ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡತಿ

Date:

Advertisements
  • ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಚರಿಷ್ಮಾ ಕಲಿಯಂಡ
  • ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ

ಕರ್ನಾಟಕದ ಕೊಡಗಿನ ಮೂಲದ ಕನ್ನಡತಿ ಚರಿಷ್ಮಾ ಕಲಿಯಂಡ ಆಸ್ಟ್ರೇಲಿಯಾದ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆಸ್ಟ್ರೇಲಿಯಾಕ್ಕೆ ಉದ್ಯೋಗದ ಕಾರಣಕ್ಕಾಗಿ ಕೆಲ ವರ್ಷಗಳ ಹಿಂದೆ ಹೋಗಿದ್ದ ಅವರು ಅಲ್ಲಿನ ಪ್ರಜೆಯಾಗಿ ಸದಸ್ಯತ್ವ ಪಡೆದಿದ್ದರು. ಇದೀಗ ಆಸ್ಟ್ರೇಲಿಯಾದ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಮೂಲತಃ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ಚರಿಷ್ಮಾ ಅವರು ಆಸ್ಟ್ರೇಲಿಯಾ ಸಂಸತ್‌ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ವೇಳೆ ತನ್ನ ಹುಟ್ಟೂರು ಕೊಡಗಿನ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ಬಂದು ಸಹಿ ಹಾಕುತ್ತಿರುವ ದೃಶ್ಯ ಸಾಕಷ್ಟು ವೈರಲ್ ಆಗಿದೆ.

ಸಂಸತ್‌ ಸದಸ್ಯರಾದ ನಂತರ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್‌ ಮಾಡಿರುವ ಚರಿಷ್ಮಾ, ‘ನಿನ್ನೆ ನಾನು 58ನೇ ಸಂಸತ್ತಿನ ಮೊದಲ ಪ್ರಶ್ನೋತ್ತರ ಅವಧಿಯಲ್ಲಿ ಖಾಸಗೀಕರಣವನ್ನು ತಕ್ಷಣವೇ ನಿಲ್ಲಿಸುವ ನನ್ನ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಧಾನಮಂತ್ರಿಯವರಿಗೆ ಪ್ರಶ್ನೆಯನ್ನು ಕೇಳಿದೆ’ ಎಂದು ತಿಳಿಸಿದ್ದಾರೆ.

Advertisements

ಅಲ್ಲದೇ ‘ಯಾವುದೇ ಸರ್ಕಾರಿ ಸಂಸ್ಥೆಗಳ ಖಾಸಗೀಕರಣವು ಜನ ಸಮುದಾಯದ ಮೇಲೆ ಪರಿಣಾಮ ಬೀರುತ್ತದೆ. ಖಾಸಗೀಕರಣ ನಮ್ಮ ರಾಜ್ಯದ (ಎನ್‌ಎಸ್‌ಡಬ್ಲ್ಯೂ) ಹಿತಾಸಕ್ತಿಗೆ ಒಳ್ಳೆಯದಲ್ಲ’ ಎಂದು ಸಂಸತ್‌ನಲ್ಲಿ ಖಾಸಗೀಕರಣ ವಿರುದ್ಧ ಚರಿಷ್ಮಾ ಮಾತನಾಡಿದ್ದಾರೆ.

ಇದೇ ಸಮಯದಲ್ಲಿ ಆಸ್ಟ್ರೇಲಿಯಾದ ಭಾರತೀಯ ನಿವಾಸಿಗಳ ಸಂಘ ಕೇಳಿದ ’ಮೈಸೂರು ರೇಷ್ಮೆ ಸೀರೆ ಧರಿಸಿ ಆಕರ್ಷಕವಾಗಿ ಬಂದಿದ್ದೀರಿ, ಸಂಸತ್ತಿನಲ್ಲಿ ನಿಮ್ಮ ಮೊದಲ ದಿನ ಹೇಗಿತ್ತು!’ ಎಂಬ ಪ್ರಶ್ನೆಗೆ ‘ನಂಬಲಾಗದಷ್ಟು ಬೆಂಬಲ ನೀಡುವ ಸಹೋದ್ಯೋಗಿಗಳನ್ನು ಹೊಂದಿದ್ದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದು ಉತ್ತರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X