ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತ ನಿಯೋಗ ಮನವಿ, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ರೈತರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, “430 ಎಕರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಾಸು ಪಡೆಯಲು ಸಾಧ್ಯವಿಲ್ಲ. ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು” ” ಎಂದು ಭರವಸೆ ನೀಡಿದರು.

Advertisements

ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಎಚ್.ಮುನಿಯಪ್ಪ, ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X