ಚಾರುಕೀರ್ತಿ ಭಟ್ಟಾರಕರಿಗೆ ಗಣ್ಯರ ಸಂತಾಪ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

Date:

  • ಚಾರುಕೀರ್ತಿ ಶ್ರೀ ನಿಧನಕ್ಕೆ ಕಂಬನಿ ಮಿಡಿದ ರಾಜಕೀಯ ನಾಯಕರು
  • ಭಕ್ತಗಣಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲು ಪ್ರಾರ್ಥನೆ

ಗುರುವಾರ ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಕೋರಿದ್ದು, ಶ್ರೀಗಳ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ. ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆ ಇತ್ತು.

ಆದರೆ, ಚಿಕಿತ್ಸೆ ಫಲಿಸದ ಕಾರಣದಿಂದ ದೇಹತ್ಯಾಗ ಮಾಡಿದ್ದಾರೆ. ಇಡೀ ಭಕ್ತ ಸಮೂಹಕ್ಕೆ ಶ್ರೀಗಳ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಭಟ್ಟಾರಕರ ನಿಧನಕ್ಕೆ ಕಂಬನಿ ಮಿಡಿದರು.

ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದ ಅವರು ಶ್ರೀಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರನ್ನೂ ಒಳಗೊಂಡಂತೆ ಇತರ ರಾಜಕೀಯ ಪ್ರಮುಖರೂ ಭಟ್ಟಾರಕರ ಅಗಲಿಕೆಗೆ ಸಂತಾಪ ಸೂಚಿಸಿ, ಸದ್ಗತಿಗಾಗಿ ಪಾರ್ಥನೆ ಸಲ್ಲಿಸಿದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು ಚುನಾವಣಾ...

ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು...