ಚಂದ್ರಯಾನ-3 ಯಶಸ್ವಿ : ಆ.26ರಂದು ‘ಇಸ್ರೋ’ಗೆ ಪ್ರಧಾನಿ ಮೋದಿ ಭೇಟಿ

Date:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಬಹು ನಿರೀಕ್ಷಿತ ಐತಿಹಾಸಿಕ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆ.26ರ ಶನಿವಾರದಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಸದ್ಯ ದಕ್ಷಿಣ ಆಫ್ರಿಕಾದ ಜೋಹಾನ್ಸ್​​​ಬರ್ಗ್​​ನಲ್ಲಿ ನಡೆಯುತ್ತಿರುವ ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ಮೋದಿ, ವಿಕ್ರಮ್ ಲ್ಯಾಂಡರ್ ಚಂದ್ರನ ನೆಲ ತಲುಪುವ ದೃಶ್ಯವನ್ನು ವರ್ಚುವಲ್ ಮೂಲಕ ವೀಕ್ಷಿಸಿ, ಬಳಿಕ ಅಭಿನಂದನೆ ಸಲ್ಲಿಸಿ, ಮಾತನಾಡಿದ್ದರು.

ಆ.26ರಂದು ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದಲೇ ಬರಲಿದ್ದಾರೆ ಎಂದು ತಿಳಿದುಬಂದಿದ್ದು, ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶನಿವಾರ ಸಂಜೆ 5.55ಕ್ಕೆ ಎಚ್​ಎಎಲ್​ ಏರ್‌ಪೋರ್ಟ್‌ಗೆ ಆಗಮಿಸಲಿರುವ ಪ್ರಧಾನಿ, ಸಂಜೆ 6.30ರವರೆಗೆ ಏರ್‌ಪೋರ್ಟ್‌ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ಬಳಿಕ ರಾತ್ರಿ 7 ಗಂಟೆಗೆ ರಸ್ತೆಯ ಮೂಲಕ ಆಗಮಿಸಿ, ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ರಾತ್ರಿ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ಆ ಬಳಿಕ ರಾತ್ರಿ 8.35ಕ್ಕೆ ಬೆಂಗಳೂರಿನಿಂದ ಎಚ್​ಎಎಲ್ ಮೂಲಕ ದೆಹಲಿಗೆ ನಿರ್ಗಮಿಸಲಿದ್ದಾರೆ.

ಈ ಮಧ್ಯೆ, ಮೋದಿ ಅವರ ಈ ಬೆಂಗಳೂರು ಭೇಟಿಯನ್ನು ಬಿಜೆಪಿಯ ರಾಜ್ಯ ಘಟಕವು ಪಕ್ಷದ ದೃಷ್ಟಿಯಿಂದ ಪೂರಕವಾಗಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬೆಂಗಳೂರಿನಲ್ಲಿ ನಡೆಸಿದ್ದ ರೋಡ್ ಶೋದಂತೆಯೇ ಪೀಣ್ಯದಲ್ಲಿಯೂ ಕೂಡ ಸುಮಾರು ಒಂದು ಕಿಲೋಮೀಟರ್ ರೋಡ್​ಶೋ ನಡೆಸಲು ಯೋಜನೆ ಹಾಕಿಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತವಾಗಿ ಪಕ್ಷ ಯಾವುದೇ ಹೇಳಿಕೆ ನೀಡಿಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ರಾಮನವಮಿ | ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್ ಪ್ರಾರಂಭಿಸಿದ ಎಎಪಿ

ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು 'ಎಎಪಿ ಕಾ...