ಚನ್ನಪಟ್ಟಣ ಉಪ ಚುನಾವಣೆ | ಕುಮಾರಸ್ವಾಮಿ ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ: ಸಿ ಪಿ ಯೋಗೇಶ್ವರ್

Date:

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ. ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಎಂದು ಅವರನ್ನೇ ಕೇಳಿದ್ದೇನೆ. ಮೈತ್ರಿ ಪಕ್ಷದಿಂದ ನಾನೇ ಅಭ್ಯರ್ಥಿ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಹೇಳಿದರು.

- Advertisement -

ರಾಮನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿ, “ಕಳೆದ ವಾರ ಡಿಸಿಎಂ ಡಿ ಕೆ ಶಿವಕುಮಾರ್‌ ಚನ್ನಪಟ್ಟಣದಲ್ಲಿ ನಡೆಸಿದ ಮೂರು ದಿನಗಳ ಜನಸ್ಪಂದನಾ ಕಾರ್ಯಕ್ರಮ ಜನಸ್ಪಂದನವಲ್ಲ, ಅದು ಸರ್ಕಾರಿ ಸಂತೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಅಧಿಕಾರಿಗಳನ್ನು ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ ನಡೆದಿದೆ. ಕಳೆದ ಒಂದು ಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ” ಎಂದರು.

“ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಡಿ ಕೆ ಶಿವಕುಮಾರ್ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ. ಬಂದಿದ್ದೇನೆ ಅಂತ ಸುಳ್ಳು ಹೇ‌ಳಿದ್ದಾರೆ. ಜನರಿಗೆ ಮನೆ ಕೊಡುವೆ, ಸೈಟ್ ಕೊಡುವೆ ಅಂತ ಸುಳ್ಳು ಆಶ್ವಾಸನೆ ಕೊಡ್ತಿದ್ದಾರೆ. ಟೌನ್ ವ್ಯಾಪ್ತಿ ಬಿಟ್ಟರೆ ಬಹುತೇಕ ತಾಲೂಕಿನ ಜನತೆಗೆ ಮನೆ ಸಮಸ್ಯೆ ಇಲ್ಲ” ಎಂದು ಹೇಳಿದರು.

“ಸರ್ಕಾರದ ನಿಯಮಗಳನ್ನ ಗಾಳಿಗೆ ತೂರಿ ಒನ್ ಮ್ಯಾನ್ ಶೋ ಮಾಡಿದ್ದಾರೆ. ಎಂಪಿಗೆ ಆಹ್ವಾನ ನೀಡಿಲ್ಲ, ನನಗೆ ಆಹ್ವಾನ ನೀಡಿಲ್ಲ. ಸರ್ಕಾರದ ಪ್ರೋಟೋಕಾಲ್ ಸರಿಯಾಗಿ ಫಾಲೋ ಮಾಡದೇ ಕಾರ್ಯಕ್ರಮ ಮಾಡಿದ್ದಾರೆ. ಇದು ಕೇವಲ ಚುನಾವಣಾ ತಂತ್ರ” ಎಂದು ಹರಿಹಾಯ್ದರು.

ಸರ್ಕಾರ ಕುಸಿಯುವ ಹಂತ ತಲುಪಿದೆ. ಅವರ ಸರ್ಕಾರದಲ್ಲೇ ಸಾಕಷ್ಟು ಗೊಂದಲ ಇದೆ. ನೂರೆಂಟು ಹಗರಣಗಳು ಬೆಳಕಿಗೆ ಬರ್ತಿದೆ. ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ನೋಡಿದ್ದೇವೆ. ಉಪಚುನಾವಣೆ ಹೊತ್ತಿಗೆ ಅವರ ಸರ್ಕಾರ ಇರುತ್ತೋ, ಇರಲ್ವೋ ಗೊತ್ತಿಲ್ಲ” ಎಂದು ಸಿ ಪಿ ಯೋಗೇಶ್ವರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...