ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ಸಾಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements
  • ಹಿರಿಯರ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ನಾವು ಹಿರಿಯರಿಗೆ ನೀಡುವ ಗೌರವ: ಸಿಎಂ
  • ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

“ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ” ಎಂದರು.

Advertisements

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು.

ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್‌ನಲ್ಲಿ ಹೆಚ್ಚಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X