ಖಾಸಗಿ ಶಾಲೆ, ಸಂಸ್ಥೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪರಿಶೀಲಿಸಲು ಸಚಿವ ಶಿವರಾಜ್‌ ತಂಗಡಗಿ ಸೂಚನೆ

Date:

  • ಇಲಾಖೆಗಳ ಮುಖ್ಯಸ್ಥರ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಸಚಿವರು
  • ಕನ್ನಡ ಅನುಷ್ಠಾನದ ವಿಧೇಯಕದ ನಿಯಮ ಶೀಘ್ರ ಜಾರಿಗೆ ಸೂಚನೆ

ರಾಜ್ಯದಲ್ಲಿನ ಖಾಸಗಿ ಸಂಸ್ಥೆಗಳು ಹಾಗೂ ಖಾಸಗಿ ಶಾಲೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪ್ರಗತಿ ಪರಿಶೀಲಿಸಿ ಶೀಘ್ರ ವರದಿ ಸಲ್ಲಿಸುವಂತೆ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ಕನ್ನಡ ಸಂಸ್ಕೃತಿ ಇಲಾಖೆ ಕೇಂದ್ರ ಕಚೇರಿ, ಕನ್ನಡ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಕನ್ನಡ ಭಾಷೆಯ ಅಸ್ಮಿತೆ ಜೊತೆಗೆ ನಾಡು-ನುಡಿ-ಪರಂಪರೆಯ ಉಳಿವಿಗೆ ಅಗತ್ಯ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಕರೆ ನೀಡಿದರು.

ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅನುಮೋದನೆಗೊಂಡ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸುವ ಕೆಲಸಕ್ಕೆ ವೇಗ ನೀಡಿ, ಕಾಲಮಿತಿಯಲ್ಲಿ ಕಾಯ್ದೆಗಳು ರೂಪುಗೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ಮಟ್ಟದ ಉತ್ಸವಗಳನ್ನು ಇನ್ನೂ ಹೆಚ್ಚು ಆಕರ್ಷಣೀಯವಾಗಿಸುವಂತೆ ರೂಪುರೇಷೆ ಸಿದ್ಧಪಡಿಸಿ ಅದನ್ನು ರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕೆಂದು ಸೂಚಿಸಿದರು. ಈ ಉತ್ಸವಗಳ ಮೂಲಕ ಪ್ರತೀ ಜಿಲ್ಲೆಯ ಜೀವಂತಿಕೆ ಉಳಿಸಬೇಕು, ಹಾಗೆಯೇ ಇದಕ್ಕೆ ಪೂರಕವಾಗಿ ಪ್ರವಾಸೋದ್ಯಮ ಇಲಾಖೆಯ ಸಹಯೋಗ ಪಡೆಯಬೇಕೆಂದು ಹೇಳಿದರು.

ಇದೇ ವೇಳೆ ಖಾಸಗಿ ಸಂಸ್ಥೆಗಳಲ್ಲಿ ಹಾಗೂ ಖಾಸಗೀ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸುವುದರ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಇಲಾಖೆಗಳು ಪರಿಶೀಲನೆ ನಡೆಸಬೇಕು. ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ದೊರಕಿಸಬೇಕಾದ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೆಚ್ಚು ಶ್ರಮ ವಹಿಸಬೇಕು. ಅದಕ್ಕೆ ಸರ್ಕಾರದಿಂದ ಬೇಕಾದ ಕಾನೂನಾತ್ಮಕ ನೆರವನ್ನು ಒದಗಿಸಲು ಶೀಘ್ರದಲ್ಲಿ ಸಂಬಂಧಪಟ್ಟವರ ಸಭೆ ಕರೆಯಲಾಗುವುದೆಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಬೆಂಗಳೂರು ಅಭಿವೃದ್ಧಿಗಾಗಿ ಮಾಜಿ ಮೇಯರ್‌ಗಳ ಸಲಹೆ ಪಡೆದಿರುವೆ: ಡಿಸಿಎಂ ಶಿವಕುಮಾರ್‌

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲು ಕ್ರಮವಹಿಸಲಾಗುವುದು ಎಂದ ಅವರು ತಮ್ಮ ಭೇಟಿ ವೇಳೆ ಹಾರ ತುರಾಯಿ ಬದಲು ಪುಸ್ತಕ ನೀಡಿ, ನಾನದನ್ನು ಓದುವ ಮಕ್ಕಳಿಗೆ ಅಥವಾ ಗ್ರಂಥಾಲಯಕ್ಕೆ ನೀಡುವೆ. ಇದರ ಮೂಲಕ ಪುಸ್ತಕ ಪ್ರಕಾಶಕರಿಗೆ, ಮಾರಾಟಗಾರರಿಗೆ ಹಾಗೂ ಸಾಹಿತಿಗಳಿಗೆ ನೆರವಾಗುವುದಲ್ಲದೆ ಪುಸ್ತಕೋದ್ಯಮದ ಬೆಳವಣಿಗೆಗೂ ಅನುಕೂಲವಾಗುತ್ತದೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು...

ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು...