ಸಂಶೋಧನೆಗೆ ಪೂರಕವಾಗಿ ಮೂಲಸೌಕರ್ಯಕ್ಕೆ ಒತ್ತು: ‘ಬೆಂಗಳೂರು ಟೆಕ್ ಸಮ್ಮಿಟ್’ ಉದ್ಘಾಟಿಸಿ ಸಿಎಂ

Date:

ಕರ್ನಾಟಕವು ಜಾಗತಿಕ ತಂತ್ರಜ್ಞಾನ ಮತ್ತು ಸ್ಟಾರ್ಟಪ್‌ಗಳಿಗೆ ಹೆಚ್ಚು ಬೇಡಿಕೆಯಿರುವ ತಾಣವಾಗಿ ಗುರುತಿಸಲ್ಪಟ್ಟಿದೆ. ಹಾಗಾಗಿ, ರಾಜ್ಯದಲ್ಲಿ ಸಂಶೋಧನೆಗೆ ಪೂರಕವಾದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ತಿಳಿಸಿದರು.

ಬೆಂಗಳೂರಿನ ಅರಮನೆ ಆವರಣದಲ್ಲಿ ಇಂದು ಆರಂಭಗೊಂಡ ಮೂರು ದಿನಗಳ(ನ.29-ಡಿ.1) ‘ಬೆಂಗಳೂರು ಟೆಕ್ ಸಮ್ಮಿಟ್-2023’ ಉದ್ಘಾಟಿಸಿ ಅವರು ಮಾತನಾಡಿದರು.

‘ಕರ್ನಾಟಕವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದ್ದು, ಈ ಕ್ಷೇತ್ರದ 5,500 ಕಂಪನಿಗಳು ರಾಜ್ಯದಲ್ಲಿವೆ. 750 ಬಹುರಾಷ್ಟ್ರೀಯ ಕಂಪನಿಗಳೂ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರವು ರಾಜ್ಯದಲ್ಲಿ 43 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಿಗಳನ್ನು ಹೊಂದಿದೆ. ನಮ್ಮ ರಾಜ್ಯವು ಈ ವಲಯದ ಯಶಸ್ಸಿನ ಹಿಂದಿನ ಪ್ರೇರಕ ಶಕ್ತಿಯಾಗಿ ಗುರುತಿಸಿಕೊಂಡಿದೆ. ರಾಷ್ಟ್ರದ ರಫ್ತುಗಳಿಗೆ ಸುಮಾರು 85 ಬಿಲಿಯನ್ ಡಾಲರ್‍‌ನಷ್ಟು ಕೊಡುಗೆ ಕರ್ನಾಟಕ ನೀಡಿದೆ’ ಎಂದು ಸಿಎಂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಮುಂದಿನ ಹಂತದ ಸಂಶೋಧನೆಯನ್ನು ನಮ್ಮ ಸರ್ಕಾರವು ಉತ್ತೇಜಿಸಲಿದೆ. ಇದಕ್ಕಾಗಿ ಉದ್ದಿಮೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ನಡುವೆ ಸಮನ್ವಯ ಸಾಧಿಸಲು ಆದ್ಯತೆಗೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ನೀತಿಗಳಲ್ಲೂ ಅಗತ್ಯ ಬದಲಾವಣೆ ಮಾಡಲಾಗುವುದು. ರಾಜ್ಯ ಸರ್ಕಾರವು ಉದ್ಯಮಸ್ನೇಹಿ ವಾತಾವರಣ ನಿರ್ಮಾಣಕ್ಕೆ ಒತ್ತು ನೀಡುತ್ತಿದೆ’ ಎಂದು ಸಿದ್ದರಾಮಯ್ಯ ತಿಳಿಸಿದರು.

‘ಬೆಂಗಳೂರಿನ ಹೊರಗೆ ಹೂಡಿಕೆದಾರರಿಗೆ ವಿಶೇಷ ಉತ್ತೇಜನ ನೀಡುವ ಮೂಲಕ ಡಿಜಿಟಲ್ ಬೆಳವಣಿಗೆಯಲ್ಲಿನ ಅಸಮತೋಲನ ತಗ್ಗಿಸಲಾಗುತ್ತಿದೆ. ದೇಶದಲ್ಲೇ ಮೊದಲು ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಿದ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕಕ್ಕೆ ಇದೆ. ಶೀಘ್ರದಲ್ಲೇ ಹೊಸ ಜೈವಿಕ ತಂತ್ರಜ್ಞಾನಯನ್ನು ನೀತಿ ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.

ತಂತ್ರಜ್ಞಾನ ವಿಕಸನಗೊಳ್ಳುತ್ತಿರುವುದನ್ನು ಗಮನಿಸಿ, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (AVGC) ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಂಡಿದ್ದೇವೆ. ಅನಿಮೇಷನ್ ವಿಷ್ಯುವಲ್ ಎಫೆಕ್ಟ್, ಗೇಮಿಂಗ್‌ ಮತ್ತು ಕಾಮಿಕ್ಸ್ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿವೆ. ಈ ಕ್ಷೇತ್ರವನ್ನು ಉತ್ತೇಜಿಸುವುದಕ್ಕಾಗಿಯೇ ಎವಿಜಿಸಿ- ಎಕ್ಸ್ ಆರ್ ನೀತಿಯನ್ನೂ ಜಾರಿಗೊಳಿಸಲಾಗುವುದು ಎಂದರು.

ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ 85,000 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ರಫ್ತು ಮಾಡುತ್ತಿದೆ. ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಟೆಕ್ ಶೃಂಗಸಭೆಯು ಕೇವಲ ಒಂದು ಕಾರ್ಯಕ್ರಮವಲ್ಲ. ಇದು ನಮ್ಮ ಸಾಮೂಹಿಕ ದೃಷ್ಟಿ, ನಿರ್ಣಯ ಮತ್ತು ತಂತ್ರಜ್ಞಾನದವನ್ನು ಹೆಚ್ಚಿನ ಒಳಿತಿಗಾಗಿ ಬಳಸಿಕೊಳ್ಳುವ ಬದ್ಧತೆಯಾಗಿದೆ. ‘ಬ್ರೇಕಿಂಗ್ ಬೌಂಡರೀಸ್’ ಎಂಬ ಶೃಂಗಸಭೆಯ ಧ್ಯೇಯವು ನಮ್ಮ ರಾಜ್ಯವು ತಂತ್ರಜ್ಞಾನಕ್ಕೆ ನೀಡುತ್ತಿರುವ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಎಂ ಬಿ ಪಾಟೀಲ್ ಹಾಗೂ ವಿವಿಧ ಕಂಪನಿಗಳ ಉದ್ಯಮಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಲು ಸರ್ಕಾರದಿಂದ ನಿರ್ದೇಶನ: ಆರ್‌ ಅಶೋಕ್‌ ಆರೋಪ

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ...

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

ಲಾಲೂ ಪ್ರಸಾದ್ ಟೀಕೆಯನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ: ‘ಮೋದಿ ಕಾ ಪರಿವಾರ್’ ಅಭಿಯಾನ!

ನಿನ್ನೆ ಪಾಟ್ನಾದಲ್ಲಿ ನಡೆದಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಷ್ಟ್ರೀಯ ಜನತಾ ದಳ...