲದ ಅವರು ಅತ್ಯುನ್ನತ ಮನುಷ್ಯ ಗೌರವವನ್ನು ಹೊಂದಿದ್ದು, ಇವರದ್ದು ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತಹ ಅಪರೂಪದ ವ್ಯಕ್ತಿತ್ವ ಹೊಂದಿದ್ದಾರೆ” ಎಂದು ಮೆಚ್ಚುಗೆ ಸೂಚಿಸಿದರು.

“ಚಂದ್ರಕಾಂತ ಬೆಲ್ಲದ ಅವರು ಉದ್ಯಮಶೀಲತೆ, ಮನುಷ್ಯ ಪ್ರೀತಿ, ಮೂಲಕ ವಿಶಾಲವಾಗಿ ಬೆಳೆದಿದ್ದಾರೆ. ಎಲ್ಲಾ ವರ್ಗದ ಜನರಿಂದ ಅಪಾರ ಪ್ರೀತಿ ಗಳಿಸಿ ಅತ್ಯಂತ ನಿಷ್ಠುರ ನ್ಯಾಯಪರವಾದ ಪ್ರಾಮಾಣಿಕತೆ ವ್ಯಕ್ತಿತ್ವ ಹೊಂದಿದ್ದಾರೆ” ಎಂದು ಮೆಚ್ಚಿಕೊಂಡರು.

ಡಂಬಳದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಭಾಲ್ಕಿಯ ಡಾ.ಬಸವಲಿಂಗ ಪಟ್ಟದೇವರು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೋ.ರು.ಚನ್ನಬಸಪ್ಪ ವಹಿಸಿದ್ದರು.

ಕಾರ್ಮಿಕ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಂತೋಷ್ ಲಾಡ್, ಲೀಲಾವತಿ ಬೆಲ್ಲದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ ಅರವಿಂದ ಬೆಲ್ಲದ, ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ ಮಾನೆ , ಮಹೇಶ್ ಟೆಂಗಿನಕಾಯಿ ಉಪಸ್ಥಿತರಿದ್ದರು.

ಸಿದ್ದರಾಮಯ್ಯ

ಸಾಹಿತಿಗಳಾದ ನಾ.ಮೊಗಸಾಲೆ, ಡಾ.ಶಂಭು ಬಳಿಗಾರ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಅಭಿನಂದನ ಗ್ರಂಥದ ಸಂಪಾದಕಾರದ ಸಾಹಿತಿ ರಂಜಾನ್ ದರ್ಗಾ, ಇತರೆ ಗ್ರಂಥಗಳ ಸಂಪಾದಕರಾದ ಪ್ರೊ ಶಶಿಧರ ತೋಡಕರ, ದಿವಾಕರ ಹೆಗಡೆ ಮತ್ತು ಚಿತ್ರಕಲಾವಿದ ಚಂದ್ರು ಗಂಗೊಳ್ಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X