ಚನ್ನಪಟ್ಟಣ ಉಪಚುನಾವಣೆ | ನಾನು ಸ್ಪರ್ಧೆ ಮಾಡಲ್ಲ, ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವೆ: ಡಿ‌ ಕೆ ಸುರೇಶ್

Date:

Advertisements

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್​ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರದಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್ ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ.

ರಾಮನಗರದಲ್ಲಿ ಸೋಮವಾರ ಮಾತನಾಡಿದ ಅವರು, “ಡಿಕೆ ಸುರೇಶ್​​ನ ಸೋಲಿಸಿಬಿಟ್ಟಿದ್ದೇವೆ. ಏನೋ ಆಗಿಬಿಡುತ್ತದೆ ಅನ್ನೋದಾದರೆ ಅದು ಭ್ರಮೆ. ನಾನು ನನ್ನ ಕಾರ್ಯಕರ್ತರ ಜೊತೆಗಿದ್ದೇನೆ. ಯಾರಿಗೂ ನಾನು ವೈಯಕ್ತಿಕವಾಗಿ ತೊಂದರೆ ಕೊಟ್ಟವನಲ್ಲ. ಈ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಮಾತನಾಡಿರಬಹುದು, ವಿನಃ ಯಾರನ್ನೂ ಕೆಟ್ಟದಾಗಿ ನಡೆಸಿಕೊಂಡಿಲ್ಲ” ಎಂದರು.

“ನನ್ನ ನಡೆಯಿಂದ ಯಾರಿಗಾದರೂ ಮನಸ್ಸಿಗೆ ನೊವಾಗಿದ್ದರೆ, ಪಕ್ಷದ ಕಾರ್ಯಕರ್ತರ ಪರವಾಗಿ, ನನ್ನ ಪರವಾಗಿ ಕ್ಷಮೆ ಕೇಳುತ್ತೇನೆ. ನನಗೆ ಯಾರೂ ಶತ್ರುಗಳಿಲ್ಲ. ನನಗೆ ನಾನೇ ಶತ್ರು. ನಾನೂ ಒಂದು ವಿರಾಮ ನಿರೀಕ್ಷೆ ಮಾಡಿದ್ದೆ. ಈಗ ವಿರಾಮ. ಜಾತಿ, ಧರ್ಮ, ಭಾವನಾತ್ಮಕ ವಿಚಾರಗಳು ಅಸೂಯೆ ನನ್ನ ಸೋಲಿಗೆ ಕಾರಣ” ಎಂದು ಹೇಳಿದರು.

Advertisements

“ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ ಕೆಲಸ‌ ಮಾಡಿದ್ದೇನೆ. ನನಗೆ ರಾಮನಗರ ಮಾಧ್ಯಮದವರು ಪ್ರೋತ್ಸಾಹ ಕೊಟ್ಟಿದ್ದಾರೆ. ರಾಜಕೀಯದಲ್ಲಿ ನನಗೆ ಆಸಕ್ತಿ ಇರಲಿಲ್ಲ. ಉಪ‌ಚುನಾವಣೆ ನಡೆದಾಗ ಜಿಲ್ಲೆ ಹಾಗೂ ರಾಜ್ಯದ ನಾಯಕರು ನನ್ನನ್ನು ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದರು. ಡಿಕೆ ‌ಶಿವಕುಮಾರ್ ಅವರಿಗೆ ಒತ್ತಡ ತಂದು ನಾಯಕರು ನನಗೆ ಅವಕಾಶ ಕೊಟ್ಟಿದ್ದರು. ಹತ್ತು ವರ್ಷ ಎಂಟು ತಿಂಗಳುಗಳ ಕಾಲ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ. ಅವಕಾಶಕ್ಕೆ ತಕ್ಕಂತೆ ಬಡವರು, ದೀನ ದಲಿತರು, ಮಹಿಳೆಯರ ಅಭಿವೃದ್ಧಿಗೆ ನನ್ನ ಗಮನಕ್ಕೆ ಬಂದಿದನ್ನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರ ಸರ್ಕಾರ ಆಗಲಿ, ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪುವ ಹಾಗೆ ಹಗಲಿರುಳು ಶ್ರಮಿಸಿದ್ದೇನೆ” ಎಂದು ತಿಳಿಸಿದರು.

“ಸಾಮಾನ್ಯ ಕಾರ್ಯಕರ್ತನಾಗಿ ನಾನು ಕೆಲಸ ಮಾಡುತ್ತೇನೆ. ಇನ್ನು ಮುಂದೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಲಸ ಮಾಡುತ್ತೇನೆ. ರಾಜ್ಯಕ್ಕೆ ಕೊಟ್ಟ ಮಾತಿಂದ ಹಿಂದೆ ಸರಿಯುವ ಮಾತಿಲ್ಲ. ನಾನು ಹೊಸದಾಗಿ ಬಂದಾಗ ಜನ ಕೆಲಸ ಮಾಡ್ತಾರೆ ಅಂತ ಗೆಲ್ಲಿಸಿದ್ರು. ಡಾಕ್ಟರ್ ಬಂದಾಗ ಡಾಕ್ಟರ್ ಅವರನ್ನೂ ಗೆಲ್ಲಿಸಿದ್ದಾರೆ. ಅವರಿಗೆ ನಾನು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದೇನೆ. ಮಾಧ್ಯಮಗಳು ನನ್ನನ್ನು ಹೇಗೆ ಬಿಂಬಿಸಿದವು, ಅವರನ್ನು ಹೇಗೆ ಬಿಂಬಿಸಿದವು ಎಂಬುದು ಗೊತ್ತಿದೆ. ಹೀಗಾಗಿ ಮಾಧ್ಯಮಗಳಿಗೂ ಅಭಿನಂದನೆ ಅರ್ಪಿಸುತ್ತೇನೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X