ಮಹಿಳೆಯರಿಗೆ ಉಚಿತ ಪ್ರಯಾಣ | ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ ಯೋಜನೆ’ಗೆ ಚಾಲನೆ

Date:

Advertisements
  • ಶಕ್ತಿ ಯೋಜನೆಯ ಲೋಗೋ ಮತ್ತು ಮಾದರಿ ಸ್ಮಾರ್ಟ್‌ ಕಾರ್ಡ್ ಅನಾವರಣ
  • ಮಧ್ಯಾಹ್ನ 1ಗಂಟೆಯಿಂದ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ

ರಾಜ್ಯದ ಎಲ್ಲ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರರು ಸೇರಿದಂತೆ) ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಕೂಲ ಮಾಡಿಕೊಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ ಯೋಜನೆ’ಗೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧದ ಪೂರ್ವದ್ವಾರದ ಮುಂಭಾಗದ ಗ್ರ್ಯಾಂಡ್‌ ಸ್ಟೆಪ್ಸ್‌ ಮೇಲೆ ಹಾಕಲಾಗಿದ್ದ ಬೃಹತ್‌ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮ್ಮುಖದಲ್ಲಿ ಶಕ್ತಿ ಯೋಜನೆಯ ಲೋಗೋ ಮತ್ತು ಮಾದರಿ ಸ್ಮಾರ್ಟ್‌ ಕಾರ್ಡ್ ಅನ್ನು ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 20 ದಿನ ಆಗಿದೆ. ನುಡಿದಂತೆ ನಡೆಯುತ್ತಿರುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್‌ ಸರ್ಕಾರ. 2013 ರಲ್ಲಿ 165 ಭರವಸೆ ಪೈಕಿ 158 ಭರವಸೆ ಈಡೇರಿಸಿದಂತಹ ಸರ್ಕಾರ ನಮ್ಮದು. ಇವತ್ತು ಮಧ್ಯಾಹ್ನ 1ಗಂಟೆಯಿಂದ ರಾಜ್ಯದ ಎಲ್ಲ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದು. ರಾಜ್ಯದಲ್ಲಿರುವ ಶೇ.50 ರಷ್ಟು ಮಹಿಳೆಯರಿಗೆ ಇದರ ಲಾಭ ಸಿಗಲಿದೆ” ಎಂದರು.

Advertisements

“ಮೂರು ತಿಂಗಳಲ್ಲಿ ಸ್ಮಾರ್ಟ್‌ ಕಾರ್ಡ್‌ ಕೊಡ್ತೀವಿ. ಅಲ್ಲಿಯವರೆಗೂ ಯಾವುದಾದರೂ ಒಂದು ದಾಖಲಾತಿ ತೋರಿಸಿ ಪ್ರಯಾಣ ಮಾಬಡಹುದು. ಸ್ಮಾರ್ಟ್‌ ಕಾರ್ಡ್‌ ಕೂಡ ಉಚಿತವಾಗಿ ಕೊಡುತ್ತೇವೆ. ಯಾರೂ ಅದಕ್ಕೆ ದುಡ್ಡು ಕೊಡಬೇಕಿಲ್ಲ. ಬಸ್‌ ಸ್ಟ್ಯಾಂಡಿಗೆ ಹೋಗಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ ನೀಡಿ ಹೋಗಿ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದೇವೆ. ಆಯಾ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಶಕ್ತಿ ಯೋಜನೆಗೆ ಏಕಕಾಲದಲ್ಲಿ ಚಾಲನೆ ನೀಡಲಿದ್ದಾರೆ” ಎಂದರು.

ಈ ಮೂಲಕ ಶಕ್ತಿ ಯೋಜನೆಯಡಿ ಇಂದಿನಿಂದ (ಜೂ.11) ಎಲ್ಲ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕ.ರಾ.ರ.ಸಾ ಸಂ, ಬಿಎಂಟಿಸಿ, ವಾ.ಕ.ರ.ಸಾ.ಸಂ ಹಾಗೂ ಕ.ಕ.ರ.ಸಾ.ಸಂ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಬಹುದು.

ಶಕ್ತಿ  ಯೋಜನೆ

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮುಂಗಾರು; ಕರ್ನಾಟಕದ ರೈತರಿಗೆ ‘ಹಿವ್ರೇ ಬಜಾರ್’ ಮಾದರಿಯಾಗಲಿ

ಸಾರಿಗೆ ಇಲಾಖೆಯ ಷರತ್ತುಗಳು

  • ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆ ಅನ್ವಯಿಸುತ್ತದೆ.
  • ಸಾರಿಗೆ ಸಂಸ್ಥೆಯ ಐಷಾರಾಮಿ ಬಸ್‍ಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್(ಎಸಿ ಬಸ್‌ಗಳು) ಬಸ್‍ಗಳಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ.
  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್ಸಾರ್ಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲ ಬಸ್‍ಗಳಲ್ಲಿ(ಎಸಿ, ಐಷರಾಮಿ ಬಸ್ ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.
  • ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು.
  • ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಶಕ್ತಿ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.
  • ಶಕ್ತಿ ಸ್ಮಾರ್ಟ್ ಕಾರ್ಡ್‍ನ್ನು ವಿತರಿಸುವವರೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಇಲಾಖೆ, ಸರಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿದ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X