ರಾಮನಗರದ ವೈದ್ಯಕೀಯ ಕಾಲೇಜಿಗೆ ಕೆಂಗಲ್ ಹನುಮಂತಯ್ಯ ಹೆಸರು: ಸಿಎಂ ಬೊಮ್ಮಾಯಿ

Date:

  • ರಾಮನಗರದ ಬಡವರ ಚಿಕಿತ್ಸೆಗೆ ಇದು ದೊಡ್ಡ ಸಂಸ್ಥೆಯಾಗಲಿದೆ
  • 180 ಕೋಟಿ ರೂಗಳ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಸಿಎಂ ಅಡಿಗಲ್ಲು

ರಾಮನಗರ ವೈದ್ಯಕೀಯ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಈ ಭಾಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಹನುಮಂತಯ್ಯ ಅವರ ಹೆಸರನ್ನು ವೈದ್ಯಕೀಯ ಕಾಲೇಜಿಗೆ ಇಡಲಾಗುವುದು ಎಂದು ಸಿಎಂ ಹೇಳಿದರು. ಅದಕ್ಕೂ ಮೊದಲು ಈ ಕುರಿತು ಸಿಂಡಿಕೇಟ್ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗುವುದು ಎಂದು ತಿಳಿಸಿದರು.

ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ ಇಲ್ಲಿಗೆ ಒಂದು ಸಾವಿರ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ಬರಲಿದೆ.

ರಾಮನಗರದ ಬಡವರ ಚಿಕಿತ್ಸೆಗೆ ದೊಡ್ಡ ಸಂಸ್ಥೆಯಾಗಲಿದೆ. ಸಂಶೋಧನೆಗಳು ದೊಡ್ಡ ಪ್ರಮಾಣದಲ್ಲಿ ಆಗಲಿದೆ. ಇದು ಭಾರತದ ದೇಶದಲ್ಲಿಯೇ ದೊಡ್ಡ ಆರೋಗ್ಯ ಕೇಂದ್ರವಾಗಲಿದೆ ಎಂದು ಸಿಎಂ ನುಡಿದರು.

ಬಿಡದಿ, ಮಾಗಡಿಯನ್ನು ಮೆಟ್ರೋ ಮೂಲಕ ಬೆಂಗಳೂರಿಗೆ ಜೋಡಿಸಬೇಕು;
ಇಂಟಿಗ್ರೇಟೆಡ್ ಟೌನ್ ಶಿಪ್ ಕೆಲಸ ಈ ವರ್ಷದಿಂದ ಪ್ರಾರಂಭವಾಗಲಿದೆ. ಇದರ ಭಾಗವಾಗಿ ಬಿಡದಿ ಹಾಗೂ ಮಾಗಡಿಯವರೆಗೆ ಮೆಟ್ರೋ ಮಾರ್ಗವನ್ನು ವಿಸ್ತರಿಸಿ ರಾಮನಗರವನ್ನು ಬೆಂಗಳೂರಿಗೆ ಜೋಡಿಸುವ ಕೆಲಸವಾಗಬೇಕು ಎಂದು ಸಿಎಂ ಹೇಳಿದರು.

ಈ ಸುದ್ದಿ ಓದಿದ್ದೀರಾ? :ಡಾ.ಅಂಬರೀಶ್ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರೇಷ್ಮೆ ಮಾರುಕಟ್ಟೆಗೆ ಅಡಿಗಲ್ಲು;
ರಾಮನಗರದಲ್ಲಿ 180 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಅಡಿಗಲ್ಲು ಹಾಕಲಾಗಿದೆ. ಇಷ್ಟು ಬೃಹತ್ ರೇಷ್ಮೆ ಮಾರುಕಟ್ಟೆ ರಾಜ್ಯದಲ್ಲಿ ಎಲ್ಲೂ ಇಲ್ಲ. ರೇಷ್ಮೆ ಬೆಳೆಗಾರರಿಗೆ ಮಾರುಕಟ್ಟೆ ನಿಯಂತ್ರಣ ಕೈಗೆ ಬರಲಿದೆ ಎಂದರು.

ಹಾಗೆಯೇ ಮಾವಿನ ಸಂಸ್ಕರಣಾ ಘಟಕಗಳಿಗೆ ಚಾಲನೆ ನೀಡಲಾಗಿದ್ದು, 160 ಕೋಟಿ ಮೊತ್ತದ ಹೊಸ ಕಾಮಗಾರಿಯನ್ನು ಪ್ರಾರಂಭ ಮಾಡಲಾಗಿದೆ ಎಂದು ಸಿಎಂ ಹೇಳಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುತ್ತಿಗೆದಾರರ ಬಾಕಿ ಹಣ ಪಾವತಿ ವಿಚಾರ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

'ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?' ಹೈಕೋರ್ಟ್‌ ಕಿಡಿ ಬಾಕಿ ಪಾವತಿಯಲ್ಲೂ...

ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಪುಟ್ಟ ಕಂದಮ್ಮನಿಗೆ...

ಬಟ್ಟೆ ನೋಡಬೇಡಿ, ಮಾನವೀಯವಾಗಿ ಆರೋಗ್ಯ ಸೇವೆ ನೀಡಿ: ಸಿಎಂ ಸಿದ್ದರಾಮಯ್ಯ 

'ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ' ...

ಬೆಂಗಳೂರು | ಪ್ರಿಯಕರನ ಮೊಬೈಲ್‌ನಲ್ಲಿತ್ತು 13 ಸಾವಿರ ನಗ್ನ ಫೋಟೋ: ದೂರು ದಾಖಲಿಸಿದ ಪ್ರಿಯತಮೆ

ಸಹೋದ್ಯೋಗಿ, ಪ್ರಿಯತಮೆ ಸೇರಿದಂತೆ ಮಹಿಳೆಯರ 13,000ಕ್ಕೂ ಹೆಚ್ಚು ನಗ್ನ ಫೋಟೋಗಳನ್ನು ಮೊಬೈಲ್‌ನಲ್ಲಿ...