ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆ: ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಿ ಎಂದ ಸಿಎಂ

Date:

Advertisements

ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿರ್ಭಯಾ ನಿಧಿ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯೋಜಿಸಿದ್ದ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು. ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, ಅದು ಉಪಯೋಗಕ್ಕೆ ಬಂದಾಗ ಮಾತ್ರ ಸಾರ್ಥಕವಾಗುತ್ತದೆ. 668 ಕೋಟಿ ವೆಚ್ಚದಲ್ಲಿ ಕಮಂಡ್ ಸೆಂಟರ್ ನಿರ್ಮಾಣವಾಗಿದೆ. ನಿರೀಕ್ಷಿತ ಫಲ ಸಿಕ್ಕದೇ ಹೋದರೆ ಕಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisements

ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ, ಮಹಿಳೆಯರ ಮೇಲೆ ದೌರ್ಜನ್ಯ, ಒಂಟಿ ಮನೆಗಳಿರುವಲ್ಲಿ ವೃದ್ಧರು ಒಂಟಿಯಾಗಿರುವಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಗಮನ ನೀಡಬೇಕು ಎಂದರು.

ಅಪರಾಧವಾದ ನಂತರ ಶಿಕ್ಷೆ ಕೊಡುವುದು ಒಂದು ಭಾಗ. ಆದರೆ ಅಪರಾಧಗಳು ನಡೆಯದ ರೀತಿ ತಡೆಯಬೇಕು. ಬೆಂಗಳೂರಿನಲ್ಲಿ ಕೊಲೆಯಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಕೊಲೆ ಪ್ರಕರಣವನ್ನು ಉದಾಹರಿಸಿದ ಮುಖ್ಯಮಂತ್ರಿಗಳು ಇಂಥವು ನಡೆಯದಂತೆ ನೋಡಿಕೊಳ್ಳಬೇಕು. ಅದಕ್ಕೆ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕೆಂದರು.

ನಗರದಲ್ಲಿ ಮೊದಲ ಬಾರಿ ಕಮಾಂಡ್ ಸೆಂಟರ್ ಸ್ಥಾಪನೆಯಾಗಿದ್ದು ಇದರ ಅವಶ್ಯಕತೆ ಇರುವವರಿಗೆ ಇದರ ಪ್ರಯೋಜನ ದೊರಕಲಿ. ಅತ್ಯಾಧುನಿಕ ಉಪಕರಣಗಳನ್ನು ಕೇಂದ್ರದಲ್ಲಿ ಅಳವಡಿಸಲಾಗಿದ್ದು ಇವೆಲ್ಲವೂ ಉಪಯೋಗವಾಗಬೇಕು. ಹಾಗಾದರೆ ಮಾತ್ರ ಕಮಾಂಡ್ ಸೆಂಟರ್‌ನಿಂದ ಬೆಂಗಳೂರು ನಿಜವಾಗಿಯೂ ಸುರಕ್ಷಿತ ನಗರವೆನಿಸುತ್ತದೆ. ಪೊಲೀಸ್ ಇಲಾಖೆಗೂ ಉತ್ತಮ ಹೆಸರು ಬರಲಿದೆ ಎಂದರು.

ಈ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X