ನಾಲ್ಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯನ್ನು ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಮಾಡಲಾಯಿತು.

ಶಕ್ತಿ ಯೋಜನೆ:
ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ ಎಂದು ಸಿಎಂ ಮಾಹಿತಿ ನೀಡಿದರು.

ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ, ಏಪ್ರಿಲ್‌ 2023ರಲ್ಲಿ 84.17 ಲಕ್ಷವಿತ್ತು. ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿವರೆಗೆ ಪ್ರಯಾಣಿಕರ ಹೆಚ್ಚಳವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌.ವಿ. ಪ್ರಸಾದ್‌, ಕೆ.ಎಸ್.ಆರ್‌.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌, ಬಿ.ಎಂ.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಅನ್ನಭಾಗ್ಯ ಯೋಜನೆ:
ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಯಿತು. ಡಿಸೆಂಬರ್‌ 31ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ಜಿ.ಸಿ. ಪ್ರಕಾಶ್‌, ಆಯುಕ್ತರಾದ ಕನಗವಲ್ಲಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಗೃಹ ಜ್ಯೋತಿ:

ಗೃಹಜ್ಯೋತಿ ಯೋಜನೆಯಡಿ ಈವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ನಿಂದ ಈವರೆಗೆ 2900 ಕೋಟಿ ರೂ. ಭರಿಸಲಾಗಿದೆ.

ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿಯೇ ಗೃಹ ಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಗೃಹಲಕ್ಷ್ಮಿ ಯೋಜನೆ:
ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ.

2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದರು.

ಡಿಸೆಂಬರ್‌ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಲು ಸೂಚಿಸಿದರು. ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಿ.ಸಿ.ಪ್ರಕಾಶ್ ನಿರ್ದೇಶಕಿ ಎಂ.ಎಸ್. ಅರ್ಚನಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಎಲ್ಲ ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...