ಮುಖ್ಯ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ: ಯಾರು ಈ ಜ್ಞಾನೇಶ್ ಕುಮಾರ್?

Date:

Advertisements
ಬಿಜೆಪಿಗೆ ಬೇಕಾಗಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ಧತಿ ಮಾಡುವುದು. ಅದನ್ನು ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಯಶಸ್ವಿಯಾಗಿ ನಿರ್ವಹಿಸಿದ್ದರು. ಆ ಕಾರಣಕ್ಕಾಗಿಯೇ ಅವರನ್ನು ನಿವೃತ್ತಿಯ ನಂತರ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ...

ಭಾರತೀಯ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ, ನಿವೃತ್ತ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಇವರ ಅವಧಿ 2029ರ ಜನವರಿ 26ರವರೆಗೆ ಇರಲಿದೆ ಎಂದು ಆಯೋಗ ತಿಳಿಸಿದೆ.  

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಜ್ಞಾನೇಶ್ ಕುಮಾರ್, ‘ಮತದಾನದ ಮೊದಲ ಹೆಜ್ಜೆ ರಾಷ್ಟ್ರ ನಿರ್ಮಾಣ. ಆದ್ದರಿಂದ ಹದಿನೆಂಟು ವರ್ಷ ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರನಾಗಬೇಕು. ಮತ ಚಲಾಯಿಸಬೇಕು. ಭಾರತದ ಸಂವಿಧಾನದ ಅನುಸಾರವಾಗಿ ಭಾರತದ ಚುನಾವಣಾ ಆಯೋಗವು ಮತದಾರರೊಂದಿಗೆ ಇದೆ ಮತ್ತು ಯಾವಾಗಲೂ ಇರುತ್ತದೆ’ ಎಂದಿದ್ದಾರೆ.

ಕೇಂದ್ರ ಸರ್ಕಾರವು 2023ರ ಡಿಸೆಂಬರ್‌ನಲ್ಲಿ ‘ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ನಿಬಂಧನೆಗಳು ಹಾಗೂ ಅಧಿಕಾರ) ಕಾಯ್ದೆ–2023’ ಅನ್ನು ರೂಪಿಸಿತ್ತು. ಸಿಇಸಿ ಆಯ್ಕೆ ಮಾಡುವ ಸಮಿತಿಯಲ್ಲಿ ಪ್ರಧಾನಿ, ಸಿಜೆಐ ಮತ್ತು ವಿರೋಧ ಪಕ್ಷದ ನಾಯಕ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

Advertisements

ಆದರೆ, ಕೇಂದ್ರ ಸರ್ಕಾರದ ನೂತನ ಕಾಯ್ದೆ ಪ್ರಕಾರ, ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿಯವರನ್ನು ಕೈಬಿಟ್ಟು, ಬದಲಿಗೆ ಕೇಂದ್ರ ಸಚಿವರೊಬ್ಬರನ್ನು ಸದಸ್ಯರನ್ನಾಗಿಸಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಆಯ್ಕೆ ಸಮಿತಿಯು ಜ್ಞಾನೇಶ್‌ ಕುಮಾರ್‌ ಆಯ್ಕೆಗೆ ಅನುಮೋದನೆ ನೀಡಿತ್ತು.

ನೂತನ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗಾಗಿ ಫೆ.17ರಂದು ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ. ಬದಲಿಗೆ, ಆಯ್ಕೆ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆ. 19ರಂದು ನಡೆಸಲಿದೆ ಎಂದು ತಮ್ಮ ಭಿನ್ನಾಭಿಪ್ರಾಯವನ್ನು ಪತ್ರದ ಮೂಲಕ ದಾಖಲಿಸಿದ್ದರು.

ಅಷ್ಟೇ ಅಲ್ಲ, ಆಯ್ಕೆ ಪ್ರಕ್ರಿಯೆ ಸುಪ್ರೀಂ ಕೋರ್ಟ್‌ನಲ್ಲಿರುವಾಗಲೇ, ಮಧ್ಯರಾತ್ರಿ ನೂತನ ಸಿಇಸಿ ಆಯ್ಕೆ ಕುರಿತು ನಿರ್ಧಾರ ಕೈಗೊಂಡಿರುವುದು ಪ್ರಧಾನಿ ಹಾಗೂ ಗೃಹ ಸಚಿವರಿಗೆ ಗೌರವ ತರುವುದಿಲ್ಲ. ಇದು ವಿವೇಚನಾರಹಿತ ಎಂದು ರಾಹುಲ್ ಗಾಂಧಿ ತಿಳಿಸಿದ್ದರು.

ಇದನ್ನು ಓದಿದ್ದೀರಾ?:ಸಿಇಸಿ ಆಯ್ಕೆ; ಮೋಶಾ ಮಧ್ಯರಾತ್ರಿಯ ನಿರ್ಧಾರ ಅಗೌರವದಿಂದ ಕೂಡಿದೆ: ರಾಹುಲ್ ಗಾಂಧಿ

ಆದರೆ, ದೇಶದ ಸರ್ವೋಚ್ಚ ನ್ಯಾಯಾಲಯಕ್ಕಿಂತಲೂ ಸುಪ್ರೀಂ ಆಗಿರುವ ಪ್ರಧಾನಮಂತ್ರಿ ಮೋದಿಯವರು, ರಾತ್ರೋರಾತ್ರಿ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಿದ್ದಾರೆ. ಇಂದು ಅವರು ಅಧಿಕಾರ ಸ್ವೀಕರಿಸಿದ್ದೂ ಆಗಿದೆ.

ಯಾರು ಈ ಜ್ಞಾನೇಶ್ ಕುಮಾರ್

ಐಐಟಿ-ಕಾನ್ಪುರದ ಹಳೆಯ ವಿದ್ಯಾರ್ಥಿಯಾಗಿರುವ ಜ್ಞಾನೇಶ್ ಕುಮಾರ್, 1988ನೇ ಬ್ಯಾಚ್‌ನ ಕೇರಳ ಕೇಡರ್‌ನ ಐಎಎಸ್‌ ಅಧಿಕಾರಿ. ತಮ್ಮ ಐಎಎಸ್ ಸೇವಾವಧಿಯಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

ಕೇರಳದ ಎರ್ನಾಕುಳಂ ಜಿಲ್ಲೆಯಲ್ಲಿ ಸಹಾಯಕ ಕಲೆಕ್ಟರ್, ಅಡೂರ್‌ನ ಉಪ ಜಿಲ್ಲಾಧಿಕಾರಿ, ಕೇರಳ ರಾಜ್ಯ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಕೊಚ್ಚಿನ್ ಕಾರ್ಪೊರೇಶನ್‌ನ ಮುನ್ಸಿಪಲ್‌ನ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಜ್ಞಾನೇಶ್ ಕುಮಾರ್ ಅವರು‌ 2007 ರಿಂದ 2012 ರವರೆಗಿನ ಯುಪಿಎ ಸರ್ಕಾರದ ಅವಧಿಯಲ್ಲಿ, ಕೇಂದ್ರ ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನೆ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಕಾರ್ಯದರ್ಶಿಯಾಗಿ, ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿ, ಸಹಕಾರ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದತಿ ಸಂದರ್ಭದಲ್ಲಿ, ಜ್ಞಾನೇಶ್‌ ಕುಮಾರ್‌ ಅವರು ಕೇಂದ್ರ ಗೃಹ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದರು. ಈ ವೇಳೆ ಆರ್ಟಿಕಲ್‌ 370 ರದ್ದತಿ ಹಾಗೂ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸುವ ಕೇಂದ್ರದ ತೀರ್ಮಾನದಲ್ಲಿ, ಜ್ಞಾನೇಶ್‌ ಕುಮಾರ್‌ ಮಹತ್ವದ ಪಾತ್ರ ವಹಿಸಿದ್ದರು.

ಜ್ಞಾನೇಶ್‌ ಕುಮಾರ್‌ ಅವರು ಸಹಕಾರ ಕಾರ್ಯದರ್ಶಿಯಾಗಿದ್ದ ಸಂದರ್ಭದಲ್ಲಿ, ಕೇಂದ್ರ ಸಹಕಾರ ಸಚಿವಾಲಯವು ಮಲ್ಟಿ-ಸ್ಟೇಟ್ ಕೋ-ಆಪರೇಟಿವ್ ಸೊಸೈಟೀಸ್ (MSCS) (ತಿದ್ದುಪಡಿ) ಕಾಯಿದೆ, 2023 ಅನ್ನು ಜಾರಿಗೊಳಿಸಿತ್ತು. ಮೂರು ಹೊಸ ರಾಷ್ಟ್ರೀಯ ಸಹಕಾರ ಸಂಸ್ಥೆಗಳ ರಚನೆಯನ್ನು ಕೂಡ ಜ್ಞಾನೇಶ್‌ ಕುಮಾರ್‌ ನೇತೃತ್ವದಲ್ಲಿಯೇ ಮಾಡಲಾಗಿತ್ತು. ಸಹಾರಾ ಗ್ರೂಪ್‌ನ ನಾಲ್ಕು ಮಲ್ಟಿ-ಸ್ಟೇಟ್ ಕೋಆಪರೇಟಿವ್ ಸೊಸೈಟಿಗಳ ನಿಜವಾದ ಠೇವಣಿದಾರರಿಂದ ಕ್ಲೈಮ್‌ಗಳನ್ನು ಸಲ್ಲಿಸಲು, ಸಿಆರ್‌ಸಿಎಸ್-ಸಹಾರಾ ಮರುಪಾವತಿ ಪೋರ್ಟಲ್‌ನ್ನು ಪ್ರಾರಂಭಿಸುವಲ್ಲಿ ಜ್ಞಾನೇಶ್‌ ಕುಮಾರ್‌ ನಿರ್ಣಾಯಕ ಪಾತ್ರ ವಹಿಸಿದ್ದರು.

ಭಾರತೀಯ ಬೀಜ್ ಸಹಕಾರಿ ಸಮಿತಿ ಲಿಮಿಟೆಡ್ (BBSSL), ನ್ಯಾಷನಲ್ ಕೋಆಪರೇಟಿವ್ ಆರ್ಗಾನಿಕ್ಸ್ ಲಿಮಿಟೆಡ್ (NCOL) ಮತ್ತು ರಾಷ್ಟ್ರೀಯ ಸಹಕಾರಿ ರಫ್ತು ಲಿಮಿಟೆಡ್ (NCOL) ಹೆಸರಿನ ರಾಷ್ಟ್ರೀಯ ಸಹಕಾರ ಸಂಸ್ಥೆಗಳು, ಜ್ಞಾನೇಶ್‌ ಕುಮಾರ್‌ ಅಧಿಕಾರಾವಧಿಯಲ್ಲಿ ಅಸ್ತಿತ್ವಕ್ಕೆ ಬಂದಿದ್ದವು.

ಇದೆಲ್ಲಕ್ಕಿಂತ ಮುಖ್ಯವಾಗಿ ರಾಮ ಮಂದಿರ ನಿರ್ಮಾಣಕ್ಕಾಗಿ ರಚನೆಯಾಗಿದ್ದ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ರಚನೆಯಲ್ಲಿಯೂ ಜ್ಞಾನೇಶ್‌ ಕುಮಾರ್‌ ಅವರ ಪಾತ್ರವಿತ್ತು ಎಂದು ಹೇಳಲಾಗುತ್ತಿದೆ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ್ದ ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ಧತಿಗೆ ಒಬ್ಬ ನಂಬಿಕಸ್ಥ ಅಧಿಕಾರಿ ಬೇಕಿತ್ತು. ಅದಕ್ಕೆ ಸಿಕ್ಕವರು ಜ್ಞಾನೇಶ್ ಕುಮಾರ್. ಅದನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು.

ಅದರ ಪ್ರತಿಫಲವಾಗಿ ಕೇಂದ್ರದ ಬಿಜೆಪಿ ಸರ್ಕಾರ ಕಳೆದ ವರ್ಷ ಸೇವೆಯಿಂದ ನಿವೃತ್ತರಾದ ಜ್ಞಾನೇಶ್‌ ಕುಮಾರ್‌ ಅವರನ್ನು, 2024ರ ಮಾರ್ಚ್‌ 15ರಂದು ಚುನಾವಣಾ ಆಯುಕ್ತರನ್ನಾಗಿ (ಇಸಿ) ನೇಮಿಸಿತ್ತು. ಈಗ 26ನೆಯ ಮುಖ್ಯ ಚುನಾವಣಾ ಆಯುಕ್ತರನ್ನಾಗಿಸಿದೆ.

ಸಿಇಸಿ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಈ ವರ್ಷ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ. ಮುಂದಿನ ವರ್ಷ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಬಹುಶಃ, 2029ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಜ್ಞಾನೇಶ್ ಕುಮಾರ್ ಅವರೇ ಪ್ರಕಟಿಸಿದರೂ ಆಶ್ಚರ್ಯವಿಲ್ಲ ಎನ್ನಲಾಗುತ್ತಿದೆ.

Basavaraju Megalkeri
+ posts

ಲೇಖಕ, ಪತ್ರಕರ್ತ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಸವರಾಜು ಮೇಗಲಕೇರಿ
ಬಸವರಾಜು ಮೇಗಲಕೇರಿ
ಲೇಖಕ, ಪತ್ರಕರ್ತ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X