ಬಹಿರಂಗವಾಗಿ ವಿಜಯೇಂದ್ರನ ಕಾಲಿಗೆ ಬಿದ್ದು ಖೂಬಾಗೆ ಟಿಕೆಟ್ ಕೊಡಬೇಡಿ ಎಂದ ಹಾಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್!

Date:

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾಲಿಗೆ ಬಿದ್ದ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಭಗವಂತ ಖೂಬಾಗೆ ನೀಡಬಾರದು, ಒಳ್ಳೆಯ ವ್ಯಕ್ತಿಗೆ ನೀಡಬೇಕು ಎಂದು ಬಹಿರಂಗವಾಗಿಯೇ ಮನವಿ ಮಾಡಿದರು.

- Advertisement -

ಬೀದರ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕ್ರಮದ ವೇದಿಕೆಯಲ್ಲಿ ಸಾವಿರಾರು ಜನರ ಮುಂದೆ ನಡೆದ ಈ ಘಟನೆ ವೇದಿಕೆಯಲ್ಲೇ ಇದ್ದ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಹಾಲಿ ಸಂಸದ ಭಗವಂತ ಖೂಬಾ ಅವರು ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕಿಸಿ, ಜೈಲಿಗೆ ಕಳುಹಿಸಿದ್ದಾರೆ. ಪಕ್ಷದಲ್ಲೇ ಇದ್ದುಕೊಂಡು ಪಕ್ಷಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ, ಅವರಿಗೆ ಟಿಕೆಟ್ ನೀಡಬಾರದು” ಎಂದು ಚವ್ಹಾಣ್ ಬಹಿರಂಗವಾಗಿ ಕೂಗಿ ಹೇಳಿದರು.

ಇದೇ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ ಬೀದರ್‌ ಜಿಲ್ಲೆಗೆ ಆಗಮಿಸಿದ್ದರು. ಟಿಕೆಟ್‌ ಆಕಾಂಕ್ಷಿಗಳಿಂದ ವಿಜಯೇಂದ್ರಗೆ ಭರ್ಜರಿ ಸ್ವಾಗತ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಸಂಸದರಾದ ಭಗವಂತ ಖೂಬಾ ಸೇರಿ ಗುರುನಾಥ ಕೊಳ್ಳೂರು, ಚನ್ನಬಸವಣ್ಣ ಬಳತೆ, ಮಾಜಿ ಶಾಸಕರಾದ ಸುಭಾಷ್‌ ಕಲ್ಲೂರ, ನಾಗರಾಜ ಕರ್ಪೂರ, ಡೋಣಗಾಂವ್‌ನ ಡಾ. ಶಂಭುಲಿಂಗ ಶಿವಾಚಾರ್ಯರು, ನಂದಕುಮಾರ ಸಾಳುಂಕೆ, ಪದ್ಮಾಕರ್‌ ಪಾಟೀಲ್‌, ಅನಂತ ಬಿರಾದಾರ್‌ ಸೇರಿ ಅನೇಕರು ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದು, ಲಾಬಿ ಶುರು ಮಾಡಿಕೊಂಡಿದ್ದಾರೆ. ಇವರ ಜತೆಗೆ ಹಾಲಿ ಶಾಸಕರಿಬ್ಬರೂ ಸಹ ಟಿಕೆಟ್‌ ನೀಡಿದರೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...