ಗೋಸುಂಬೆ ತರ ಬಣ್ಣ ಬದಲಾಯಿಸಿ ಮಾತನಾಡುವುದು ಸರಿಯಲ್ಲ: ಕುಮಾರಸ್ವಾಮಿಗೆ ಹರಿಪ್ರಸಾದ್‌ ತಿರುಗೇಟು

Date:

ಕಾಲ ಕಾಲಕ್ಕೆ ಗೋಸುಂಬೆ ರೀತಿಯಲ್ಲಿ ಬಣ್ಣ ಬದಲಾಯಿಸಿಕೊಂಡು ಮಾತಾಡುವುದು ಸರಿಯಲ್ಲ. ನಾಗಮಂಗಲ ಘಟನೆಗೆ ಸರ್ಕಾರದ ವೈಫಲ್ಯ ಕಾರಣ ಅಲ್ಲ, ಕೆಲ ಸಂಘಟನೆಗಳು ಕೋಮುಗಲಭೆ ಮಾಡಲೆಂದೇ ಹುಟ್ಟಿಕೊಂಡಿವೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್ ಕಿಡಿಕಾರಿದರು.

- Advertisement -

‘ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಓಲೈಕೆ, ತುಷ್ಟೀಕರಣ ಮಾಡುತ್ತಿರುವುದರಿಂದ ನಾಗಮಂಗಲ ಗಲಾಟೆ ನಡೆದಿದೆ” ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಗೆ ಬೆಂಗಳೂರಿನಲ್ಲಿ ಹರಿಪ್ರಸಾದ್ ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ತುಷ್ಠೀಕರಣ ಎಂಬ ಆರೋಪ ಮಾಡುವವರು ಕೇಂದ್ರ ಸರ್ಕಾರಕ್ಕೂ ತುಷ್ಟಿಕರಣಕ್ಕೂ ಸಂಬಂಧವೇ ಇಲ್ಲವೇ? ಬಿಜೆಪಿ ಮಂಡ್ಯ ಜಿಲ್ಲೆಗೆ ಕಾಲಿಟ್ಟ ಬಳಿಕ ಕೋಮು ಗಲಭೆಯನ್ನು ಸೃಷ್ಟಿ ಮಾಡಲು ನಿರಂತರ ಪ್ರಯತ್ನ ನಡೆಸುತ್ತಿದೆ” ಎಂದು ನೇರವಾಗಿ ಆರೋಪಿಸಿದರು.

“ಕೋಮು ಗಲಭೆಗೆ ಮಂಡ್ಯ ಜಿಲ್ಲೆಯ ಜನರು ಆಸ್ಪದ ಕೊಡುತ್ತಿರಲಿಲ್ಲ. ಆದರೆ ಇದೀಗ ಬಿಜೆಪಿ ಮಂಡ್ಯ ಜಿಲ್ಲೆಗೆ ಕಾಲಿಟ್ಟ ಬಳಿಕ ಕೋಮು ಗಲಭೆ ಸೃಷ್ಟಿ ಮಾಡಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಟ್ಟ ಹೆಸರು ತರಲು ಪ್ರಯತ್ನ

“ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿದ್ದಾರೆ.
ಬಿಜೆಪಿ ಅವರಿಗೆ ಕೋಮುಗಲಭೆಗಳು ಇಲ್ಲದಿದ್ದರೆ ಹೊಟ್ಟೆಯೇ ತುಂಬಲ್ಲ” ಎಂದು ಲೇವಡಿ ಮಾಡಿದರು.

ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ

“ನಾಗಮಂಗಲ ಗಲಭೆ ಪ್ರಕರಣದಲ್ಲಿ ಆರೋಪಿಗಳು ಎಷ್ಟೇ ದೊಡ್ಡವರು ಆಗಿದ್ದರು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಕಾನೂನು ಚೌಕಟ್ಟು ಮೀರಿ ಹೋದವರಿಗೆ ಸರಿಯಾದ ಬುದ್ಧಿ ಕಲಿಸಬೇಕು. ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಕುರಿತಾಗಿ ನಾನು ಆಗ್ರಮ ಮಾಡುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...