ಚನ್ನಪಟ್ಟಣ | ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌‌, ಕುಮಾರಸ್ವಾಮಿ ತೀರ್ಮಾನ ಅಂತಿಮ: ಆರ್‌.ಅಶೋಕ್

Date:

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ ಕ್ಷೇತ್ರವೇ ಆಗಿದ್ದರಿಂದ ಕುಮಾರಸ್ವಾಮಿ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

- Advertisement -

‌ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿ.ಪಿ.ಯೋಗೇಶ್ವರ್‌ ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ” ಎಂದರು.

“ಡಿ ಕೆ ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಹಾನಿ ನಿವರ್ಹಣೆ ಮಾಡಿಲ್ಲ. ಜನರು ಸರ್ಕಾರದ ವಿರುದ್ಧವಾಗಿ ನಿಂತಿದ್ದಾರೆ. ಅದರ ಉಪಯೋಗವನ್ನು ನಾವು ಪಡೆಯುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...