ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ: ಸಿಎಂ ಸಿದ್ದರಾಮಯ್ಯ

Date:

Advertisements
  • ನಾರಾಯಣಗುರು ಜಯಂತಿ ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ
  • ಆರ್ಯ ಈಡಿಗ ಅಭಿವೃದ್ಧಿ ನಿಗಮ, ನಾರಾಯಣಗುರು ಭವನ ನಿರ್ಮಿಸಲು ಒಪ್ಪಿಗೆ

ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ. ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು ದೇವರಿಗೆ ಮಾಡುವ ಅವಮಾನ. ದೇವರನ್ನೇ ಮುಂದಿಟ್ಟುಕೊಂಡು ಜಾತಿ, ಧರ್ಮ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ನಾರಾಯಣಗುರು ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

“ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ ನಾರಾಯಣಗುರು ಜಯಂತಿಯನ್ನು ಸರ್ಕಾರದಿಂದಲೇ ಆಚರಿಸುವ ಆದೇಶ ಹೊರಡಿಸಿದ್ದೆ. ನಾರಾಯಣಗುರು ಒಂದು ಜಾತಿ-ಒಂದು ಧರ್ಮಕ್ಕೆ ಸಿಕ್ಕಿಕೊಳ್ಳದೆ ವಿಶ್ವ ಮಾನವರಾದವರು. ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು” ಎಂದು ಬಣ್ಣಿಸಿದರು.

Advertisements

“ಸಮಾಜದ ತಾರತಮ್ಯಗಳಿಗೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು. ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ‌ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿದರು. ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು” ಎಂದು ಹಲವು ನಿದರ್ಶನಗಳನ್ನು ಉದಾಹರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

ಈಡಿಗ ಅಭಿವೃದ್ಧಿ ನಿಗಮ, ಭವನಕ್ಕೆ ಅನುದಾನ

ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಗೆ ಒಪ್ಪಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಎರಡು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಹೆಚ್.ಆರ್.ಗವಿಯಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷ ಡಾ.ಎಂ.ತಿಮ್ಮೇಗೌಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X