ದೇಶದ ಹೆಸರಲ್ಲ, ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ: ಡಿಸಿಎಂ ಡಿ ಕೆ ಶಿವಕುಮಾರ್

Date:

  • ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪ್ಪಟ್ಟಾಯಿತೇ? ಎಂದು ಕೇಳಿದ ಡಿಸಿಎಂ
  • ಬದಲಾವಣೆಯಿಂದ ಏನೂ ಲಾಭವಿಲ್ಲ, ಆಚಾರ-ವಿಚಾರ ಬದಲಾಗಬೇಕು

“ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ? ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

- Advertisement -

ಬೆಂಗಳೂರಿನ ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮದ ಪ್ರತಿನಿಧಿಗಳು ‘ದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸುವ ಬಗ್ಗೆ’ ಕೇಳಿದಾಗ ಈ ರೀತಿಯಲ್ಲಿ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ ಒಂಭತ್ತು ವರ್ಷಗಳಲ್ಲಿ ಜನರ ಆದಾಯ ದುಪ್ಪಟ್ಟಾಯಿತೇ? 15 ಲಕ್ಷ ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು, ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ?” ಎಂದು ಪ್ರಶ್ನಿಸಿದರು.

“ಶ್ರೀಮಂತರು, ದೊಡ್ಡ ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್ಪೋರ್ಟ್‌ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಾಧಿಪತಿಗಳು ಬೇರೆ ದೇಶದ ಪೌರತ್ವ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ- ವಿಚಾರ ಬದಲಾವಣೆಯಾಗಬೇಕು” ಎಂದು ದೇಶದ ಹೆಸರು ಬದಲಾವಣೆ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಇದನ್ನು ಓದಿದ್ದೀರಾ? ಮೇಕೆಗೂ ರೈಲು ಪ್ರಯಾಣದ ಟಿಕೆಟ್ ತೆಗೆದುಕೊಂಡಿದ್ದ ಬಡ ವೃದ್ಧೆ: ಮೆಚ್ಚಿದ ನೆಟ್ಟಿಗರು, ವಿಡಿಯೋ ವೈರಲ್

“ಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿ ಹಕ್ಕು, ಆರ್ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು, ಇಂತಹ ಯೋಚನೆಗಳು ಬಿಜೆಪಿಯವರಿಗೆ ಯಾಕೆ ಬರುವುದಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...